cm yediyurappa – Kannada News Now


State

ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು ಎಂದಿದ್ದಾರೆ.

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು. ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದು ದುಖ ವ್ಯಕ್ತ ಪಡಿಸಿದ್ದಾರೆ.

ಇದು ಗಾನ ಗಂಧರ್ವ ‘ಎಸ್.ಪಿ.ಬಾಲಸುಬ್ರಹ್ಮಣ್ಯಂ’ ಜೀವನ ‘ಗಾಯನ ಯಾತ್ರೆ’

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

State

ಬೆಂಗಳೂರು : ದೆಹಲಿಯಿಂದ ಸಿಎಂ ಯಡಿಯೂರಪ್ಪ ಅವರು ಹಿಂದಿರುಗಿದ ನಂತ್ರ ಸಂಪುಟ ವಿಸ್ತರಣೆ ಆಗಲಿದೆ. ತಮಗೆ ಸಚಿವ ಸ್ಥಾನ ಇನ್ನೇನು ಸಿಕ್ಕೇ ಬಿಡ್ತು ಎಂಬುದಾಗಿ ನಿರೀಕ್ಷೆ ಮಾಡಲಾಗಿತ್ತು. ಅಲ್ಲದೇ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಲಿದೆ ಎನ್ನುವವರಿಗೆ ಬಿಗ್ ಶಾಕ್ ನೀಡಿದೆ.

‘2 ಸಾವಿರ ನೋಟು’ಗಳ ಮುದ್ರಣ ಸ್ಥಗಿತದ ಬಗ್ಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಕೇಂದ್ರ ಸರ್ಕಾರ

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ವಾಪಾಸ್ ಆಗಿದ್ದಾರೆ. ಬೆಂಗಳೂರಿನ ಏರ್ಪೋರ್ಟ್ ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು, ಪ್ರಧಾನಿಯೊಂದಿಗೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

BIG BREAKING : ರಾಜ್ಯದಲ್ಲಿ 5 ಲಕ್ಷ ಗಡಿದಾಟಿದ ಕೊರೋನಾ : ಇಂದು 8,364 ಜನರಿಗೆ ಕೊರೋನಾ ದೃಢ, 114 ಜನರು ಸಾವು

ಹೀಗಾಗಿ ಕೇಂದ್ರದ ಬಿಜೆಪಿ ವರಿಷ್ಠರು ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗ್ರೀನ್ ಸಿಗ್ನಲ್ ನೀಡಿಲ್ಲ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ಸಚಿವಸ್ಥಾನ ಆಕಾಂಕ್ಷಿಗಳಿಗೆ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡದಿರುವುದು, ಈಗ ಬಿಗ್ ಶಾಕ್ ನೀಡಿದಂತೆ ಆಗಿದೆ. ಅಲ್ಲದೇ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದವರಿಗೂ ಶಾಕ್ ನೀಡಿದಂತೆ ಆಗಿದೆ.

ಸೆ.21ರಿಂದ ಮಧ್ಯಪ್ರದೇಶದಲ್ಲಿ ಹಂತಹಂತವಾಗಿ ಸರ್ಕಾರಿ, ಖಾಸಗೀ ಶಾಲೆಗಳು ಪುನರಾರಂಭ

State

ಬೆಂಗಳೂರು : ಮಹತ್ವದ ಬೆಳವಣಿಗೆ ಎನ್ನುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆ ಬೆಳಿಗ್ಗೆ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಪಿಎಂ ಭೇಟಿಯಾಗಲಿರುವ ಸಿಎಂ, ರಾಜ್ಯದ ನೆರೆ ನಿರ್ವಹಣೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಮಾತುಕತೆ ನಡೆಸಲಿದ್ದಾರೆ.

ರಾಜ್ಯದ ವಿವಿಧ ಸಮಸ್ಯೆಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸುವ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ನಾಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 10.45ಕ್ಕೆ ಪಿಎಂ ಮೋದಿಯವರನ್ನು ಭೇಟಿಯಾಗರುವ ಸಿಎಂ ಯಡಿಯೂರಪ್ಪ, ನೆರೆ ಪರಿಹಾರ ಕಾಮಗಾರಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬಳಿಕ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿರುವಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

State

ಬೆಂಗಳೂರು : ಐಸಿಎಟಿಟಿ ಸಹಯೋಗದೊಂದಿಗೆ ದಕ್ಷಿಣ ಭಾರತದ ಮೊದಲ “ಇಂಟಗ್ರೇಟೆಡ್ ಏರ್‌ ಆಂಬುಲೆನ್ಸ್‌” ನನ್ನು ಮಂಗಳವಾರ ಜಕ್ಕೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು.

