Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಫಿಕ್ಸ್

21/03/2026 10:24 PM

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಟೀಸರ್ ಬಿಡುಗಡೆ!
FILM

ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಟೀಸರ್ ಬಿಡುಗಡೆ!

By kannadanewsnow0702/12/2025 4:05 PM
'Super Hit' Teaser Released with Gilli as the Hero!
'Super Hit' Teaser Released with Gilli as the Hero!

ಕೆಎನ್‌ಎನ್‌ಸಿನಿಮಾಡೆಸ್ಕ್‌: ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ವಿಜಯಾನಂದ್ ನಿರ್ದೇಶನದ ಈ ಸಿನಿಮಾದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಟ್ಟಾರೆ ಸಿನಿಮಾದ ಬಗೆಗಿನ ಒಂದಷ್ಟು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. ಹೀಗೆ ಬಿಡುಗಡೆಗೊಂಡಿರುವ `ಸೂಪರ್ ಹಿಟ್’ ಟೀಸರ್ ಸು ಫ್ರಂ ಸೋ ನಂತರದಲ್ಲಿ ಮತ್ತೊಂದು ಮಟ್ಟದ ಕಾಮಿಡಿಯ ಮೂಲಕ ಸಂಚಲನ ಸೃಷ್ಟಿಸುವ ಲಕ್ಷಣಗಳು ದಟ್ಟವಾಗಿ ಕಾಣಿಸುತ್ತಿವೆ.

'Super Hit' Teaser Released with Gilli as the Hero!
‘Super Hit’ Teaser Released with Gilli as the Hero!
'Super Hit' Teaser Released with Gilli as the Hero!
‘Super Hit’ Teaser Released with Gilli as the Hero!

ಸಿನಿಮಾವೊಂದು ಬಿಡುಗಡೆಯಾದ ನಂತರ ಸೂಪರ್ ಹಿಟ್ ಆಗೋದು ವಾಡಿಕೆ. ಆದರೆ, ಈ ಸಿನಿಮಾದ ಶೀರ್ಷಿಕೆಯೇ ಸೂಪರ್ ಹಿಟ್. ರನ್ನಿಂಗ್ ಸಕ್ಸಸ್‌ಫುಲಿ ಎಂಬ ಟ್ಯಾಗ್ ಲೈನ್ ಅದಕ್ಕಿದೆ. ಹೀಗೆ ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿದ್ದ ಈ ಸಿನಿಮಾದ ಟೈಟಲ್ಲು ಹುಟ್ಟಿದ ಬಗೆಗಿನ ಇಂಟರೆಸ್ಟಿಂಗ್ ಸಂಗತಿಯನ್ನು ನಿರ್ದೇಶಕ ವಿಜಯಾನಂದ ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ. ಒಂದಷ್ಟು ಏಳುಬೀಳು ಕಂಡಿದ್ದ ಈ ಸಿನಿಮಾ ನಿರ್ಮಾಪಕರಾದ ಜಿ. ಉಮೇಶ್ ಅವರು ಸೂಪರ್ ಹಿಟ್ ಸಿನಿಮಾವನ್ನು ನಿರ್ಮಾಣ ಮಾಡೋ ಕನಸು ಹೊಂದಿದ್ದರಂತೆ. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡಿದ್ದ ನಿರ್ದೇಶಕರು, ಕಥೆಗೂ ಹೊಂದಿಕೆಯಾಗೋದರಿಂದ ಅದನ್ನೇ ಶೀರ್ಷಿಕೆಯಾಗಿಟ್ಟಿರೋದಾಗಿ ಮಾಹಿತಿ ಹಂಚಿಕೊಂಡರು.

'Super Hit' Teaser Released with Gilli as the Hero!
‘Super Hit’ Teaser Released with Gilli as the Hero!

ಸು ಫ್ರಂ ಸೋ ಚಿತ್ರಕ್ಕೆ ಸಿಕ್ಕ ಅಭೂತಪೂರ್ವ ಬೆಂಬಲದಿಂದ ಹೊಸಾ ಹುರುಪು ತುಂಬಿಕೊಂಡಿರುವ ವಿಜಯಾನಂದ್, ಈ ಚಿತ್ರಕ್ಕೂ ಅಂಥಾದ್ದೇ ಬೆಂಬಲ ಸಿಗುವ ಆಶಯ ಮತ್ತು ಭರವಸೆ ಹೊಂದಿದ್ದಾರೆ. ಅಂದಹಾಗೆ, ಖ್ಯಾತ ಸಿನಿಮಾ ಸಾಹಿತಿ ನಾಗೇಂದ್ರ ಪ್ರಸಾದ್ ಅವರ ಸಹೋದರನಾಗಿರುವ ವಿಜಯಾನಂದ್ ಕಮರ್ಶಿಯಲ್ ಧಾಟಿಯಲ್ಲಿ, ಹಾಸ್ಯವನ್ನೇ ಪ್ರಧಾನವಾಗಿಟ್ಟುಕೊಂಡು ಈ ಸಿನಿಮಾವನ್ನು ರೂಪಿಸಿದ್ದಾರಂತೆ. ಈಗಾಗಲೇ ಇದರ ಎಲ್ಲ ಕೆಲಸ ಕಾರ್ಯಗಳೂ ಮುಕ್ತಾಯಗೊಂಡಿವೆ. ಒಂದೊಳ್ಳೆ ಸಮಯ ನೋಡಿ ಬಿಡುಗಡೆ ಮಾಡೋದಷ್ಟೇ ಬಾಕಿ ಉಳಿದಿದೆ ಎಂಬ ಮಾಹಿತಿಯನ್ನು ವಿಜಯಾನಂದ್ ಹಂಚಿಕೊಂಡಿದ್ದಾರೆ. ಇಡೀ ಸಿನಿಮಾ ಆರಂಭದಿಂದ ಕೊನೆಯವರೆಗೂ ಪ್ರತೀ ಹತ್ತು ನಿಮಿಷಕ್ಕೊಮ್ಮೆ ಪ್ರೇಕ್ಷಕರನ್ನು ಬೆರಗಾಗಿಸುವಂಥಾ ಅಂಶಗಳು, ತಿರುವುಗಳಿವೆಯಂತೆ. ಕನ್ನಡ ಚಿತ್ರರಂಗದಲ್ಲೇ ಮೊದಲ ಬಾರಿ ಥ್ರಿಲ್ಲರ್ ಕಾಮಿಡಿ ಜಾನರಿನಲ್ಲಿ ಭಿನ್ನ ಪ್ರಯತ್ನ ನಡೆಸಿರುವ ಸುಳಿವನ್ನೂ ನಿರ್ದೇಶಕರು ಬಿಟ್ಟುಕೊಟ್ಟಿದ್ದಾರೆ.

'Super Hit' Teaser Released with Gilli as the Hero!
‘Super Hit’ Teaser Released with Gilli as the Hero!

ಈಗಿನ ಯುವ ಸಮುದಾಯಕ್ಕೆ ಹತ್ತಿರಾಗಿರೋ ಕಥೆ ಹೊಂದಿರುವ `ಸೂಪರ್ ಹಿಟ್’ ಚಿತ್ರದಲ್ಲಿ ಸೋಶಿಯಲ್ ಮೀಡಿಯಾ ಮೂಲಕ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಗೌರವ್ ಶೆಟ್ಟಿ ಮತ್ತು, ಗಿಲ್ಲಿ ನಟ ನಾಯಕರಾಗಿ ನಟಿಸಿದ್ದಾರೆ. ಶ್ವೇತಾ ನಾಯಕಿಯಾಗಿ ಜೊತೆಯಾಗಿದ್ದಾರೆ. ವಿಜಯಲಕ್ಷ್ಮಿ ಎಂಟರ್‌ಪ್ರೈಸಸ್ ಬ್ಯಾನರಿನಡಿಯಲ್ಲಿ ಜಿ. ಉಮೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಇನ್ನುಳಿದಂತೆ, ಆರ್.ಡಿ ನಾಗಾರ್ಜುನ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಮತ್ತು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡ್ರ್ಯಾಗನ್ ಮಂಜು, ಸಾಧು ಕೋಕಿಲ, ಸೀನು ಭಾಯ್, ನಾಗವರ್ಧನ್, ಪ್ರಮೋದ್ ಶೆಟ್ಟಿ, ಜೀಜಿ, ಗಿರಿ, ಟಿನಿಸ್ ಕೃಷ್ಣ, ಕರಿಸುಬ್ಬು, ಸೋಮಶೇಖರ್, ವಂಶಿ, ಮಂಜಣ್ಣ, ಬಿ.ಎನ್ ಮಂಗಳ, ಅಶ್ವಿನಿ ರಾವ್, ಸ್ವಪ್ನ ಶೆಟ್ಟಿಗಾರ್, ಮಂಗಳೂರು ಮೀನನಾಥ ಮುಂತಾದವರ ತಾರಾಗಣವಿದೆ.

'Super Hit' Teaser Released with Gilli as the Hero! ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್' ಟೀಸರ್ ಬಿಡುಗಡೆ!
Share. Facebook Twitter LinkedIn WhatsApp Email

Related Posts

ಬಾಕ್ಸ್ ಆಫೀಸ್ ನಲ್ಲಿ ಧುರಂಧರ್ 2 ಅಬ್ಬರ : ಮೊದಲ ದಿನವೇ 100 ಕೋಟಿ ರೂ. ಗಳಿಸಿದ ರಣವೀರ್ ಸಿಂಗ್ ಚಿತ್ರ!

20/03/2026 8:26 AM1 Min Read

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : `ಮೈಕೆಲ್ ಬಿ ಜೋರ್ಡಾನ್- ಜೆಸ್ಸಿ ಬಕ್ಲಿ’ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ |Oscars 2026

16/03/2026 8:08 AM2 Mins Read

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ |Oscars 2026

16/03/2026 6:54 AM1 Min Read
Recent News

BREAKING: ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಫಿಕ್ಸ್

21/03/2026 10:24 PM

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM
State News
KARNATAKA

BREAKING: ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಫಿಕ್ಸ್

By kannadanewsnow0921/03/2026 10:24 PM KARNATAKA 1 Min Read

ಬೆಂಗಳೂರು: ಕೊನೆಗೂ ದಾವಣಗೆರೆ ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಗೊಂದಲಕ್ಕೆ ತೆರೆ ಬಿದ್ದಿದೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್…

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.