ಮಂಗಳೂರು : ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿಯವರಿಗೆ ಧನ್ಯವಾದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನೊಂದು ಟ್ವೀಟ್ ನಲ್ಲಿ ‘ಬ್ರಹ್ಮಾಂಡ ಭ್ರಷ್ಟಾಚಾರದ ಜನಕರಾದ ಕಾಂಗ್ರೆಸ್ಸಿಗರು ಮತ್ತು ಭ್ರಷ್ಟಾಚಾರದ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದ ಡಿಕೆಶಿಗೆ ಜೀವನವನ್ನೇ ಸಮಾಜ, ದೇಶಕ್ಕಾಗಿ ಮುಡುಪಾಗಿಟ್ಟ ಶ್ರೇಷ್ಠ ಮಹನೀಯರನ್ನು ಮೋದಿ ಸ್ಮರಿಸುವಾಗ ಸಹಿಸಲು ಸಾಧ್ಯವಾಗದೇ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಜನರಿಗೆ ಗೊತ್ತಾಗಿದೆ’ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ @nitin_gadkari ಹಾಗೂ ಪ್ರಧಾನಿ ಶ್ರೀ @narendramodi ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.
— Nalinkumar Kateel (@nalinkateel) November 14, 2022
ಬ್ರಹ್ಮಾಂಡ ಭ್ರಷ್ಟಾಚಾರದ ಜನಕರಾದ ಕಾಂಗ್ರೆಸ್ಸಿಗರು ಮತ್ತು ಭ್ರಷ್ಟಾಚಾರದ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದ @DKShivakumar ಅವರಿಗೆ ಜೀವನವನ್ನೇ ಸಮಾಜ, ದೇಶಕ್ಕಾಗಿ ಮುಡುಪಾಗಿಟ್ಟ ಶ್ರೇಷ್ಠ ಮಹನೀಯರನ್ನು ಶ್ರೀ @narendramodi ಅವರು ಸ್ಮರಿಸುವಾಗ ಸಹಿಸಲು ಸಾಧ್ಯವಾಗದೇ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಜನರಿಗೆ ಗೊತ್ತಾಗಿದೆ. https://t.co/UVAys6QFgT
— Nalinkumar Kateel (@nalinkateel) November 12, 2022
‘ರಾಜೀವ್ ಗಾಂಧಿ’ ಹತ್ಯೆಗೂ ಕೆಲವು ನಿಮಿಷಗಳ ಮೊದಲು ನಡೆದಿದ್ದೇನು ಗೊತ್ತಾ? ಆ ‘ಭಯಾನಕ ಕ್ಷಣ’ದ ಮಾಹಿತಿ ಇಲ್ಲಿದೆ.!