ನವದೆಹಲಿ: ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಮಾಜಿ ಸಹಾಯಕ ಬಿಭವ್ ಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.
ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ತಿರಸ್ಕೃತಗೊಳಿಸಿದೆ. ವಾದಗಳು ಮುಗಿದ ನಂತರ, ಬಿಭವ್ ಕುಮಾರ್ ಅವರನ್ನು ಸಂಜೆ 4.15ಕ್ಕೆ ಬಂಧಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಈ ಮೊದಲು ಆದೇಶವನ್ನು ಕಾಯ್ದಿರಿಸಲಾಗಿತ್ತು.
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ವೈಯಕ್ತಿಕ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮಲಿವಾಲ್ ನೀಡಿದ ದೂರಿನ ನಂತರ ದೆಹಲಿ ಪೊಲೀಸರು ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಮೇ 13 ರಂದು ಮುಖ್ಯಮಂತ್ರಿ ನಿವಾಸಕ್ಕೆ ಹೋದಾಗ ಬಿಭವ್ ಕುಮಾರ್ ತನ್ನನ್ನು 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ ಮತ್ತು ಎದೆ ಮತ್ತು ಹೊಟ್ಟೆಗೆ ಪದೇ ಪದೇ ಒದೆದಿದ್ದಾನೆ ಎಂದು ಮಲಿವಾಲ್ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.
ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ದೆಹಲಿ ಪೊಲೀಸರು ಶುಕ್ರವಾರ ಮಲಿವಾಲ್ ಅವರನ್ನು ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಕರೆದೊಯ್ದರು. ಆಕೆಯ ಹೇಳಿಕೆಯನ್ನು ತಿಸ್ ಹಜಾರಿ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ.
ನಿಗಮ-ಮಂಡಳಿ, ಸ್ಥಳೀಯ ಸಂಸ್ಥೆಗಳು ಸಭೆ ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ: ರಾಜ್ಯ ಸರ್ಕಾರ ಆದೇಶ
ಭಾರತದಲ್ಲಿ ನಾಲ್ವರಲ್ಲಿ ಒಬ್ಬರ ಮೇಲೆ ಸೈಬರ್ ದಾಳಿ: ಆತಂಕ ಮೂಡಿಸಿದ ವರದಿ