ನವದೆಹಲಿ: ದೆಹಲಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿಯ ತಿಸ್ ಹಜಾರಿ ನ್ಯಾಯಾಲಯವು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.
ಅಭಿನವ್ ಕುಮಾರ್ ಅವರ ನಾಲ್ಕು ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಸಂಬಂಧದ ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ನಡೆಸಿದರು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಅಭಿನವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಐದು ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ನೀಡುವಂತೆ ಕೋರಿದ್ದರು. ಕುಮಾರ್ ಅವರ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರ ಮನವಿಯನ್ನು ಅವರ ವಕೀಲರು ವಿರೋಧಿಸಿದರು. ಅವರನ್ನು ವಿಚಾರಣೆಗೆ ಒಳಪಡಿಸೋದು ಏನು ಇಲ್ಲ ಅಂತ ವಾದಿಸಿದರು. ಅಂತಿಮವಾಗಿ ವಾದ, ಪ್ರತಿವಾದ ಆಲಿಸಿದಂತ ದೆಹಲಿ ತಿಸ್ ಹಜಾರಿ ನ್ಯಾಯಾಲಯವು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
#WATCH | AAP MP Swati Maliwal assault case | Delhi's Tis Hazari Court remands back Bibhav Kumar to Police custody for three days. He was produced before the court after the expiry of four-day judicial custody
Visuals from the court as Police personnel bring him out after… pic.twitter.com/bXr3xOso5c
— ANI (@ANI) May 28, 2024
ಜೆಸ್ಕಾಂ ಗ್ರಾಹಕರೇ ಗಮನಿಸಿ: ಮಳೆ, ಗಾಳಿಗೆ ವಿದ್ಯುತ್ ಆಡಚಣೆ ಉಂಟಾದರೆ ಈ ಸಂಖ್ಯೆಗೆ ಸಂಪರ್ಕಿಸಿ
BREAKING : ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪುಂಡರು : ಮೂವರ ಬಂಧನ