ತೆಲಂಗಾಣ: ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಭಾರತೀಯ ಜನತಾ ಪಕ್ಷದ (Bharatiya Janata Party – BJP) ನಾಯಕ ಟಿ ರಾಜಾ ಸಿಂಗ್ ( T Raja Singh ) ಅವರನ್ನು ಮತ್ತೆ ಇಂದು ಬಂಧಿಸಲಾಗಿದೆ.
ಪ್ರವಾದಿ ಮಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರಣ, ಬಿಜೆಪಿಯಿಂದ ಟಿ ರಾಜಾ ಸಿಂಗ್ ಅಮಾನತುಗೊಳಿಸಲಾಗಿತ್ತು. ಆ ಬಳಿಕ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ಇಂದು ಮತ್ತೆ ತೆಲಂಗಾಣ ಪೊಲೀಸರು ಹೈದರಾಬಾದ್ನ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.
ಆಗಸ್ಟ್ 23 ರಂದು ನಾಯಕನ ವಿರುದ್ಧ ಅವರ ಹೇಳಿಕೆಯ ವಿರುದ್ಧ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಹೀಗಾಗಿ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತಗೊಳಿಸಲಾಗಿತ್ತು.