kannada kannada kannada latest news kannada latest news kannada news kannada news – Page 2 – #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath




State

ಬೆಂಗಳೂರು : ಕೊರೊನಾ ಸೋಂಕಿನಿಂದ ಗುಣಮುಖರಾದ ಡಿ.ಕೆ ಶಿವಕುಮಾರ್ ನಿನ್ನೆಯಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ, ಡಿಕೆಶಿ ಹೋಂ ಕ್ವಾರಂಟೈನ್ ನಲ್ಲಿದ್ದು, ಇನ್ನೂ ಒಂದು ವಾರಗಳ ಕಾಲ ಯಾರನ್ನೂ ಭೇಟಿ ಮಾಡಲಿಕ್ಕೆ ಆಗುವುದಿಲ್ಲ. ಎಲ್ಲರೂ ದಯವಿಟ್ಟು ಸಹಕರಿಸಿ ಎಂದು ವಿಡಿಯೋ ಮೂಲಕ ಡಿಕೆಶಿ ಮನವಿ ಮಾಡಿದ್ದಾರೆ.

ನಿಮ್ಮೆಲ್ಲರ ಪ್ರೀತಿ, ರಾಜ್ಯದ ಜನರ ಪ್ರಾರ್ಥನೆಯಿಂದಾಗಿ ನಾನು ಕೊರೊನಾದಿಂದ ಗುಣಮುಖನಾಗಿ ಮನೆಗೆ ಬಂದಿದ್ದೇನೆ, ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು ಎಂದಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ ಇಂದು 117 ಜನ ಗುಣಮುಖ, 175 ಹೊಸ ಪ್ರಕರಣಗಳು ದೃಡ


State

ಬೆಂಗಳೂರು : ಕಿಲ್ಲರ್ ಕೋವಿಡ್ ಗೆ ಸಿಲಿಕಾನ್ ಸಿಟಿ ಶೇಕ್ ಆಗಿದ್ದು, ಬೆಂಗಳೂರಿನಲ್ಲಿ ಇಂದು 3552 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಹಾಗೂ 21 ಬಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 3538 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ 123862 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 40929 ಸಕ್ರಿಯ ಪ್ರಕರಣಗಳಿದೆ.

ಇನ್ನೂ, ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಪೋಟ ಉಂಟಾಗಿದೆ. ಇಂದು 9,140 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,49,551ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇದುವರೆಗೆ 3,44,556 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 97,815 ಸಕ್ರೀಯ ಸೋಂಕಿತರಿದ್ದಾರೆ.

ಕೊರೊನಾರ್ಭಟಕ್ಕೆ ಕರುನಾಡು ತತ್ತರ : ಕಿಲ್ಲರ್ ಕೊರೊನಾ ಸೋಂಕಿಗೆ ಇಂದು 94 ಬಲಿ


State

ಮೈಸೂರು : ಮೈಸೂರು ದಸರಾ ಮಹೋತ್ಸವ 2020ರ ಅಂಗವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್  ಅವರ ಅಧ್ಯಕ್ಷತೆಯಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ‌ ಸಿ.ಟಿ.ರವಿ ಅವರ ಉಪಸ್ಥಿತಿಯಲ್ಲಿ ಶನಿವಾರ ಮೈಸೂರಿನಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ.

ದಸರಾ ಕಾರ್ಯಕಾರಿ ಸಮಿತಿ ಸಭೆಯ ಮುಖ್ಯಾಂಶಗಳು;

ಕೋವಿಡ್  ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರುತ್ತದೆ.

ಬರುವ ಅಕ್ಟೋಬರ್ 2 ರಂದು ಮಧ್ಯಾಹ್ನ 12:18 ಗಂಟೆಗೆ ದಸರಾ ಗಜಪಡೆ ಸ್ವಾಗತ ಕಾರ್ಯಕ್ರಮ ಮೈಸೂರು ಅರಮನೆ ಆವರಣದಲ್ಲಿ ಏರ್ಪಡಿಸಲಾಗಿದೆ.

ಈ ಹಿಂದೆ ವೀರನ ಹೊಸಹಳ್ಳಿಯಲ್ಲಿ ಆಯೋಜಿಸುತ್ತಿದ್ದ ಗಜಪಯಣ ಸಮಾರಂಭ ಇರುವುದಿಲ್ಲ.

ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆಯ ಆಗಮನವಾಗಲಿದೆ.

ಈ ಬಾರಿ‌ ಕೊರೊನಾ ವಾರಿಯರ್ಸ್ ಗಳಿಂದ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.

ಐವರು ಕೊರೊನಾ ವಾರಿಯರ್ಸ್ ಗಳ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದು, ಉಳಿದವರಿಗೆ ಸನ್ಮಾನ ಮಾಡಲಾಗುತ್ತದೆ. ಈ ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಸೇರಿಸಿಕೊಳ್ಳುವ ಬಗ್ಗೆ ಪ್ರಸ್ತಾಪ‌ಬಂದಿದೆ.

2020ರ ಅಕ್ಟೋಬರ್ 17 ರಂದು  ಬೆಳಿಗ್ಗೆ 7:45 ರಿಂದ 8:15 ರೊಳಗಿನ ಶುಭ ಮುಹೂರ್ತದಲ್ಲಿ ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.

ದಸರಾ ದೀಪಾಲಂಕಾರ ಪ್ರತಿ ಬಾರಿಯಂತೆಯೇ ವಿದ್ಯುತ್ ನಿಗಮದ ವತಿಯಿಂದ ಇರಲಿದೆ.

ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ.

ಅರಮನೆ ಆವರಣದೊಳಗೆ ನಡೆಯುವ ಜಂಬೂ ಸವಾರಿಗೆ ಎರಡು ಸಾವಿರ ಮಂದಿಗೆ ಅವಕಾಶ ಸಾಮರ್ಥ್ಯವಿದೆ.  ಆದರೆ ಎಷ್ಟು ಜನರ ಸೇರಿಸಲು ಅನುಮತಿ‌ ಸಿಗುತ್ತದೋ ನೋಡಿ, ಆಹ್ವಾನಿತರ ಸಂಖ್ಯೆಯನ್ನು ನಿರ್ಧರಿಸಲಾಗುವುದು.

ಕೇಂದ್ರ ಸರ್ಕಾರದ ಮಾರ್ಗ ಸೂಚಿ ಪ್ರಕಾರವೇ ಮೆರವಣಿಗೆ ನಡೆಸಲಾಗುವುದು.

ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಲಿದೆ.

ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲ.

ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ‌.

ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು.

ಎಲ್ಲಾ ಕಾರ್ಯಕ್ರಮಗಳನ್ನು ಸಾಮಾಜಿಕ‌ ಜಾಲ ತಾಣದಲ್ಲಿ ನೇರ ಪ್ರಸಾರ ಮಾಡಲಾಗುವುದು.‌

ಸಭೆಯಲ್ಲಿ ಶಾಸಕರಾದ ಎಸ್.ಎ. ರಾಮದಾಸ್, ತನ್ವೀರ್ ಸೇಠ್, ಎಲ್.‌ನಾಗೇಂದ್ರ, ಆರ್. ಧರ್ಮಸೇನ, ಕೆ.ಟಿ.ಶ್ರೀಕಂಠೇಗೌಡ, ಕೆ. ಮಹದೇವ, ಅಶ್ವಿನ್ ಕುಮಾರ್, ಹರ್ಷವರ್ಧನ್, ಮೇಯರ್ ತಸ್ನೀಂ, ಮುಡಾ ಅಧ್ಯಕ್ಷರಾದ ಹೆಚ್.ವಿ. ರಾಜೀವ್, ಜಿಲ್ಲಾಧಿಕಾರಿ ಬಿ.ಶರತ್, ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಶ್ಯಂತ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲೆಕ್ಸಾಂಡರ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಚಾಮುಂಡಿಬೆಟ್ಟದ ಪ್ರಧಾನ ಅರ್ಚಕರಾದ ಡಾ. ಶಶಿಶೇಖರ್ ದೀಕ್ಷಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ‌ ಎಸ್. ರಂಗಪ್ಪ, ಯುವ ಸಬಲೀಕರಣ ಇಲಾಖೆ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

ʼಉಜ್ವಲ ಯೋಜನೆʼಯಡಿ ಉಚಿತ ʼLPGʼ ಸಿಲಿಂಡರ್‌ ಪಡೆಯಲು ಈ ರೀತಿ ಮಾಡಿ..!