ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರಿ ನೌಕರರ ಆತ್ಮಹತ್ಯೆ ಪ್ರಕರಣ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ವೇ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಗರದಲ್ಲಿ ಸರ್ವೇ ಅಧಿಕಾರಿ ಶಿವಕುಮಾರ್(45) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಡಿಗೆರೆಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಗುಬ್ಬಿ ಮೂಲದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಡಿಗೆರೆಯಲ್ಲಿ ಸರ್ವೆ ಅಧಿಕಾರಿಯಾಗಿ ಮೃತ ಶಿವಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದರು. ಸರ್ವೆ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
BIG NEWS: ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ: ನಾಳೆಯಿಂದಲೇ ಪರಿಷ್ಕೃತ ದರ ಜಾರಿ
BREAKING: ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡನೆ | New Income Tax Bill