ನವದೆಹಲಿ: ಪಿಎಂಎಲ್ಎ ತೀರ್ಪಿನ ವಿರುದ್ಧ ಮರುಪರಿಶೀಲನೆಗೆ ಮುಕ್ತ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ( Supreme Court ) ಅನುಮತಿ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ನಾಳೆ ವಿಚಾರಣೆ ನಡೆಸಲಿದೆ.
BREAKING NEWS: ‘ಕಾಂಗ್ರೆಸ್ ಪಕ್ಷ’ದ ‘ಯೂಟ್ಯೂಬ್ ಚಾನೆಲ್’ ಡಿಲೀಟ್ | Congress YouTube channel deleted
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (Prevention of Money Laundering Act – PMLA) ನಿಬಂಧನೆಗಳನ್ನು ಎತ್ತಿಹಿಡಿಯುವ ತೀರ್ಪಿನ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯಲ್ಲಿ ಮುಕ್ತ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ಅನುಮತಿ ನೀಡಿದೆ.
BIG NEWS: ರಾಜ್ಯ ಸರ್ಕಾರದಿಂದ 21 ಟ್ರಸ್ಟ್, ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷ, ಸದಸ್ಯರ ನೇಮಿಸಿ ಆದೇಶ
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಕಾರ್ತಿ ಪಿ.ಚಿದಂಬರಂ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯಲ್ಲಿ ಮೌಖಿಕ ವಿಚಾರಣೆಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಅರ್ಜಿಯ ವಿಚಾರಣೆಯನ್ನು ನಾಳೆ ವಿಚಾರಣೆ ನಡೆಸಲಾಗುವುದು.
Supreme Court agrees to hear a review plea against the judgement pertaining to upholding various provisions of the PMLA Act on August 25 pic.twitter.com/9gkMOzXKJT
— ANI (@ANI) August 24, 2022