ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಹೇಳಿದಂತೆ ಗೌರವಧನವನ್ನು ರೂ.1000 ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ 148 ರಲ್ಲಿ “ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1000 ರೂ. ಹೆಚ್ಚಿಸಲಾಗುವುದು” ಎಂದು ಘೋಷಿಸಲಾಗಿದೆ ಎಂದಿದ್ದಾರೆ.
ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ ಕಾಯಕರ್ತೆಯು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ/ಪ್ರದೇಶದ ವ್ಯಾಪ್ತಿಯಲ್ಲಿ ಸಮುದಾಯದ ಆರೋಗ್ಯ ಸ್ಥಿತಿಯ ಸುಧಾರಣೆಗೆ ಆರೋಗ್ಯ ಸೇವೆಗಳನ್ನು ಪಡೆಯಲು ಮತ್ತು ಆರೋಗ್ಯ ಆರೈಕೆ ಚಟುವಟಿಕೆಗಳು ಹಾಗೂ ನಡವಳಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ 1000 ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಪ್ರತಿ 2500 ಜನಸಂಖ್ಯೆಗೆ ಒಬ್ಬರಂತೆ ಆಶಾಕಾರ್ಯಕರ್ತೆಯನ್ನು ಆಯ್ಕೆ ಮಾಡಲಾಗುವುದು, ಇದರಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 42,524 ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 41000 ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಆಯುಷ್ಮಾನ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮತ್ತು ಸಾಮೂಹಿಕ ನೆಲೆಗಟ್ಟಿನ ಕಾರ್ಯನಿರ್ವಹಣೆಯನ್ನು ಉತ್ತೇಜಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಿಂದ ತಂಡ ಆಧಾರಿತ ಪ್ರೋತ್ಸಾಹಧನವನ್ನು (Team based Incentive) ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದ್ದಾರೆ.
- ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು- ರೂ.1,500
- ಆರೋಗ್ಯ ನಿರೀಕ್ಷಣಾಧಿಕಾರಿಗಳು- ರೂ.1500
- ಆಶಾ ಕಾರ್ಯಕರ್ತೆಯರು – ರೂ.1000
ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ-ಆಯುಷ್ಮಾನ್ ಆರೋಗ್ಯ ಮಂದಿರ ಕೇಂದ್ರ ಸ್ನಾನದ ಆರೋಗ್ಯ ಉಪಕೇಂದ್ರಗಳು, ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 15004 ಆಶಾಕಾರ್ಯಕರ್ತೆಯರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ತಂಡ ಆಧಾರಿತ ಪ್ರೋತ್ಸಾಹ ಧನವು (Team based Incentive) ಅನುಮೋದನೆಯಾಗಿರುವುದಿಲ್ಲ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾಕಾರ್ಯಕರ್ತೆಯರಿಗೆ ಸಮಾನವಾಗಿ ತಂಡ ಆಧಾರಿತ ಪ್ರೋತ್ಸಾಹ ಧನವನ್ನು ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಶಾಕಾರ್ಯಕರ್ತೆಯರಿಗೆ ಮಾಸಿಕ ರೂ. 1000/- ಗಳಂತೆ ಪ್ರೋತ್ಸಾಹಧನವನ್ನು ನೀಡಲು do.1800.48 ಲಕ್ಷಗಳನ್ನು ರಾಜ್ಯ ಸರ್ಕಾರದ ಅನುದಾನದಿಂದ ಲೆಕ್ಷ ಶೀರ್ಷಿಕೆ 2211-00-103-0-11 ಉಪಲೆಕ್ಕಶೀರ್ಷಿಕೆ 324 ಅಡಿಯಲ್ಲಿ ಒದಗಿಸಲಾದ ಅನುದಾನದಿಂದ ಭರಿಸಲು ಅನುಮೋದನೆ ನೀಡುವಂತೆ ಕೋರಲಾಗಿದೆ ಎಂದಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಆಯವ್ಯಯದ ಕಂಡಿಕೆ 148 ರ ಘೋಷಣೆಯನ್ವಯ ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರೂ. 1000/- ಗಳ ( ಒಂದು ಸಾವಿರ ರೂಪಾಯಿಗಳು) ತಂಡ ಆಧಾರಿತ ಪ್ರೋತ್ಸಾಹ ಧನವನ್ನು ಪಾವತಿಸಲು ಹಾಗೂ ಇದಕ್ಕಾಗಿ ತಗಲುವ ವೆಚ್ಚ ರೂ.1800.48 2211-00-103-0-11-324 ಲಕ್ಷಗಳನ್ನು ರಣ ಒದಗಿಸಲಾದ 0.2500.00 ಲಕ್ಷಗಳ ಅನುದಾನದಲ್ಲಿ ಭರಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: 90 23-5/2025, ದಿನಾಂಕ:18.03.2025ರಲ್ಲಿ ನೀಡಿರುವ ಸಹಮತಿ ಹಾಗೂ ಸಚಿವ ಸಂಪುಟ ಟಿಪ್ಪಣಿ ಸಂಖ್ಯೆ: ಸಿ.340/2025, ದಿನಾಂಕ:09.05.2025 ರ ಅನುಮೋದನೆಯನ್ವಯ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ನಿಮ್ಮ ಮೊಬೈಲ್ ಫೋನಿನ `ಬ್ಯಾಕ್ ಕವರ್’ ಬಣ್ಣ ಬದಲಾಗಲು ಕಾರಣ ಏನು ಗೊತ್ತಾ?
ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದ ಕ್ಯಾಬ್ ಚಾಲಕ ಅರೆಸ್ಟ್