ಮೈಸೂರು: ಜಿಲ್ಲೆಯ ಟಿ.ನರಸೀಪುರದಲ್ಲಿ ಚಿರತೆ ದಾಳಿಯ ಹಾವಳಿ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಯುವತಿಯ ಮೇಲೆ ದಾಳಿ ನಡೆಸಲಾಗಿತ್ತು. ಯುವತಿ ಸಾವನ್ನು ಕೂಡ ಅಪ್ಪಿದ್ದಳು. ಈ ಬಳಿಕ, ಇಂದು ರೈತನ ಮೇಲೆ ಚಿರತೆ ಅಟ್ಟಹಾಸ ಮೆರೆದಿದೆ. ರೈತ ಚಿರತೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಮೈಸೂರು ಜಿಲ್ಲೆಯ ಟಿ.ನರಸೀಪುರದ ನುಗ್ಗಳ್ಳಿಕೊಪ್ಪಲು ಗ್ರಾಮದ ರೈತ ಸತೀಶ್ ತನ್ನ ಕಬ್ಬಿನ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಹಿಂದಿನಿಂದ ಬಂದಿರುವಂತ ಚಿರತೆ ದಿಢೀರ್ ದಾಳಿ ನಡೆಸಿದೆ. ಏಕಾಏಕಿ ಚಿರತೆ ದಾಳಿಯಿಂದಾಗಿ ಗಾಬರಿಯಾದಂತ ರೈತ ಸತೀಶ್, ಹೇಗೋ ತಪ್ಪಿಸಿಕೊಂಡಿದ್ದಾರೆ.
ಚಿತ್ರದುರ್ಗ: ಡಿ.22ರಿಂದ ಕೇತೇದೇವರ ಜಾತ್ರೆ ಆರಂಭ, ಜ.9ರಂದು ಎರೆದ ಕಳ್ಳೆ ಗುಡಿಹತ್ತಿ ಕಳಸ ಇಳಿಸುವ ಕಾರ್ಯಕ್ರಮ
ಚಿರತೆ ದಾಳಿಯಿಂದ ತಪ್ಪಿಸಿಕೊಂಡ ಅವರನ್ನು ಗ್ರಾಮಸ್ಥರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ.
ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಿರತೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
‘ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ’ಯಿಂದ ಮತ್ತಷ್ಟು ಅಭಿವೃದ್ಧಿ ಸಾಧ್ಯ- ಮಾಜಿ ಸಿಎಂ ಎಸ್.ಎಂ.ಕೃಷ್ಣ