ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ. ರಾಜಕೀಯವಾಗಿ ಈ ಹಿಂದೆ ಏನೋ ಆಗಿತ್ತು. ಈಗ ಅದು ಮುಗಿದ ಕಾಲ. ನಾನು ಸಂಘರ್ಷವನ್ನು ಮುಂದುವರಿಸಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಸುಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಭ್ಯರ್ಥಿ ಘೋಷಣೆ ಮಾಡದ ಬಗ್ಗೆ ಕಾರ್ಯಕರ್ತರಲ್ಲ ಗೊಂದಲವಿದೆ. ಮಂಡ್ಯ ಕ್ಷೇತ್ರ ನಿರ್ಲಕ್ಷ ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಹಲವರಲ್ಲಿ ಇದೆ.ಇಂದಿನ ಸಭೆಯಲ್ಲಿ ನಾವು ಸಂದೇಶ ಕೊಡುವುದಕ್ಕಿಂತ ನೀವೇ ಕೊಟ್ಟಿದ್ದೀರಿ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕೆಲವು ಗೊಂದಲ ಇತ್ತು. ಹೀಗಾಗಿ ನಾನೇ ಹಾಸನಕ್ಕೆ ಹೋಗಿ ಅಪಪ್ರಚಾರ ಅಂತ್ಯವಾಡಿದ್ದೇನೆ ಎಂದು ಅವರು ತಿಳಿಸಿದರು.

ಬೆಂಗಳೂರಲ್ಲಿ ‘ಕಿಲ್ಲರ್ BMTC’ಗೆ ಮತ್ತೊಂದು ಬಲಿ: ರಸ್ತೆದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

ಎಚ್ ಡಿ ದೇವೇಗೌಡರಿಗೆ ರಾಜಕೀಯವಾಗಿ ಹಾಸನಕ್ಕಿಂತ ಮಂಡ್ಯ ಹೆಚ್ಚು ಶಕ್ತಿ ನೀಡಿದೆ.ನಾನು ನನ್ನ ಕುಟುಂಬದ ಯಾರು ಯಾರಿಗೂ ದ್ರೋಹ ಮಾಡಿದವರಲ್ಲ. ಬೆಳೆಯುವರನ್ನು ಹಿಂದೆ ನಿಂತು ಶಕ್ತಿ ತುಂಬಿದ್ದೇವೆ. ನಾನು ಅಥವಾ ನಿಖಿಲ್ ಸ್ಪರ್ಧಿಯುಸುವ ನಿಮ್ಮ ಮಾತಿಗೆ ಶಿರಬಾಗಿ ನಮಸ್ಕರಿಸುತ್ತೇನೆ. ನಿಮ್ಮ ಮಾತಿಗೆ ಅಪಚಾರ ಮಾಡಲು ಹೋಗುವುದಿಲ್ಲ ಎಂದು ತಿಳಿಸಿದರು.

ಕೇಂದ್ರದ ‘ಅನುದಾನ’ ತಾರತಮ್ಯದಿಂದ ರಾಜ್ಯಕ್ಕೆ ‘ಆರ್ಥಿಕ ಸವಾಲು’ಗಳು ಎದುರಾಗಿವೆ : ಕೃಷ್ಣ ಭೈರೇಗೌಡ ಆಕ್ರೋಶ

ಚುನಾವಣೆ ವಿಷಯದಲ್ಲಿ ಒಂದು ಮಾತು ಹೇಳುತ್ತೇನೆ. ಅಂಬರೀಶ್, ನಾವೆಲ್ಲ ಒಟ್ಟಾಗಿ, ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು. ನಾನು ಸಿಎಂ ಆಗಿದ್ದಾಗಲೇ ರಾಜ್‌ಕುಮಾರ್ ಹಾಗೂ ಅಂಬರೀಶ್ ನಿಧನರಾದರು. ರಾಜ್ ಸಮಾಧಿ ಮಾಡಿದ್ದು ನಾನೇ. ಅಂಬರೀಶ್ ಸಮಾಧಿಗೂ ಜಾಗ ಗುರುತಿಸಿ ಗೌರವ ಕೊಟ್ಟೆ. ವಿಷ್ಣುವರ್ಧನ್ ಸಮಾಧಿ ಸ್ಮಾರಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದು ಹೇಳಿದರು.
Share.
Exit mobile version