ಮಂಡ್ಯ : ಸುಪ್ರೀಂ ಕೋರ್ಟ್ ಜಡ್ಜ್ ಮೇಲೆ ಶೂ ಎಸೆತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲ ರಾಕೇಶ್ ಕಿಶೋರ್ ಹಾಗೂ ಭಾಸ್ಕರ್ ರಾವ್ ಗಲ್ಲಿಗೇರಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಮಂಡ್ಯದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಅವಕಾಶ ವಂಚಿತ ಸಮುದಾಯಗಳ ವೇದಿಕೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಂಡ್ಯದ ಸಂಜಯ ವೃತ್ತದಲ್ಲಿ ನಡೆದ ಪ್ರತಿಭಟನೆ ನಡೆಸಿದ್ದು, ಭಾತರದ ನ್ಯಾಯಾಂಗಕ್ಕೆ ಅಗೌರವ ತೋರಿದ್ದಾರೆ ಎಂದು ರಾಕೇಶ್ ಕಿಶೋರ್ ಹಾಗೂ ಭಾಸ್ಕರ್ ರಾವ್ ಗಲ್ಲಿಗೇರಿಸಲು ಒತ್ತಾಯಿಸಲಾಯಿತು. ಸುಪ್ರೀಂ ಕೋರ್ಟ್ ಜಡ್ಜ್ ಮೇಲೆ ಶೂ ಎಸೆತ ಖಂಡನೀಯ. ಇಂತಹ ಘಟನೆ ನಡೆಯಬಾರದಿತ್ತು. ಈ ರೀತಿಯ ಕೃತ್ಯದಲ್ಲಿ ಭಾಗಿಯಾದ ವಕೀಲನ ಮೇಲೆ ಕಾನೂನು ಕ್ರಮ ಆಗಬೇಕು. ಕಾನೂನು ಮೂಲಕ ಕಠಿಣ ಕ್ರಮ ಕೈಗೊಂಡು ಗಲ್ಲಿಗೇರಿಸಲು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ವೆಂಕಟಗಿರಿಯ್ಯಯ್ಯ, ಗಂಗರಾಜು, ದೊಡ್ಡಯ್ಯ, ಬಾಲರಾಜು, ಸಂದೇಶ್, ಲವ, ಹರೀಶ್, ತಾಳಶಾಸನ್ ಮೋಹನ್ ಸೇರಿ ಹಲವರು ಭಾಗಿಯಾಗಿದ್ದರು.