ನವದೆಹಲಿ: ಹಿಂದುಳಿದ ವರ್ಗದವರಿಗೆ ( backward classes ) ಶಿಕ್ಷಣ ಮತ್ತು ಉದ್ಯೋಗದಲ್ಲಿ ಆರ್ಥಿಕವಾಗಿ ( EWS) ಶೇ.10ರಷ್ಟು ಮೀಸಲಾತಿ ಕಲ್ಪಿಸುವ ಕುರಿತಂತೆ ಸಂವಿಧಾನದ 103ನೇ ತಿದ್ದುಪಡಿಯ ಸಾಂವಿಧಾನಿಕ ಮಾನ್ಯತೆ ಕುರಿತು ಸುಪ್ರೀಂ ಕೋರ್ಟ್ ನೀಂದ ( Supreme Court ) ಮಹತ್ವದ ತೀರ್ಪು ಇಂದು ಪ್ರಕಟವಾಗಲಿದೆ. ಹೀಗಾಗಿ ಎಲ್ಲರ ಚಿತ್ತ, ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನತ್ತ ನೆಟ್ಟಿದೆ.

BIGG NEWS : ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ `ಡೀಸೆಲ್ ಸಬ್ಸಿಡಿ’ ಖಾತೆಗೆ ಜಮಾ

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಸೆಪ್ಟೆಂಬರ್ 27ರಂದು ಈ ಸಂಬಂಧ ಸಲ್ಲಿಕೆಯಾಗಿದ್ದಂತ ಅರ್ಜಿಗಳ ವಿಚಾರಣೆ ನಡೆಸಿತ್ತು. ಈ ಬಳಿಕ ತನ್ನ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

BIG NEWS: ‘ಪುನೀತ್ ರಾಜ್ ಕುಮಾರ್ ಅಭಿಮಾನಿ’ಗಳಿಗೆ ಗುಡ್ ನ್ಯೂಸ್: ಇಂದಿನಿಂದ ನ.10ರವರೆಗೆ ‘ಗಂಗಧಗುಡಿ ಚಿತ್ರ’ದ ‘ಟಿಕೆಟಿ ದರ’ ಇಳಿಕೆ

ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ಹಿಂದುಳಿದ ವರ್ಗದವರಿಗೆ ಮೀಸಲು ಕಲ್ಪಿಸುವ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಸಂವಿಧಾನದ 103ನೇ ತಿದ್ದುಪಡಿಯನ್ನು ಅಸಿಂಧುಗೊಳಿಸಬೇಕೆಂದು ಒಂದು ವರ್ಗ ವಾದ ಮಾಡಿಸಿತ್ತು. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರವು ಶೇ.50:50ರ ಮೀಸಲಿಗೆ ಧಕ್ಕೆ ಬಾರದ ರೀತಿಯಲ್ಲಿ EWSಗೆ ಮೀಸಲು ಕಲ್ಪಿಸಲಾಗಿದೆ ಎಂಬುದಾಗಿ ಸಮರ್ಥಿಸಿಕೊಂಡಿತ್ತು.

Share.
Exit mobile version