ಹೊಸದಿಲ್ಲಿ: ಬೆನ್ನುನೋವಿನಿಂದಾಗಿ ದೀಪಕ್ ಚಹಾರ್ ಮುಂಬರುವ ಟಿ20 ವಿಶ್ವಕಪ್ನಿಂದ ಹೊರಗುಳಿದಿರುವಂತೆಯೇ ವೇಗದ ಬೌಲರ್ಗಳಾದ ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಶಾರ್ದೂಲ್ ಠಾಕೂರ್ ಶೀಘ್ರದಲ್ಲೇ ಆಸ್ಟ್ರೇಲಿಯಾದಲ್ಲಿ ಭಾರತೀಯ ತಂಡವನ್ನು ಸೇರಿಕೊಳ್ಳಲಿದ್ದಾರೆ. ಜಸ್ಪ್ರೀತ್ ಬೂಮ್ರಾ ಅವರ ಅನುಪಸ್ಥಿತಿಯಲ್ಲಿ ಸ್ಟ್ಯಾಂಡ್-ಬೈ ಆಟಗಾರರಲ್ಲಿ ಒಬ್ಬರಾಗಿದ್ದ ಚಹರ್ ಮುಖ್ಯ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು, ಆದರೆ ಅವರ ಬೆನ್ನಿನ ಗಾಯವು ಗುಣವಾಗಲು ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿದುಬಂದಿದೆ.
ಚಹರ್ ದಕ್ಷಿಣ ಆಫ್ರಿಕಾ ವಿರುದ್ಧದ T20ಸರಣಿಯಲ್ಲಿ ಸ್ಪರ್ಧಿಸಿದ್ದರು ಆದರೆ ಬೆನ್ನು ನೋವಿನಮಮ ಸಮಸ್ಯೆಯಿಂದ ಅವರು ಏಕದಿನ ಸರಣಿಯನ್ನು ತ್ಯಜಿಸಬೇಕಾಯಿತು ಎನ್ನಲಾಗಿದೆ.