Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM

ಬೆಂಗಳೂರು ಕಾಲ್ತುಳಿತ ದುರಂತ ಕೇಸಲ್ಲಿ ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಿ: ಅರಗ ಜ್ಞಾನೇಂದ್ರ ಆಗ್ರಹ

07/06/2025 6:22 PM

BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು |Sonia Gandhi

07/06/2025 6:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮಂಡ್ಯ ಲೋಕಸಭಾ ಟಿಕೆಟ್’ಗಾಗಿ ‘ಸುಮಲತಾ’ ಸರ್ಕಸ್: ‘ಪ್ರಧಾನಿ ಮೋದಿ’ ಭೇಟಿ
KARNATAKA

‘ಮಂಡ್ಯ ಲೋಕಸಭಾ ಟಿಕೆಟ್’ಗಾಗಿ ‘ಸುಮಲತಾ’ ಸರ್ಕಸ್: ‘ಪ್ರಧಾನಿ ಮೋದಿ’ ಭೇಟಿ

By kannadanewsnow0909/02/2024 3:06 PM

ನವದೆಹಲಿ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಈ ಹಿಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಂತ ಸುಮಲತಾ, ಈಗ ರಾಜಕೀಯ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋ ಕಸರತ್ತು ನಡೆಸುತ್ತಿದ್ದಾರೆ. ಈ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿಯ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ.

ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಂಸದೆ ಸುಮಲತಾ ಅಂಬರೀಶ್ ಭೇಟಿಯಾಗಿದ್ದಾರೆ. ಅವರೊಂದಿಗೆ ಕೆಲ ಕಾಲ ಮಂಡ್ಯ ರಾಜಕೀಯ, ಲೋಕಸಭಾ ಚುನಾವಣೆಯ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ನನ್ನ ಧನ್ಯವಾದಗಳು ಅಂತ ತಿಳಿಸಿದ್ದಾರೆ.

ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸನ್ಮಾನ್ಯ ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ ಎಂದು ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @PMOIndia ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು. @narendramodi ಶ್ರೀ ನರೇಂದ್ರ ಮೋದಿರವರು ವಿಶ್ವದ ಮಹಾನ್… pic.twitter.com/60y9sX7H53

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) February 9, 2024

ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ. ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದಿದ್ದಾರೆ.

17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ. ಈ ಬಾರಿಯ ತಮ್ಮ ಭೇಟಿ ಸಂಧರ್ಭದಲ್ಲಿ “ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ” ಎಂಬ ನಿಮ್ಮ ಮಾತುಗಳು ನನಗೆ ಸ್ಪೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ ಎಂದು ಹೇಳಿದ್ದಾರೆ.

ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ Snapchat ಸರ್ವರ್ ಡೌನ್ : ಕಂಟೆಂಟ್ ‘ಅಪ್‌ಲೋಡ್’ ಸಮಸ್ಯೆ ಎದುರಿಸಿದ ಬಳಕೆದಾರರು

ಕೆಂಪಣ್ಣ ಕಮೀಷನ್ ಆರೋಪ: ಸಿಎಂ ಸಿದ್ಧರಾಮಯ್ಯ, ಡಿಕೆಶಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM1 Min Read

ಬೆಂಗಳೂರು ಕಾಲ್ತುಳಿತ ದುರಂತ ಕೇಸಲ್ಲಿ ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಿ: ಅರಗ ಜ್ಞಾನೇಂದ್ರ ಆಗ್ರಹ

07/06/2025 6:22 PM1 Min Read

ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ: ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಬಿಸಿಸಿಐ ಮೊದಲ ಪ್ರತಿಕ್ರಿಯೆ

07/06/2025 6:19 PM1 Min Read
Recent News

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM

ಬೆಂಗಳೂರು ಕಾಲ್ತುಳಿತ ದುರಂತ ಕೇಸಲ್ಲಿ ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಿ: ಅರಗ ಜ್ಞಾನೇಂದ್ರ ಆಗ್ರಹ

07/06/2025 6:22 PM

BREAKING : ಕಾಂಗ್ರೆಸ್ ನಾಯಕಿ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು |Sonia Gandhi

07/06/2025 6:21 PM

ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ: ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಬಿಸಿಸಿಐ ಮೊದಲ ಪ್ರತಿಕ್ರಿಯೆ

07/06/2025 6:19 PM
State News
KARNATAKA

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

By kannadanewsnow0907/06/2025 6:33 PM KARNATAKA 1 Min Read

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಕೇಂದ್ರ ಯೋಜನೆಯ ವ್ಯಾಪ್ತಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ…

ಬೆಂಗಳೂರು ಕಾಲ್ತುಳಿತ ದುರಂತ ಕೇಸಲ್ಲಿ ಎ1 ಸಿಎಂ, ಎ2 ಡಿಸಿಎಂ, ಎ3 ಗೃಹ ಸಚಿವರನ್ನು ಮಾಡಿ: ಅರಗ ಜ್ಞಾನೇಂದ್ರ ಆಗ್ರಹ

07/06/2025 6:22 PM

ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ: ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಬಿಸಿಸಿಐ ಮೊದಲ ಪ್ರತಿಕ್ರಿಯೆ

07/06/2025 6:19 PM

ಲಕ್ಷ, ಕೋಟಿ ಸಾಲವಿರಲಿ, ಈ ಎಲೆ, ಲವಂಗ, ಏಲಕ್ಕಿಯ ಪ್ರಯೋಗ ಮಾಡಿ, ತೀರೋದು ಗ್ಯಾರಂಟಿ

07/06/2025 6:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.