ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆಗೊಂಡರು. ಸಾವಿರಕ್ಕೂ ಹೆಚ್ಚು ಬೆಂಬಲಿಗರೊಡನೆ ತೆರಳಿ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಚ್ಚಿದಾನಂದ ಅವರು ಪಕ್ಷ ಸೇರ್ಪಡೆಗೊಂಡರು.
BIGG NEWS : ಚಿತ್ರದುರ್ಗದಲ್ಲಿ ಜ.8 ರಂದು ಕಾಂಗ್ರೆಸ್ `SC-ST’ ಐಕ್ಯತಾ ಸಮಾವೇಶ
ಈ ಕಾರ್ಯಕ್ರಮದಲ್ಲಿ ಸಚಿವರಾದ ಅಶ್ವಥ್ ನಾರಾಯಣ್ , ಗೋಪಾಲಯ್ಯ, ನಾರಯಣಗೌಡ, ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್, ಶಾಸಕರಾದ ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ ಭಾಗಿಯಾದರು. ಇದೇ ವೇಳೆ ಮಂಡ್ಯ ಜಿಲ್ಲೆಯ ಹಲವು ಮುಖಂಡರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆಯಿತು.ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಸಚ್ಚಿದಾನಂದ, ಪ್ರಧಾನಿ ನರೇಂದ್ರ ಮೋದಿಯ ನಾಯಕತ್ವವನ್ನು ಒಪ್ಪಿ ನಾನು ಬಿಜೆಪಿ ಸೇರಿದ್ದೇನೆ. ಮುಂದೆ ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸಿ ಕೊಡ್ತೀವಿ ಎಂದರು.
ಸಚ್ಚಿದಾನಂದ ಅವರು ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕಳೆದ ಸಂಸದ ಚುನಾವಣೆಯಲ್ಲಿ ಸುಮಲತಾ ಪರ ನಿಂತು ಕಾಂಗ್ರೆಸ್ನಿಂದ ಉಚ್ಛಾಟನೆ ಮಾಡಲಾಯಿತು. ಇದೀಗ ಸಂಸದೆ ಸುಮಲತಾ ಒಪ್ಪಿಗೆ ಪಡೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಯಾವುದೇ ಪಕ್ಷದಲ್ಲಿದ್ದರು ಸಚ್ಚಿದಾನಂದ ಬೆಂಬಲಿಸುವುದಾಗಿ ಸುಮಲತಾ ಹೇಳಿಕೊಂಡಿದ್ದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀ @BlrNirmal ಹಾಗೂ ಸಚಿವರು & ಪ್ರಮುಖರ ಉಪಸ್ಥಿತಿಯಲ್ಲಿ ಕೆಪಿಸಿಸಿ ಮಾಜಿ ಸದಸ್ಯ ಎಸ್. ಸಚ್ಚಿದಾನಂದ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಎಲ್. ಲಿಂಗರಾಜು & ಮಾಜಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು & ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು. pic.twitter.com/j9gxRMgWZy
— BJP Karnataka (@BJP4Karnataka) November 28, 2022