ಬೆಂಗಳೂರು: ಅಸಹಜ ಲೈಂಗಿಕ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ. ಹೀಗಾಗಿ ಅವರಿಗೆ ಇಂದು ರಿಲೀಫ್ ಸಿಗದಂತೆ ಆಗಿದೆ.
ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ಆರೋಪ ಪ್ರಕರಣದಲ್ಲಿ ಸಲ್ಲಿಸಿದ್ದಂದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು.
ಕೋರ್ಟ್ ಸಿಐಡಿಗೆ ನಾಳೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ, ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ. ಅಲ್ಲದೇ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ.18ಕ್ಕೆ ಮುಂದೂಡಿ ಆದೇಶಿಸಿದೆ.
BIG NEWS: ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಜು.18ರವರೆಗೆ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ | Suraj Revanna