ನವದೆಹಲಿ: ತಮ್ಮ ಗೌಪ್ಯತೆ ನೀತಿಯ ಬಗ್ಗೆ ಭಾರತೀಯ ಸ್ಪರ್ಧಾತ್ಮಕ ಆಯೋಗ ( Competition Commission of India – CCI) ನಡೆಸುತ್ತಿರುವ ತನಿಖೆಯನ್ನು ತಡೆಹಿಡಿಯುವಂತೆ ಕೋರಿ ವಾಟ್ಸಾಪ್ ಮತ್ತು ಅದರ ಮಾತೃ ಕಂಪನಿ ಮೆಟಾ (Meta – Facebook) ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ( Supreme Court ) ಶುಕ್ರವಾರ ವಜಾಗೊಳಿಸಿದೆ.
ಸಿಸಿಐ ತನಿಖೆಗೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ಪ್ರಶ್ನಿಸಿ ವಾಟ್ಸಾಪ್ ಮತ್ತು ಮೆಟಾ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಸುಧಾಂಶು ಧುಲಿಯಾ ( Justices MR Shah and Sudhanshu Dhulia ) ಅವರನ್ನು ಒಳಗೊಂಡ ನ್ಯಾಯಪೀಠವು ತಿರಸ್ಕರಿಸಿದೆ.
BREAKING NEWS: ಓಲಾ, ಊಬರ್ಗೆ ಬಿಗ್ ರಿಲೀಫ್; ಸಾರಿಗೆ ಇಲಾಖೆ ಆದೇಶಕ್ಕೆ ಕೋರ್ಟ್ ಮಧ್ಯಂತರ ತಡೆ