ಬೆಂಗಳೂರು: ಇಂದು ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಆಗಮಿಸುತ್ತಿದ್ದಾರೆ. ಇದೀಗ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿದ್ದು, ಅವರನ್ನು ಸಚಿವ ಸುಧಾಕರ್ ಆತ್ಮೀಯವಾಗಿ ಸ್ವಾಗತಿಸಿದರು.
ನಟ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಒಂದು ವರ್ಷವೇ ಕಳೆದಿದೆ. ಈ ಸಂದರ್ಭದಲ್ಲಿ ಇಂದು ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರದಿಂದ ಪ್ರದಾನ ಮಾಡಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಸಮಾರಂಭವನ್ನು ಏರ್ಪಡಿಸಲಾಗಿದೆ.
BREAKING NEWS: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: ನೂರಾರು ಜನರು ಪೊಲೀಸರ ವಶಕ್ಕೆ
ಇಂದಿನ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ಅವರನ್ನು ಆಹ್ವಾನಿಸಲಾಗಿದೆ. ಈ ಹಿನ್ನಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಇದೀಗ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಆತ್ಮೀಯವಾಗಿ ಸ್ವಾಗತಿಸಿದರು.