ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಅಲ್ಲದೇ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನಾಳೆಗೆ ಕೋರ್ಟ್ ಮುಂದೂಡಿದೆ.
ಇಂದು ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತು. ಅವರ ನ್ಯಾಯಾಂಗ ಬಂಧನವನ್ನು ಜುಲೈ.18ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.
ಇನ್ನೂ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು, ಸಿಐಡಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ನಾಳೆಗೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.
ಅಂದಹಾಗೇ ಜೂನ್.22, 2024ರಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಯುವಕನೋರ್ವ ಹಾಸನದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದೂರು ನೀಡಿದ್ದನು. ಆ ಬಳಿಕ ಜೂನ್.23ರಂದು ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಿತ್ತು.
BREAKING: ಕೋಲಾರದಲ್ಲಿ ಮಾಲ್ಟ್ ಮಿಶ್ರಿತ ಹಾಲು ಸೇವಿಸಿದಂತ 19 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು