ಸೂರತ್: ಲೋಕಸಭಾ ಚುನಾವಣೆ 2024 ರ ಫಲಿತಾಂಶಕ್ಕೂ ಮುನ್ನವೇ ಗುಜರಾತ್ನಿಂದ ಬಿಜೆಪಿಗೆ ಸಿಹಿ ಸುದ್ದಿ ಬಂದಿದೆ. ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಗೆಲುವು ಸಾಧಿಸಿದ್ದಾರೆ. ಸೂರತ್ ನಲ್ಲಿ ಮುಕೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದು, ಇತರ ಎಲ್ಲ ಅಭ್ಯರ್ಥಿಗಳು ಹಿಂದೆ ಸರಿದಿದ್ದಾರೆ.
ಸೂರತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಖುಂಬಾನಿ ಅವರ ಪ್ರಸ್ತಾಪಕರು ಹಿಂದೆ ಸರಿದಿದ್ದು, ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಉಳಿದ 8 ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಮುಖೇಶ್ ದಲಾಲ್ ಮತ ಚಲಾಯಿಸದೆ ಗೆಲುವು ಕಂಡಿದ್ದಾರೆ. ಗುಜರಾತ್ ಬಿಜೆಪಿ ಮುಖ್ಯಸ್ಥರಿಂದ ಅಭಿನಂದನೆ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂರತ್ ಮೊದಲ ಕಮಲ ಅರಳಿದೆ. ಸೂರತ್ ಲೋಕಸಭಾ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾದ ನಮ್ಮ ಅಭ್ಯರ್ಥಿ ಮುಖೇಶ್ ದಲಾಲ್ ಅವರನ್ನು ನಾನು ಅಭಿನಂದಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.