ತಿರುವನಂತಪುರಂ (ಕೇರಳ): ಶಂಕಿತ ಮಂಗನ ಕಾಯಿಲೆ(monkeypox)ಯ ಪ್ರಕರಣವೊಂದು ಕೇರಳದಲ್ಲಿ ವರದಿಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವರು ಇಂದು ತಿಳಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಿಂದ ಮೂರು ದಿನಗಳ ಹಿಂದೆ ಕೇರಳಕ್ಕೆ ಆಗಮಿಸಿದ ಪ್ರಯಾಣಿಕನಲ್ಲಿ ಮಂಗನ ಕಾಯಿಲೆಯ ಲಕ್ಷಣಗಳು ಕಂಡುಬಂದಿದ್ದವು. ಇದೀಗ ಅವರನ್ನು ಆಸ್ಪತ್ರೆಗೆ ದಾಖಲಿಸಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಯಾಣಿಕನ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ಫಲಿತಾಂಶಗಳನ್ನು ಪಡೆದ ನಂತರವೇ ಪ್ರಕರಣವನ್ನು ದೃಢಪಡಿಸಬಹುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ,
ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೊಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದ್ದು, ಸಿಡುಬು ರೋಗಿಗಳಲ್ಲಿ ಕಂಡುಬರುವ ರೋಗಲಕ್ಷಣಗಳನ್ನು ಹೊಂದಿರುತ್ತದೆ. ಆದರೂ ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರವಾಗಿರುತ್ತದೆ.