ಸುಭಾಷಿತ :

Tuesday, April 7 , 2020 6:55 PM

ಮೊದಲ ಟಿ20 : ಆಸ್ಟ್ರೇಲಿಯಾ ತಂಡಕ್ಕೆ ಭಾರತದ ವಿರುದ್ಧ ರೋಚಕ ಜಯ


Monday, February 25th, 2019 7:38 am

ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ 3 ವಿಕೆಟ್ ಗಳ ಅಂತರದಲ್ಲಿ ಭಾರತ ವಿರುದ್ಧ ಜಯ ಸಾಧಿಸಿದೆ.

ಈ ಮೂಲಕ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 126ರನ್ ಗಳಿಸಿ ಆಸಿಸ್ ಪಡೆಗೆ ಗೆಲ್ಲಲು 127 ರನ್ ಗಳ ಗುರಿ ನೀಡಿತು. 127 ರನ್​ಗಳ ಸುಲಭ ಗುರಿ ಬೆನ್ನಟ್ಟಿದ್ದ ಆಸ್ಟ್ರೇಲಿಯಾಕ್ಕೆ ಆರಂಭದಲ್ಲಿ ಟೀಮ್ ಇಂಡಿಯಾ ಕಠಿಣ ಬೌಲಿಂಗ್ ದಾಳಿ ಮಾಡಿ , ತಡೆಯಾದರೂ ಕೊನೆಯ ಓವರ್ ವರೆಗೂ ಸೆಣಸಿ ಆಸ್ಟ್ರೇಲಿಯಾ ಮೊದಲ ಪಂದ್ಯ ಗೆದ್ದಿದೆ.

ಜೇಯ್ ರಿಚರ್ಡ್​​ಸನ್ ಹಾಗು ಪ್ಯಾಟ್​ ಕಮ್ಮಿನ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗ್ಲೇನ್ ಮ್ಯಾಕ್ಸ್ ​ವೆಲ್, ಅರ್ಧಶತಕ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಭಾರತದ ಪರ ಬುಮ್ರಾ 3 ವಿಕೆಟ್​ ಪಡೆದರೆ, ಯಜುವೇಂದರ ಚಹಾಲ್ ಹಾಗು ಕೃಣಾಲ್ ಪಾಂಡ್ಯ ತಲಾ 1 ವಿಕೆಟ್ ಪಡೆದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions