ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ ಸುಪ್ರೀಂ ಕೋರ್ಟ್ ಮುಂದಿನ ಅರ್ಜಿಯನ್ನು ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದೆ.

ʻ ನೋಯ್ಡಾ ಅವಳಿ ಗೋಪುರʼಗಳ ಧ್ವಂಸ ನಂತರ ಚರ್ಮದ ತುರಿಕೆ? ತಜ್ಞರಿಂದ ʻಸ್ಕಿನ್‌ ಕೇರ್‌ ಸಲಹೆʼಗಳೇನು ಗೊತ್ತಾ? ಇಲ್ಲಿದೆ ಓದಿ

ರಾಜ್ಯಾಧ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದಂತ ಹಿಜಾಬ್ ಪ್ರಕರಣ ( Hijab Row ) ಸಂಬಂಧ ಕರ್ನಾಟಕ ಹೈಕೋರ್ಟ್ ( Karnataka High Court ) ನೀಡಿರುವಂತ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವಂತ ಅರ್ಜಿಗಳ ವಿಚಾರಣೆಯನ್ನು, ಇಂದು ಸುಪ್ರೀಂ ಕೋರ್ಟ್ ನಡೆಸಲಿದೆ ಎನ್ನಲಾಗಿತ್ತು. ಆದ್ರೇ.. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ( Supreme Court ) ನ್ಯಾಯಪೀಠವು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.

BIG BREAKING NEWS: ‘ನೀಟ್-ಪಿಜಿ 2022 ಕೌನ್ಸೆಲಿಂಗ್’ನಲ್ಲಿ ಹಸ್ತಕ್ಷೇಪವಿಲ್ಲ – ಸುಪ್ರೀಂ ಕೋರ್ಟ್ | NEET-PG 2022 Counselling

ಈ ವರ್ಷದ ಜನವರಿಯಲ್ಲಿ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ, ಕ್ರಮೇಣ ರಾಜ್ಯಾಧ್ಯಂತ ವ್ಯಾಪಿಸಿ, ಸದ್ದು ಮಾಡಿತ್ತು. ಪದವಿಪೂರ್ವ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಿ ಬರುವುದಕ್ಕೆ ನಿಷೇಧ ಹರಿದ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ಹೈಕೋರ್ಟ್, ಮಾರ್ಚ್ 15ರ ತೀರ್ಪಿನಲ್ಲಿ ಎತ್ತಿ ಹಿಡಿದಿತ್ತು.

ಏಷ್ಯಾಕಪ್‌ನಲ್ಲಿ ಪಾಕ್‌ ವಿರುದ್ಧ ʻಭಾರತʼ ದಿಗ್ವಿಜಯ… ದೇಶಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ… ಇಲ್ಲಿದೆ ವಿಡಿಯೋ

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ 24 ಪ್ರತ್ಯೇಕ ಅರ್ಜಿಗಳನ್ನು ದಾಖಲಿಸಲಾಗಿದೆ. ಈ ಅರ್ಜಿಗಳನ್ನು ಇಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಿಂದ ವಿಚಾರಣೆ ಕೈಗೆತ್ತಿಕೊಂಡ ಬಳಿಕ, ಕರ್ನಾಟಕಕ್ಕೆ ನೋಟಿಸ್ ಜಾರಿಗೊಳಿಸಿತು. ಈ ಬಳಿಕ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.

BIG NEWS: ದೇಶಾದ್ಯಂತ ಕೋವಿಡ್ ಕೇಸ್ ಹೆಚ್ಚಳ: ಇಂದು 7,591 ಮಂದಿಗೆ ಕೊರೋನಾ ಪಾಸಿಟಿವ್ | India Covid19 Report

Share.
Exit mobile version