ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ : ‘ಸಿಬಿಐ’ ತನಿಖೆಗೆ ಒಪ್ಪಿಸುವಂತೆ ಸಂಸದೆ ‘ಸುಮಲತಾ’ ಆಗ್ರಹ

ಮಂಡ್ಯ :  ಬೇನಾಮಿ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ದೊಡ್ಡ ದೊಡ್ಡವರೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದು,  ಸಿಬಿಐ ತನಿಖೆಗೆ ಒಪ್ಪಿಸುವಂತೆ ಸಂಸದೆ ಸುಮಲತಾ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಂದು ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಂಡ್ಯ ಸಂಸದೆ ಸುಮಲತಾ ಸುದ್ದಿಗಾರರ ಜೊತೆ ಮಾತನಾಡಿದರು.   ಹಂಗರಹಳ್ಳಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ದಿನದಲ್ಲಿ 500 ಲಾರಿಗಳು ಹೋಗುತ್ತಿದೆ. ಇದರಿಂದ ಜನರಿಗೆ ಉಸಿರಾಟ ಸಮಸ್ಯೆಯಾಗುತ್ತಿದೆ. ಇದನ್ನು ಯಾರು ಪ್ರಶ್ನೆ ಮಾಡುತ್ತಿಲ್ಲವಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING NEWS : ಮೋದಿ … Continue reading ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ : ‘ಸಿಬಿಐ’ ತನಿಖೆಗೆ ಒಪ್ಪಿಸುವಂತೆ ಸಂಸದೆ ‘ಸುಮಲತಾ’ ಆಗ್ರಹ