 ಹಲವು ಅತ್ಯಾಧುನಿಕ ವೈದ್ಯಕೀಯ ವ್ಯವಸ್ಥೆಗಳನ್ನು ಒಳಗೊಂಡಿರುವ ಈ ಸೇವೆಯು ಕೋವಿಡ್ ರೋಗಿಗಳಿಗಾಗಿ ಪ್ರತ್ಯೇಕ ವ್ಯವಸ್ಥೆಯನ್ನೂ ಒಳಗೊಂಡಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.‌ಸುಧಾಕರ್, ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಆರೋಗ್ಯ ಸಚಿವ ಶ್ರೀ ರಾಮುಲು ಸೇರಿದಂತೆ ಇತರರು ಉಪಸ್ಥಿತರಿದ್ದರು.

State

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಲಾಕ್ ಡೌನ್ ಅಗತ್ಯವಿಲ್ಲ. ಹೀಗಾಗಿ ಮತ್ತಷ್ಟು ವಿನಾಯಿತಿ ನೀಡುವಂತೆ ನಾಳೆ ವಿಡಿಯೋ ಕಾನ್ಫರೆನ್ಸ್ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮನವಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಂದು ಅವಧಿಗೆ ಲಾಕ್ ಡೌನ್ ವಿಸ್ತರಿಸುವ ಅಗತ್ಯವಿಲ್ಲ. ಮತ್ತಷ್ಚು ರಿಲ್ಯಾಕ್ಸ್ ನೀಡಿ ಜನಜೀವನ, ಆರ್ಥಿಕ ಸ್ಥಿತಿ ಸುಧಾಕರಣೆಗೆ ಅವಕಾಶ ಮಾಡಿಕೊಡುವಂತೆ ನಾಳೆ ವಿಡಿಯೋ ಕಾನ್ಫರೆನ್ಸ್ ವೇಳೆ ಪ್ರಧಾನಿ ಅವರಿಗೆ ಮನವಿ ಮಾಡಿಕೊಡುವುಗಾಗಿ ಯಡಿಯೂರಪ್ಪ ತಿಳಿಸಿದರು.  ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಹೊರಗಿನಿಂದ ಬಂದವರಿಂದ ಇಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆಯೂ ಪ್ರಧಾನಿ ಅವರಿಗೆ ತಿಳಿಸಲಾಗುತ್ತದೆ ಎಂದರು. ರಾಜ್ಯದಲ್ಲಿ ಕೋವಿಡ್- 19 ನಿಂದ ತಪ್ಪಿಸಿಕೊಳ್ಳಲು ಅತ್ಯಂತ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಅತಿಹೆಚ್ಚು ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ ಎಂತಲೂ ಸಿಎಂ ತಿಳಿಸಿದರು.

ಇದೇ ವೇಳೆ, ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪ್ರಸ್ತಾಪಿಸಿದ ಸಿಎಂ, ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು….

State

ಬೆಂಗಳೂರು : ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು.

ಈ ಸಭೆಯಲ್ಲಿ ‌ಭಾಗವಹಿಸಿದ್ದ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ‌ ಸಂಘ ಹಾಗು ಟ್ಯಾಕ್ಸಿ ಮಾಲಿಕರ‌ ಸಂಘಗಳ ನಿಯೋಗವು ಸರ್ಕಾರದ ಮುಂದೆ‌ ಕೆಲ ಬೇಡಿಕೆಗಳನ್ನು‌ ಮುಂದಿಟ್ಟರು. ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

