Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಗಸ್ಟ್‌ ನಲ್ಲಿ ಸುಪ್ರೀಂ ಕೋರ್ಟ್‌ನಿಂದ ‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್‌ ಆಯೋಜನೆ : ಅನು ಶಿವರಾಮನ್
KARNATAKA

ಆಗಸ್ಟ್‌ ನಲ್ಲಿ ಸುಪ್ರೀಂ ಕೋರ್ಟ್‌ನಿಂದ ‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್‌ ಆಯೋಜನೆ : ಅನು ಶಿವರಾಮನ್

By kannadanewsnow57

ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ, ಬರುವ ಆಗಸ್ಟ್ 21, 22 ಮತ್ತು 23 ರಂದು ‘ಸಮಾಧಾನ ಸಮಾರೋಹ್’ ಎಂಬ ವಿಶೇಷ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಹಾಗೂ ಕೆಎಎಲ್‌ಎಸ್ಎ ಕಾರ್ಯನಿರ್ವಾಹಕ ಅಧ್ಯಕ್ಷರಾದ ಅನು ಶಿವರಾಮನ್ ಅವರು ಹೇಳಿದರು.

‘ಸಮಾಧಾನ ಸಮಾರೋಹ್’ ವಿಶೇಷ ಲೋಕ ಅದಾಲತ್ ಕುರಿತು, ಆನ್ ಲೈನ್ ಮೂಲಕ ಕರ್ನಾಟಕ ಹೈಕೋರ್ಟ್ ನ ಮೊದಲ ಮಹಡಿಯಲ್ಲಿರುವ ಕಾರ್ಯನಿರ್ವಾಹಕ ಅಧ್ಯಕ್ಷರ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸುಪ್ರೀಂ ಕೋರ್ಟ್ ಪ್ರಕರಣಗಳ ಇತ್ಯರ್ಥಕ್ಕೆ ಇದು ವಿಶೇಷ ಲೋಕ್ ಅದಾಲತ್ ಆಗಿದೆ. ಸಾರ್ವಜನಿಕರಿಗೆ ಇದು ಸುವರ್ಣಾವಕಾಶವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ದಾವೆಗಳನ್ನು ಪರಸ್ಪರ ಒಪ್ಪಿಗೆ ಮತ್ತು ಸಂಧಾನದ ಮೂಲಕ ಬಗೆಹರಿಸಿ, ದಾವೆದಾರರಿಗೆ ಶೀಘ್ರ ನ್ಯಾಯ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಹೈಕೋರ್ಟ್ ಕಾನೂನು ಸೇವಾ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಆರ್.ದೇವದಾಸ್ ಅವರು ಮಾತನಾಡಿ, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಸಾವಿರಾರು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ‘ವಿಶೇಷ ಲೋಕ್ ಅದಾಲತ್’ ಎಂಬ ವಿನೂತನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಎಂದೂ ನಡೆಯದ ಈ ವಿಶೇಷ ಕಾರ್ಯಕ್ರಮದ ಮೂಲಕ ಜನಸಾಮಾನ್ಯರಿಗೆ ತಮ್ಮ ಕಾನೂನು ಹೋರಾಟವನ್ನು ಸುಲಭವಾಗಿ ಮುಕ್ತಾಯಗೊಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

*ರಾಜ್ಯದ 4,328 ಪ್ರಕರಣಗಳ ಗುರುತಿಸುವಿಕೆ:*
ಕರ್ನಾಟಕ ರಾಜ್ಯದ ವಿವಿಧ ತಾಲೂಕು ಮತ್ತು ಜಿಲ್ಲಾ ಮಟ್ಟಗಳಿಂದ ಸುಪ್ರೀಂ ಕೋರ್ಟ್‌ಗೆ ಹೋದ ಸುಮಾರು 4,328 ಪ್ರಕರಣಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್ ಗುರುತಿಸಿ, ಪಟ್ಟಿಯನ್ನು ಕಳುಹಿಸಿಕೊಟ್ಟಿದೆ. ರಾಜಿ ಸಂಧಾನದ ಮೂಲಕ ಬಗೆಹರಿಸಬಹುದಾದ ಪ್ರಕರಣಗಳನ್ನು ಗುರುತಿಸಿ, ಅವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವುದು ಈ ಲೋಕ್ ಅದಾಲತ್‌ನ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದರು.

ವರ್ಷಾನುಗಟ್ಟಲೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಕಾನೂನು ಪ್ರಕ್ರಿಯೆಗಳು ಜನರಿಗೆ ಹೊರೆಯಾಗಬಹುದು. ಈ ಲೋಕ್ ಅದಾಲತ್ ಮೂಲಕ ಪರಸ್ಪರ ಒಪ್ಪಿಗೆಯ ಮೇರೆಗೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಸಮಯ ಮತ್ತು ಹಣ ಎರಡೂ ಉಳಿತಾಯವಾಗಲಿದೆ. ತಮ್ಮ ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವವರು ಕೂಡಲೇ ಸಂಬಂಧಪಟ್ಟ ತಾಲ್ಲೂಕು ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಗೆ ಸಂಪರ್ಕಿಸಿ ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬೇಕೆಂದು ವಿನಂತಿಸಿದರು.

