- ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: ಬೆಂಗಳೂರಿನ ವಿಲ್ಸನ್ ಗಾರ್ಡ್‌ನ ಚಿನ್ನಯ್ಯನ ಪಾಳ್ಯದಲ್ಲಿ ಅನುಮಾಸ್ಪದ ಸ್ಪೋಟವಾಗಿದ್ದು, ಘಟನೆಯಲ್ಲಿ ಏಳು ಮಂದಿಗೆ ಗಾಯವಾಗಿದೆ. ಇದಲ್ಲದೇ ಮೂರು ಜನರ ಸ್ಥಿತಿ ಗಂಭೀರವಾಗಿದೆ ಅಂತ ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ
ಇನ್ನೂ ಘಟನ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿಗಳು ತೆರಳಿದ್ದಾರೆ ಅಂತ ತಿಳಿದು ಬಂದಿದೆ. ಇನ್ನೂ ಘಟನೆಯಲ್ಲಿ ಹತ್ತಕ್ಕು ಹೆಚ್ಚು ಮನೆಗಳು ಧ್ವಂಸಗೊಂಡಿದ್ದಾವೆ ಎನ್ನಲಾಗಿದೆ. ಘಟನೆ ಬಗ್ಗೆ ಸ್ಥಳಿಯ ಜನತೆ ಅನುಮಾನ ವ್ಯಕ್ತಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸರನ್ನು ಒತ್ತಾಯಿಸಿದ್ದಾರೆ