ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ಮೇಲೆ ಪ್ರತಿಭಟನೆ ನಡೆಸಿದ್ದಕ್ಕಾಗಿ ದಾಖಲಾಗಿದ್ದಂತ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
2022ರಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ, ಪ್ರತಿಭಟನೆ ಮಾಡಿದ್ದಂತ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು.
ಇಂದು ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಸಿಎಂ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ದೇಶದ್ರೋಹ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ‘ಇಸ್ಕಾನ್ ಚಿನ್ಮಯ್ ದಾಸ್’ಗೆ ಜಾಮೀನು ಮಂಜೂರು | Chinmoy Das
BIG NEWS : ದೇಶದಲ್ಲಿ ನಾಳೆಯಿಂದ 15 ಬ್ಯಾಂಕುಗಳ ವಿಲೀನ : ಖಾತೆದಾರರ ಮೇಲೆ ಏನು ಪರಿಣಾಮ ಬೀರುತ್ತದೆ?