ಬೆಂಗಳೂರು: ರಾಜ್ಯದಲ್ಲಿ ಏಕಾಏಕಿ ಕಾಲರಾ, ಬಿಸಿಗಾಳಿ ಹೆಚ್ಚಾಗಿದೆ. ಬಿಸಿಲ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲ ಧಗೆಯ ಜೊತೆಗೆ ಕಾಲರಾ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿಯಂತ್ರಣ, ಮುಂಜಾಗ್ರತಾ ಕ್ರಮವಾಗಿ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಅದರಲ್ಲಿ ರಾಜ್ಯದಲ್ಲಿ ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಉಷ್ಣತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ತಡೆಯಲು, ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯದ ರಾಷ್ಟ್ರೀಯ ಕಾರ್ಯಕ್ರಮ (NPCCHH) ಹೊರಡಿಸಿದ ನಿರ್ದೇಶನಗಳು ಮತ್ತು ಸಲಹೆಗಳ ಆಧಾರದಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (SDMA), ಕಂದಾಯ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಸಂಬಂಧಿತ ಅಂಶಗಳನ್ನು ರಾಜ್ಯವು ಹೊರಡಿಸಿದ ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳಲ್ಲಿ ಸಹ ಅಳವಡಿಸಲಾಗಿದೆ.
ತಾಪಮಾನವು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ವಿವರ
1. ಸದ್ಯದ ತಾಪಮಾನದ ಪರಿಸ್ಥಿತಿಯಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಕುರಿತು, ದಿನಾಂಕ 2ನೇ ಮಾರ್ಚ್ 2024 ರಂದು ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.
2. ಮಾರ್ಚ್ 1, 2024ರಿಂದ ಶಾಖ ಸಂಬಂಧಿತ ಕಾಯಿಲೆ (HRI)ಗಳ ಕುರಿತು, ಆರೋಗ್ಯ ರಕ್ಷಣಾ ಸೌಲಭ್ಯಗಳು (HCFs) ನಿಂದ ಇಂಟಗ್ರೇಟೆಡ್ ಹೆಲ್ತ್ ಇನ್‌ಫಾರ್‌ಮೇಶನ್ ಪೋರ್ಟಲ್ (IHIP) ನಲ್ಲಿ ದೈನಂದಿನ ಆಧಾರದ ಮೇಲೆ ವರದಿ ಮಾಡಲಾಗುತ್ತಿದೆ. ಈ ಮೂಲಕ ಶಂಕಿತ ಶಾಖಾಘಾತ ಪ್ರಕರಣಗಳು ಮತ್ತು ಸಾವಿನ ಅಂಕಿಅಂಶಗಳನ್ನು ಕಲೆಹಾಕಲಾಗುತ್ತಿದೆ. ರಾಜ್ಯದಲ್ಲಿ ಏಪ್ರಿಲ್ 4, 2024 ರವರೆಗೆ ಶೇ. 56.7ರಷ್ಟು ಶಾಖ ಸಂಬಂಧಿತ ಕಾಯಿಲೆಗಳ ಡೇಟಾಗಳನ್ನು ಸಂಗ್ರಹಿಸಲಾಗಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ, ದತ್ತಾಂಶಗಳನ್ನು ಸಕಾಲಿಕವಾಗಿ ನಮೂದಿಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವರದಿ ಸಲ್ಲಿಕೆಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ.
3. ಶಾಖ ಸಂಬಂಧಿತ ಅನಾರೋಗ್ಯದ ಪ್ರಕರಣಗಳನ್ನು ನಿರ್ವಹಿಸಲು, ಶಾಖಾಘಾತ ನಿರ್ವಹಣಾ ಕೊಠಡಿಗಳನ್ನು (ಜಿಲ್ಲಾ ಆಸ್ಪತ್ರೆಗಳಲ್ಲಿ 5 ಹಾಸಿಗೆಗಳು ಮತ್ತು ಉಪ ಜಿಲ್ಲಾ ಮಟ್ಟದಲ್ಲಿ 2 ಹಾಸಿಗೆಗಳು) ಅಗತ್ಯ ಸೌಲಭ್ಯಗಳೊಂದಿಗೆ ಸಜ್ಜುಗೊಳಿಸಲಾಗಿದೆ. ಈ ಕುರಿತ ಸುತ್ತೋಲೆಯನ್ನು ದಿನಾಂಕ: ಮಾರ್ಚ್16, 2024ರಂದು ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ನಿರ್ದೇಶಕರು ಹೊರಡಿಸಿದ್ದಾರೆ.
4. ಸುತ್ತೋಲೆಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ಚಟುವಟಿಕೆಗಳ ಅನುಷ್ಠಾನದ ಕುರಿತು ಮಾರ್ಚ್ 13, 2024ರಂದು ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಕಾರ್ಯಾಗಾರವನ್ನು (ವರ್ಚುವಲ್ ಆಗಿ) ನಡೆಸಲಾಗಿದೆ.
5. DNOಗಳಿಂದ AMOಗಳಿಗೆ, MO – PHCಗಳಿಗೆ ಅಗತ್ಯ ತರಬೇತಿಗಳನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇವರು ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ.
6. ತಾಪಮಾನವು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಗ್ನಿ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ, ಆಸ್ಪತ್ರೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು, ಮಾರ್ಚ್ 23, 2024ರಂದು ಸುತ್ತೋಲೆಯನ್ನು ಹೊರಡಿಸಲಾಗಿದೆ.
7. ಶಾಖಾಘಾತಕ್ಕೆ ಸಂಬಂಧಿಸಿದ ವಿವಿಧ ಪ್ರಕರಣಗಳ ಅಂಕಿ ಅಂಶಗಳನ್ನು ಪೋರ್ಟಲ್‌ನಲ್ಲಿ ನಮೂದಿಸಲಾಗುತ್ತಿದ್ದು, ಇದುವರೆಗೂ ಒಟ್ಟು 521 ಪುಕರಣಗಳು ವರದಿಯಾಗಿದೆ. ಆದಾಗ್ಯೂ, ಪ್ರತಿನಿತ್ಯ ನಮೂದಿಸಿದ ಅಂಕಿಅಂಶಗಳನ್ನು ಪರಿಶೀಲಿಸಲು ಮತ್ತು ನಿಖರವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು DNOಗಳಿಗೆ ಸೂಚನೆ ನೀಡಲಾಗಿದೆ.
8. ರಾಜ್ಯದಲ್ಲಿ ವರದಿಯಾಗಿರುವ ಎರಡು ಸಾವಿನ ಪ್ರಕರಣಗಳು, (ಬಾಗಲಕೋಟೆ ಮತ್ತು ಕಲಬುರಗಿಯಲ್ಲಿ ತಲಾ ಒಬ್ಬರು) ಶಾಖಾಘಾತಕ್ಕೆ ಒಳಗಾಗಿ ಮೃತಪಟ್ಟಿರುವುದಾಗಿ ಶಂಕಿಸಲಾಗಿತ್ತು. ಆದರೆ ಆಯಾ ಜಿಲ್ಲೆಯ ಸಂಬಂಧಪಟ್ಟ ಅಧಿಕಾರಿಗಳು ನೀಡಿದ ವರದಿಯಲ್ಲಿ Cardiac Tamponade & Myocardial infarction ಕಾರಣದಿಂದ ಸಾವು ಸಂಭವಿಸಿದೆ ಎಂದು ದೃಢೀಕರಿಸಿದ್ದಾರೆ. ಹೀಗಾಗಿ, ಶಾಖಾಘಾತಕ್ಕೆ ಒಳಗಾಗಿ ರಾಜ್ಯದಲ್ಲಿ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಅದಾಗ್ಯೂ, ‘ಶಾಖಾಘಾತ ಸಂಬಂಧಿತ ಸಾವುಗಳಲ್ಲಿ ಮರಣೋತ್ತರ ಪರೀಕ್ಷೆಯ ಸಂಶೋಧನೆಗಳು’ ಕುರಿತು ಕೇಂದ್ರ ಸರ್ಕಾರದ ಸೂಚನೆಗಳನ್ನು ಎಲ್ಲಾ ಜಿಲ್ಲೆಗಳಿಗೆ ವಿತರಿಸಲಾಗಿದ್ದು, ಉಲ್ಲೇಖಿತ ವಸ್ತುವಾಗಿ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ.
9. ಸಾರ್ವಜನಿಕರಿಗೆ ಮಾಹಿತಿ ನೀಡಲು, ಎಲ್ಲಾ ಪ್ಲಾಟ್‌ಫಾರ್ಮ್‌ಗಳ ಮೂ
ಲಕ ಪ್ರಸಾರ ಮಾಡಲು ಅನುಕೂಲವಾಗುವಂತೆ ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ IEC ವಿಭಾಗದಿಂದ ಮಾಹಿತಿಗಳನ್ನು ಎಲ್ಲಾ ಜಿಲ್ಲೆಗಳಿಗೆ ತಲುಪಿಸಲಾಗಿದೆ.
ಪುಸ್ತುತ, ಬೇಸಿಗೆ ತಾಪಮಾನ ಹೆಚ್ಚುತ್ತಿದ್ದು, ಶಾಖಾಘಾತ ಸೇರಿದಂತೆ ಮುಂಬರುವ ದಿನಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಇಲಾಖೆಯ ವತಿಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ‘ಸುನೀಲ್ ಬೋಸ್ ನಾಮಪತ್ರ’ ತಿರಸ್ಕೃತಗೊಳಿಸುವಂತೆ ‘ಚುನಾವಣಾ ಆಯೋಗ’ಕ್ಕೆ ಬಿಜೆಪಿ ದೂರು