ಬೆಂಗಳೂರು: ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಳಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯರಶ್ಮಿಯ ಚಮತ್ಕಾರವೇ ನಡೆಯಿತು. ಈ ಬೆಳಕಿನ ವಿಸ್ಮಯದ ಕೌತುಕವನ್ನು ಕಂಡ ಭಕ್ತರು, ಪುಳಕಿತರಾದರು.
ಸಂಕ್ರಾಂತಿ ಹಬ್ಬದ ದಿನದಂದು ಸೂರ್ಯನು ದಕ್ಷಿಣ ಪಥದಿಂದ ಉತ್ತರಪದಕೆತನ ದಿಕ್ಕನ್ನು ಬದಲಿಸುವ ವೇಳೆ ಬೆಂಗಳೂರಿನ ಬಸವನಗುಡಿಯಲ್ಲಿರುವಂತ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿರುವ ಶಿವನ ಮೂರ್ತಿಗೆ ಸೂರ್ಯನ ಕಿರಣಗಳು ಸ್ಪರ್ಶಿಸಿದೆ. ಇದು ಪ್ರತಿವರ್ಷ ಸಂಕ್ರಾಂತಿ ಹಬ್ಬದ ದಿನದಂದೇ ವಿಸ್ಮಯ ಹಾಗೂ ಕೌತುಕ ಘಟನೆ ನಡೆಯಲಿದೆ. ಇದನ್ನು ನೆರೆಸಿದ್ದಂತ ಅಪಾರ ಪ್ರಮಾಣದ ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಇಂದು ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಿತು. ಸುಮಾರು ಮೂರು ನಿಮಿಷಗಳ ಕಾಲ ಸೂರ್ಯನ ಕಿರಣಗಳು ಗಂವಿ ಗಂಗಾಧರೇಶ್ವರ ಮೂರ್ತಿಯನ್ನು ಸ್ಪರ್ಶಿಸಿತು. ಈ ಸೂರ್ಯ ರಶ್ಮಿಯ ಚಮತ್ಕಾರವನ್ನು ನೆರೆದಿದ್ದಂತ ನೂರಾರು ಭಕ್ತರು ಕಣ್ ತುಂಬಿಕೊಂಡರು.
ಇನ್ನು ದೇವಸ್ಥಾನದಲ್ಲಿ ಬೆಳಿಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮಾಡಲಾಯಿತು. ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ತೆರೆದಿತ್ತು. ನಂತರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರಲಿಲ್ಲ. ಸಂಜೆ ಸೂರ್ಯರಶ್ಮಿ ಲಿಂಗವನ್ನ ಸ್ಪರ್ಶಿಸಿದ ನಂತರ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಭಕ್ತಾಧಿಗಳು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ ಎಲ್ಇಡಿ ವ್ಯವಸ್ಥೆ ಮಾಡಲಾಗಿತ್ತು. 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಮಾಡಲಾಗಿತ್ತು.
BIG NEWS: ರಾಜ್ಯದಲ್ಲಿ ‘ಸಂಕ್ರಾಂತಿ ಹಬ್ಬ’ದ ದಿನವೇ ‘ಸರಣಿ ದುರಂತ’: ಒಂದೇ ದಿನ ಅಪಘಾತಕ್ಕೆ ’11 ಮಂದಿ’ ಬಲಿ