ಇಂದು ಜ್ಞಾನ್ವಾಪಿ ಮಸೀದಿ ಪ್ರಕರಣದ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ನವದೆಹಲಿ: ವಾರಣಾಸಿಯ ಜ್ಞಾನ್ವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ರಕ್ಷಣೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಜೆ.ಬಿ.ಪಾರ್ಡಿವಾಲಾ ಅವರ ಪೀಠವು ಗುರುವಾರ ಈ ವಿಷಯದ ವಿಚಾರಣೆಗಾಗಿ ನ್ಯಾಯಪೀಠವನ್ನು ರಚಿಸುವುದಾಗಿ ಹೇಳಿದೆ. “ನಾಳೆ ಮಧ್ಯಾಹ್ನ 3 ಗಂಟೆಗೆ ನಾವು ವಿಚಾರಣೆಗಾಗಿ ನ್ಯಾಯಪೀಠವನ್ನು ರಚಿಸುತ್ತೇವೆ” ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಮೇ 17 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶದ … Continue reading ಇಂದು ಜ್ಞಾನ್ವಾಪಿ ಮಸೀದಿ ಪ್ರಕರಣದ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್