BIGG NEWS ; ಮಂಗಳೂರು ‘CAA’ ಗಲಭೆ ಕೇಸ್ : ಬಂಧಿತ 22 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು – Kannada News Now


State

BIGG NEWS ; ಮಂಗಳೂರು ‘CAA’ ಗಲಭೆ ಕೇಸ್ : ಬಂಧಿತ 22 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು

ಮಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 22 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

2019 ಡಿಸೆಂಬರ್ 19 ರಂದು ಮಂಗಳೂರಿನಲ್ಲಿ ನಡೆದ ಸಿಎಎ ವಿರೋಧಿಸಿ ಪ್ರತಿಭಟನೆ, ಹಿಂಸಾಚಾರ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಘಟನೆಗೆ ಸಂಬಂಧಿಸಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಾಕಷ್ಟು ಆಸ್ತಿಪಾಸ್ತಿ ನಷ್ಟ ಉಂಟಾಗಿತ್ತು. ಕೃತ್ಯಕ್ಕೆ ಸಂಬಂಧಿಸಿದಂತೆ ಸಾವಿರಕ್ಕೂ ಅಧಿಕ ಸಿಸಿಟಿವಿ ಫೂಟೇಜ್‌ ಮೂಲಕ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿತ್ತು, ಸೈಬರ್‌ ಕ್ರೈಂ ಅಪರಾಧ ವಿಭಾಗ ತಂಡ, ಇಂಟೆಲಿಜೆನ್ಸ್‌ ತಂಡ, ತಾಂತ್ರಿಕ ತಂಡಗಳು, ಸಿಸಿಆರ್‌ಬಿ, ಸಿಸಿಬಿ ತಂಡಗಳು ಮಂಗಳೂರು ಗಲಭೆಕೋರರ ಬಂಧನಕ್ಕೆ ಕಾರ್ಯಾಚರಣೆ ನಡೆಸಿತ್ತು,

ಇದೀಗ ಈ ಪ್ರಕರಣದಡಿ ಬಂಧಿತರಾಗಿದ್ದ  22 ಆರೋಪಿಗಳಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ನೀಡಿ ಆದೇಶ ಹೊರಡಿಸಿದೆ.

ಎಂ.ಬಿ.ಬಿ.ಎಸ್, ಬಿ.ಇ ವಿದ್ಯಾರ್ಥಿಗಳೇ ಗಮನಿಸಿ : ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

.




error: Content is protected !!