ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ನಿಂದ ಪರಿಹಾರ ಸಿಗುವಂತೆ ಕಾಣುತ್ತಿಲ್ಲ. ಅವರು ಈಗ ಜೂನ್ ೨ ರಂದು ನ್ಯಾಯಾಲಯಕ್ಕೆ ಶರಣಾಗಬೇಕಾಗುತ್ತದೆ. ಮಧ್ಯಂತರ ಜಾಮೀನನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಸಿಎಂ ಕೇಜ್ರಿವಾಲ್ ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ಅವರ ಅರ್ಜಿಯನ್ನು ಸ್ವೀಕರಿಸಲಿಲ್ಲ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅವಧಿಯನ್ನು 7 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸಿಎಂಗೆ ಸ್ವಾತಂತ್ರ್ಯ ನೀಡಿದೆ ಎಂದು ರಿಜಿಸ್ಟ್ರಿ ಹೇಳುತ್ತದೆ. ಇದರರ್ಥ ಕೇಜ್ರಿವಾಲ್ ಜೂನ್ 2 ರೊಳಗೆ ಶರಣಾಗಬೇಕಾಗುತ್ತದೆ.