ಕಾರವಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂಬುದಾಗಿ ಕರೆಯುವ ಮೂಲಕ ಅವಹೇಳನ ಮಾಡಿದ್ದ ಕಾರಣ, ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ.
ಫೆಬ್ರವರಿ.23ರಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದಂತ ಸಭೆಯಲ್ಲಿ ಭಾಗಿಯಾಗಿ ಸಿಎಂ ಸಿದ್ಧರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂಬುದಾಗಿ ಕರೆದಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತವಾದ ಕಾರಣ, ಮುಂಡಗೋಡು ಪೊಲೀಸರು ಸುಮೋಟೋ ಕೇಸ್ ಅನ್ನು ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ದಾಖಲಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು, ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟಕ್ಕೆ ತಿರುಗೇಟು ನೀಡುವ ಭರದಲ್ಲಿ ದೇಶದಲ್ಲಿ 99.9% ಹಿಂದೂಗಳು ತೆರಿಗೆ ಕಟ್ಟುತ್ತಾರೆ. ಆದರೆ ಮುಸ್ಲಿಮರ ಮಸೀದಿಗೆ ಯಾಕೆ ಅನುದಾನ ಕೊಟ್ರಿ? ಸಿದ್ರಾಮುಲ್ಲಾ ಖಾನ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ವಾಗ್ದಾಳಿ ನಡೆಸಿದ್ದರು.
‘ಮಹದಾಯಿ’ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
ಪ್ರಧಾನಿ ಮೋದಿಯ ‘ಮನ್ ಕಿ ಬಾತ್’ ಮುಂದಿನ ಮೂರು ತಿಂಗಳವರೆಗೆ ಪ್ರಸಾರವಾಗುವುದಿಲ್ಲ. ಕಾರಣ ಇಲ್ಲಿದೆ | Mann Ki Baat