State

ಬೆಂಗಳೂರು : ಇದುವರೆಗೆ ಮುಖ್ಯಮಂತ್ರಿಗಳ ಕಚೇರಿ ಸೇರಿದಂತೆ ಸಚಿವಾಲಯದ ಕಚೇರಿಗಳಲ್ಲಿ ಕಡತಗಳ ಮೂಲಕವೇ ವ್ಯವಹಾರ ನಡೆಯುತ್ತಿತ್ತು. ಈ ಮೂಲಕವೇ ಫೈಲ್ ಒಂದು ಒಂದು ಟೇಬಲ್ ನಿಂದ ಮತ್ತೊಂದು ಟೇಬಲ್ ಗೆ ಸುತ್ತಿಕೊಂಡು ಬಂದು, ಯೋಜನೆ, ಕೆಲಸ ಕಾರ್ಯದ ಜಾರಿಕಾರ್ಯ ನಡೆಯುತ್ತಿತ್ತು. ಆದ್ರೇ ಇನ್ಮುಂದೆ ನೋ ಭೌತಿಕ ಕಡತ ವ್ಯವಹಾರವಾಗಿದೆ. ಏನಿದ್ದರೂ ಇ-ಆಫೀಸ್ ಮೂಲಕವೇ ವ್ಯವಹಾರವನ್ನು ನಡೆಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ದಿನಾಂಕ 1-05-2020ರಿಂದ ಜಾರಿಗೆ ಬರುವಂತೆ ಇ-ಆಫೀಸ್ ಅನ್ನು ಅನುಷ್ಠಾನಗೊಳಿಸಲಾಗಿದೆ. ಅದೇ ರೀತಿ ಇ-ಆಫೀಸ್ ತಂತ್ರಾಂಶವನ್ನು ಬಳಸಿ ದಿನಾಂಕ 01-05-2020ರಿಂದ ಜಾರಿಗೆ ಬರುವಂತೆ ನನ್ನ ಕಚೇರಿಯಿಂದ ಸಚಿವಾಲಯದ ಎಲ್ಲಾ ಇಲಾಖೆ, ಅಧೀನ ಸಂಸ್ಥೆಗಳಿಗೆ ಇ-ಆಫೀಸ್ ಮೂಲಕವೇ ವ್ಯವಹಿಸಲಾಗುತ್ತಿದೆ.

ರಾಜ್ಯ ಮಟ್ಟದ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಕಚೇರಿ, ಎಲ್ಲಾ ಪ್ರಾದೇಶಿಕೆ ಆಯುಕ್ತರ ಕಚೇರಿ, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯತ್, ಪೊಲೀಸ್ ವರಿಷ್ಠಾಧಿಕಾರಿಗಳ, ಉಪ ಅರಣ್ಯ ಸಂರಕ್ಷಣಾಧಿಕಾರಿ(ಪ್ರಾದೇಶಿಕ) ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ(ಸಾಮಾಜಿಕ)ಗಳ ಕಚೇರಿಗಳಲ್ಲಿ ದಿನಾಂಕ 01-01-2020ರಿಂದ ಜಾರಿಗೆ ಬರುವಂತೆ ಇ-ಆಫೀಸ್ ಅನ್ನು ಜಾರಿಗೆ ತರಲಾಗಿದೆ.

ಕೊರೋನಾ ಸೋಂಕು ದಿನದಿಂದ ದಿನ ಏರಿಕೆಯಾಗುತ್ತಿರುವುದರಿಂದ ಇನ್ನು ಮುಂದೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ ನನ್ನ ಕಚೇರಿಗೆ ಇ-ಆಫೀಸ್ ಮೂಲಕ ಮಾತ್ರ ಕಡತ ಮತ್ತು ಪತ್ರಗಳನ್ನು ಸಲ್ಲಿಸಬೇಕು ಹಾಗೂ ಎಲ್ಲಾ ಸಚಿವರು ನಿಮ್ಮ ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶವನ್ನು ಅನುಷ್ಟಾನಗೊಳಿಸಿ, ಎಲ್ಲಾ ಕಡತ ಹಾಗೂ ಪತ್ರಗಳನ್ನು ಇ-ಆಫೀಸ್ ತಂತ್ರಾಂಶದ ಮೂಲಕ ನಿರ್ವಹಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದ್ದಾರೆ.

State

ಬೆಂಗಳೂರು : ಈಗಾಗಲೇ ಜೂನ್ 1ರಿಂದ ದೇವರ ದರ್ಶನ ಭಾಗ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಂತ ರಾಜ್ಯ ಸರ್ಕಾರ, ಇದೀಗ ದೇವಸ್ಥಾನ ಸೇರಿದಂತೆ ಮಸೀದಿ, ಚರ್ಚ್ ಗಳನ್ನು ಜೂನ್ 1ರಿಂದ ತೆರೆಯಲು ಅವಕಾಶ ನೀಡಿದೆ. ಈ ಮೂಲಕ ಜೂನ್ 1ರಿಂದ ದೇವಸ್ಥಾನ, ಚರ್ಚ್, ಮಸೀದಿಗಳ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಿದೆ.

ವಿಧಾನ ಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯ ತಿಥಿ ಅಂಗವಾಗಿ ಹಮ್ಮಿಕೊಂಡಿದ್ದ ನೆಹರು ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ರೇ, ಇದೇ ನಿಯಮ ಚರ್ಚ್, ಮಸೀದಿಗಳಿಗೂ ಅನ್ವಯ ಆಗಲಿದೆ ಎಂದು ತಿಳಿಸಿಸಿದ್ದಾರೆ.