ವಿಡಿಯೋ ಸಂವಾದ ಬಳಿಕ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು, ಸಾರ್ವಜನಿಕರು ಮತ್ತು ದಾವೆದಾರರು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬೇಕು. ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದರು.

ಸುಪ್ರೀಂ ಕೋರ್ಟ್ ನೀಡಿರುವ ಪಟ್ಟಿಯ ಅನ್ವಯ, ಕರ್ನಾಟಕ ರಾಜ್ಯದಿಂದ ಸುಮಾರು 4,328 ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಪೈಕಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಿಗೆ ಸಂಬಂಧಿಸಿದ 109 ಪ್ರಕರಣಗಳು ಇತ್ಯರ್ಥಕ್ಕೆ ಲಭ್ಯವಿವೆ. ಸುಪ್ರೀಂ ಕೋರ್ಟ್‌ಗೆ ಅಲೆಯುವ ಬದಲು, ಸ್ಥಳೀಯವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಗಳ ಮೂಲಕವೇ ಸಂಧಾನ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.

ಪಕ್ಷಕಾರರು ಭೌತಿಕವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ, ವಿಡಿಯೋ ಕಾನ್ಫರೆನ್ಸ್ ಮೂಲಕವೂ ಸಂಧಾನದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಉದಾಹರಣೆಗೆ, ಒಬ್ಬರು ಬಳ್ಳಾರಿಯಲ್ಲಿದ್ದು ಇನ್ನೊಬ್ಬರು ಮುಂಬೈ ಅಥವಾ ವಿದೇಶದಲ್ಲಿದ್ದರೂ ತಂತ್ರಜ್ಞಾನದ ಮೂಲಕ ಸಂಧಾನ ನಡೆಸಬಹುದು. ತರಬೇತಿ ಪಡೆದ ಪರಿಣಿತ ಮಧ್ಯಸ್ಥಿಕೆದಾರರು ಮತ್ತು ವಕೀಲರು ಉಭಯ ಪಕ್ಷಗಳ ನಡುವೆ ಸಮಾಲೋಚನೆ ನಡೆಸಿ, ಇಬ್ಬರಿಗೂ ಒಪ್ಪಿಗೆಯಾಗುವಂತಹ ಪರಿಹಾರ ಕಂಡುಕೊಳ್ಳಲು ನೆರವಾಗುತ್ತಾರೆ. ಇದರಲ್ಲಿ ವೈವಾಹಿಕ ವಿವಾದಗಳು, ಅಪಘಾತ ವಿಮೆ ಪರಿಹಾರ, ಚೆಕ್ ಬೌನ್ಸ್ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಕ್ರಿಮಿನಲ್ ರಾಜಿ ಪ್ರಕರಣಗಳು ಹಾಗೂ ಕಾರ್ಮಿಕ ವಿವಾದಗಳನ್ನು ಇಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹೇಳಿದರು.

ನ್ಯಾಯಾಲಯದಲ್ಲಿ ಒಬ್ಬರು ಗೆದ್ದು ಇನ್ನೊಬ್ಬರು ಸೋಲುತ್ತಾರೆ. ಆದರೆ ಸಂಧಾನದ ಮೂಲಕ ಪ್ರಕರಣ ಇತ್ಯರ್ಥವಾದರೆ ಇಬ್ಬರೂ ಗೆದ್ದಂತೆ. ಇದು ಸಮಯ ಮತ್ತು ಹಣದ ಉಳಿತಾಯ ಮಾಡುವುದಲ್ಲದೆ, ಸಮಾಜದಲ್ಲಿ ಶಾಂತಿ ಮತ್ತು ಬಾಂಧವ್ಯವನ್ನು ಕಾಪಾಡುತ್ತದೆ. ನಿಮ್ಮ ಪ್ರಕರಣವು ಸುಪ್ರೀಂ ಕೋರ್ಟ್ ಪಟ್ಟಿಯಲ್ಲಿ ಇಲ್ಲದಿದ್ದರೂ, ವೆಬ್‌ಸೈಟ್ ಮೂಲಕ ನೋಂದಾಯಿಸಿಕೊಂಡು ಈ ಸೌಲಭ್ಯ ಪಡೆಯಬಹುದು ಎಂದು ಅವರು ತಿಳಿಸಿದರು.
ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ಇದ್ದರು.

Supreme Court to organize 'Samadhan Samaroh' special Lok Adalat in August: Anu Sivaraman
Share. Facebook Twitter LinkedIn WhatsApp Email

Related Posts

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

2 Mins Read

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

1 Min Read

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

1 Min Read
Recent News

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

State News
KARNATAKA

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಲಸು ಮತ್ತು ಮಾವು ಪ್ರಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಬೃಹತ್ ಹಲಸು ಮತ್ತು…

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.