ನವದೆಹಲಿ: ಸಂಸತ್ತಿನ ಅಂಗೀಕರಿಸಲಾದ ಗೊತ್ತುವಳಿಯ ನಂತರ ಸೋಮವಾರ ನಾಲ್ವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಿದ್ದನ್ನು ಹಿಂಪಡೆಯಲಾಗಿದೆ. ಮಾನ್ಸೂನ್ ಅಧಿವೇಶನದ ಉಳಿದ ಅವಧಿಗೆ ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಲಾಯಿತು.
ಕಲಾಪದಲ್ಲಿ ಬೆಲೆ ಏರಿಕೆ ಖಂಡಿಸಿ ಸದನದೊಳಗೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸುವ ಮೂಲಕ ಕಲಾಪಕ್ಕೆ ಅಡ್ಡಿಪಡಿಸಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಇಡೀ ಅಧಿವೇಶನದ ಅವಧಿಗೆ ಅಮಾನತು ಮಾಡಲಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸಂಸದರನ್ನು ಅಮಾನತುಗೊಳಿಸಿದ್ದನ್ನು ರದ್ದುಗೊಳಿಸಿದೆ.