ಹೀಗಾಗಿ ಜೂನ್ 1ರಿಂದ ದೇವರ ದರ್ಶನ ಭಾಗ್ಯವಷ್ಟೇ ಅಲ್ಲದೇ, ಮಸೀದಿ, ಚರ್ಚ್ ಗಳೂ ಕೂಡ ತೆರೆಯಲಿವೆ. ಈ ಮೂಲಕ ದೇವಾಲಯ, ಮಸೀದಿ, ಚರ್ಚ್ ಗಳು ಜೂನ್ 1ರಿಂದ ಓಪನ್ ಆಗಲಿವೆ.

State

ಬೆಂಗಳೂರು : ಲಾಕ್ ಡೌನ್ ನಂತ್ರ, ರಾಜ್ಯಾಧ್ಯಂತ ನಾಳೆಯಿಂದ ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಸಂಚಾರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದಾರೆ. ಆದ್ರೇ ಇದೆ ಸಂದರ್ಭದಲ್ಲಿ ಲಾಕ್ ಡೌನ್ ನಡುವೆಯೂ ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರ ಏರಿಕೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಸ್ಪಷ್ಟ ಪಡಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

ಈ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೆ ಎಸ್ ಆರ್ ಟಿ ಬಿಸ್ ಟಿಕೆಟ್ ದರ ಸದ್ಯಕ್ಕೆ ಏರಿಕೆ ಮಾತನಾಡೋದಿಲ್ಲ. ನಮಗೆ ಗೊತ್ತು ಲಾಸ್ ಆಗುತ್ತಿದೆ ಅಂತ. ಆದ್ರೇ ಲಾಸ್ ಆದ್ರೂ ಆಗಲಿ, ನಾವು ಯಾವುದೇ ಕಾರಣಕ್ಕೂ ಇದೀಗ ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದಾರೆ.

State

ಬೆಂಗಳೂರು : ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಂತ ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರ್ಜರಿ ಗಿಫ್ಟ್ ನೀಡಿದ್ದು, ಮೆಕ್ಕೇಜೋಳ ಬೆಳೆದ 10 ಲಕ್ಷ ರೈತರಿಗೆ ತಲಾ‌ ಐದು‌ ಸಾವಿರ ರೂ ಪರಿಹಾರ ಘೋಷಿಸಿದ ಸಿಎಂ‌ ಯಡಿಯೂರಪ್ಪ. ಈ ಯೋಜನೆಗೆ 500 ಕೋಟಿ ಮೀಸಲು ಇಟ್ಟಿದ್ದಾರೆ.

ಈ ಕುರಿತಂತೆ ವಿಧಾನ ಸೌಧದದಲ್ಲಿ ತುರ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಲಾಕ್ ಡೌನ್ ನಿಂದಾಗಿ ಮೆಕ್ಕೆಜೋಳ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ರೈತರ ನೆರವಿಗೆ ಸರ್ಕಾರ ಧಾವಿಸಲಿದೆ. ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ 10 ಲಕ್ಷ ರೈತರು ಲಾಕ್ ಡೌನ್ ನಿಂದಾಗಿ ಮೆಕ್ಕೆಜೋಳ ಬೆಳೆದು ಮಾರಲಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ರೈತರ ಬೆನ್ನಿಗೆ ರಾಜ್ಯ ಸರ್ಕಾರ ನಿಂತಿದೆ. ಮೆಕ್ಕೆಜೋಳ ಬೆಳೆದ ರೈತರಿಗೆ ತಲಾ 5 ಸಾವಿರ ರೂಪಾಯಿಯಷ್ಟು ಪರಿಹಾರ ನೀಡಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಿದರು.

ಇದೇ ಸಂದರ್ಭದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಯಿಂದ ರೈತರಿಗೆ ಯಾವುದೇ ತೊಂದರೆಯಾಗಲ್ಲ. ಎಪಿಎಂಸಿ ಕಮಿಟಿಗಳಿಗೆ ಧಕ್ಕೆ ಯಾಗಲ್ಲ. ರೈತರು ತಮ್ಮ ಉತ್ಪನ್ನಗಳನ್ನು ನೇರ ಮಾರಾಟ ಮಾಡಲು ಅವಕಾಶ ದೊರೆಯಲಿದೆ.‌ ಈ ಬಗ್ಗೆ ಪ್ರತಿಪಕ್ಷ ನಾಯಕರು ಹಾಗೂ‌ ರೈತ ಮುಖಂಡರಿಗೆ ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದರು.