kannada news breaking – Page 2 – Kannada News Now
Bangalore State

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಸೋಂಕು ಬೆಂಬಿಡದೇ ಕಾಡುತ್ತಿದೆ. ಏತನ್ಮಧ್ಯೆ, ಬೆಂಗಳೂರು ಪಾಲಿಗೆ ಮೇ ತಿಂಗಳು ಕಂಟಕವಾಗಲಿದೆ ಎಂದು ತಜ್ಞರು ಎಚ್ಚರಿಕೆ ಕೊಟ್ಟಿದ್ದು, ಇನ್ನಷ್ಟು ಭೀತಿ ತಂದೊಡ್ಡಿದೆ. ಮುಂದಿನ ವಾರ ಬೆಂಗಳೂರಿನಲ್ಲಿ ಮತ್ತಷ್ಟು ಕೊರೊನಾ ಹೆಚ್ಚಳವಾಗಲಿದ್ದು, ಮೇ ಅಂತ್ಯಕ್ಕೆ 5 ಸಾವಿರ ಪ್ರಕರಣ ಪತ್ತೆಯಾಗಬಹುದು ಎಂದು  ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. 

ಲಾಕ್‍ಡೌನ್ ಸಡಿಲಿಕೆ ಆಗಿದ್ದು,  ಮುಂದಿನ ವಾರ ಬೆಂಗಳೂರಿನಲ್ಲಿ ಹೈ ರಿಸ್ಕ್ ಎದುರಾಗಲಿದೆ ಅಂತ ತಜ್ಞರು ಸೂಚಿಸಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್‍ಗೆ ‘ಪ್ಲಾನ್ ಬಿ’  ರೆಡಿ ಮಾಡುವಂತೆ ಸಲಹೆ ನೀಡಿದ್ದಾರೆ. ವಿದೇಶಗಳಿಂದ ಬೆಂಗಳೂರಿಗೆ ಆಗಮಿಸುತ್ತಿರುವವರ ಮೇಲೆ  ಹದ್ದಿನ ಕಣ್ಣು ಇಡಲು ಸೂಚಿಸಲಾಗಿದೆ. ಮೊದಲಿಗೆ ಎಲ್ಲಾ ವಾರ್ಡ್ ಗಳಲ್ಲಿ ಮತ್ತಷ್ಟು ತಂಡ ರಚನೆ ಮಾಡಬೇಕು. ಗ್ರೀನ್ ಝೋನ್ ಅಂತ ನಿರ್ಲಕ್ಷ್ಯವಹಿಸಬಾರದು. ನಿರಂತರ ಹೆಲ್ತ್ ಸ್ಕ್ರೀನಿಂಗ್ ಇರಲಿ ಎಂದು ಸಲಹೆ ನೀಡಿದ್ದಾರೆ. ಇದರೊಂದಿಗೆ ಮುಖ್ಯವಾಗಿ ಸಿಸಿಟಿವಿ ಅಳವಡಿಸಿ, ಸಿಕ್ಕಸಿಕ್ಕಲ್ಲಿ ಉಗುಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ. ಜೊತೆಗೆ ಸ್ವಚ್ಛ ಬೆಂಗಳೂರಿನತ್ತ ಗಮನ ಹರಿಸಿ ಅಂತ ಸಲಹೆ ನೀಡಿದ್ದಾರೆ. ಬಿಬಿಎಂಪಿ ವಿಪತ್ತು ನಿರ್ವಹಣ ಕೋಶ ಸದ್ಬಳಕೆ ಮಾಡಿ ಕಾರ್ಮಿಕರು, ದುರ್ಬಲರು, ಗರ್ಭಿಣಿಯರು, ವಯಸ್ಸಾದವರ ಡೇಟಾ ಬೇಸ್ ರೆಡಿ ಇಟ್ಟುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಬೆಂಗಳೂರು ಜಿಲ್ಲಾಡಳಿತಕ್ಕೂ ಹೊರ ಜಿಲ್ಲೆಯಿಂದ ಬರುವವರ ಕೈಗೆ ಸೀಲ್ ಹಾಕಿ, ಹೋಮ್ ಕ್ವಾರಂಟೈನ್ ಮಾಡುವಂತೆ ಸೂಚಿಸಲಾಗಿದೆ….India

ವೈಜಾಗ್ : ಆಂಧ್ರಪ್ರದೇಶದ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಷಣಕ್ಕೂ ಆತಂಕ ಹೆಚ್ಚುತ್ತಿದೆ. ಇನ್ನು ಈ ದುರ್ಘಟನೆಗೆ ಅಪಾಯಕಾರಿ ಸ್ಟೆರಿನ್ ಟ್ಯಾಂಕ್ ನಿರ್ವಹಣೆಯಲ್ಲಿನ ಲೋಪವೇ ಕಾರಣ ಎಂದು ಎಲ್.ಜಿ.ಪಾಲಿಮರ್ಸ್ ಕಂಪನಿಯ ಎಂ.ಡಿ.ಮೋಹನ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗ್ಗೆ ವಿಷಾನಿಲ ಸೋರಿಕೆಯಿಂದಾಗಿ ದುರ್ಘಟನೆ ಸಂಭವಿಸಿದೆ. ಕಾರ್ಖಾನೆಯಲ್ಲಿ 2400 ಟನ್ ಸಾಮರ್ಥ್ಯದ ಟ್ಯಾಂಕ್ ಇದ್ದು, ಈ ಪೈಕಿ 1800 ಟನ್ ಮಾತ್ರ ಸ್ಟೆರಿನ್ ಕೆಮಿಕಲ್ ಸಂಗ್ರಹವಿತ್ತು ಎಂದು ಮಾಹಿತಿ ನೀಡಿದರು.

ಇನ್ನು ಈ ಸ್ಟೆರಿನ್ ಗ್ಯಾಸ್ ಅತ್ಯಂತ ಅಪಾಯಕಾರಿಯಾಗಿದ್ದು, ಜೀವಿಯ ಮೆದುಳಿಗೆ ಹಾನಿ ಉಂಟು ಮಾಡುತ್ತದೆ. ಇದು ಗಾಳಿಯೊಂದಿಗೆ ಸೇರಿದ ಕೂಡಲೇ ಅದನ್ನು ಸೇವಿಸುವ ಜೀವಿಯ ಶ್ವಾಸಕೋಶದಲ್ಲಿ ಊತ ಕಾಣಿಸಿಕೊಳ್ಳುತ್ತದೆ ಇದರೊಂದಿಗೆ ಹೃದಯ ಸಮಸ್ಯೆ ಕೂಡ ಒಟ್ಟಿಗೆ ಉಂಟಾಗುತ್ತದೆ. ಉಸಿರಾಟದ ಸಮಸ್ಯೆಯಿಂದಾಗಿ ಪ್ರಾಣಕ್ಕೆ ಸಂಚಕಾರ ಬರಲಿದೆ. ಮಕ್ಕಳು, ವಯಸ್ಸಾದವರ ಆರೋಗ್ಯದ ಮೇಲೆ ಇದು ಭೀಕರ ದುಷ್ಪರಿಣಾಮ ಉಂಟು ಮಾಡಲಿದೆ. ಇನ್ನು ಸುತ್ತಲಿನ ಗ್ರಾಮಗಳ ಗ್ರಾಮಸ್ಥರನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ.

ಏತನ್ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘಟನೆ ಕುರಿತು ಆಘಾತ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕಾಂಗ್ರೆಸ್ ನ ಕಾರ್ಯಕರ್ತರು ಹಾಗೂ ಪಕ್ಷದ ಕಾರ್ಯಕರ್ತರಿಗೆ, ದುರ್ಘಟನೆಯಿಂದಾಗಿ ಸಂಕಷ್ಟದಲ್ಲಿದ್ದವರಿಗೆ ಅಗತ್ಯ ನನೆರವು ನೀಡುವಂತೆ ಸೂಚಿಸಿದ್ದಾರೆ. ಅಲ್ಲದೇ, ದುರ್ಘಟನೆಯಲ್ಲಿ ಮೃತಪಟ್ಟ ದುರ್ದೈವಿಗಳಿಗೆ ಸಂತಾಪ ಸೂಚಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವೇ ಗುಣಮುಖರಾಗಲೆಂದು ಆಶಿದ್ದಾರೆ…State

ಬೆಂಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದೆ. ಏತನ್ಮಧ್ಯೆ, ರಾಜ್ಯದಲ್ಲಿ ಡೆಡ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಸೋಂಕಿಗೆ ತುತ್ತಾಗಿ ಬಲಿಯಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ವ್ಯಕ್ತಿ ಕಿಲ್ಲರ್ ಕೊರೊನಾದಿಂದ ಮೃತಪಟ್ಟಿದ್ದಾರೆ.

ಕಲಬುರಗಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 56 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು. ಆದರೆ, ಫಲಿಸದೇ ಇಂದು ಮೃತಪಟ್ಟಿದ್ದಾರೆ. ಈವರೆಗೆ ಡೆಡ್ಲಿ ಕೊರೊನಾಗೆ ಕಲಬುರಗಿಯಲ್ಲಿ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಇಂದು ರಾಜ್ಯದಲ್ಲಿ ಒಂದೇ ದಿನ 28 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ಮಂಡ್ಯದಲ್ಲಿ 2, ಹಾವೇರಿಯಲ್ಲಿ 1, ವಿಜಯಪುರ ಜಿಲ್ಲೆಯಲ್ಲಿ 1,  ಕಲಬುರಗಿಯಲ್ಲಿ-2 ಹಾಗೂ ದಾವಣಗೆರೆಯಲ್ಲಿ ಬರೋಬರಿ 21 ಮಂದಿಯಲ್ಲಿ ಕೊರೊನಾ ಸೋಂಕು ಪಾಟಿಸಿವ್ ಬಂದಿದೆ. ಇನ್ನು ಒಟ್ಟಾರೆ, 642 ಮಂದಿ ಸೋಂಕಿತರ ಪೈಕಿ 304 ಮಂದಿ ಗುಣಮುಖರಾಗಿದ್ದು, 312 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಕಿಲ್ಲರ್ ಕೊರೊನಾಗೆ ಈವರೆಗೆ 26 ಮಂದಿ ಬಲಿಯಾಗಿದ್ದಾರೆ….World

ವಾಷಿಂಗ್ಟನ್ : ಮಾರಕ ಕೊರೊನಾ ವೈರಸ್ ಗೆ ಈ ವರ್ಷಾಂತ್ಯಕ್ಕೆ ಲಸಿಕೆ ಲಭ್ಯವಾಗಲಿದೆ ಎಂದು ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೊರೊನಾಗೆ ಲಸಿಕೆ ಕಂಡುಹಿಡಿಯುವ ನಿಟ್ಟಿನಲ್ಲಿ ಪ್ರಯೋಗಗಳು ನಡೆದಿದ್ದು, ಈ ವರ್ಷಾಂತ್ಯಕ್ಕೆ ಲಸಿಕೆ ಲಭ್ಯವಾಗುವ ಸಾಧ್ಯತೆ ಇದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಈ ಕುರಿತಂತೆ ವೈಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಕೊರೊನಾಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿ ವಿಜ್ಞಾನಿಗಳು ಹರಸಾಹಸ ನಡೆಸಿದ್ದು, ಪ್ರಯತ್ನ ಬಹುತೇಕ ಯಶಸ್ವಿಯಾಗುವ ಹಂತದಲ್ಲಿದೆ. ಹೀಗಾಗಿ ಈ ವರ್ಷಾಂತ್ಯಕ್ಕೆ ಲಸಿಕೆ ಲಭ್ಯವಾಗುವ ನಿರೀಕ್ಷೆಯಿದೆ ಎಂದರು.

ಇನ್ನು ಕೊರೊನಾ ವೈರಸ್ ನ ಉಗಮ ಸ್ಥಾನ ವುಹಾನ್ ನ ವನ್ಯಜೀವಿ ಮಾಂಸ ಮಾರುಕಟ್ಟೆ ಅಲ್ಲ. ಬದಲಾಗಿ ಅದೇ ವುಹಾನ್ ನ ವೈರಾಣು ಲ್ಯಾಬ್ ಎಂಬ ಡೊನಾಲಡ್ ಟ್ರಂಪ್ ಅವರ ವಾದವನ್ನು ಅಮೆರಿಕಾದ ಕಾರ್ಯದರ್ಶಿ ಮೈಕ್ ಪಾಂಪಿಯೊ ಪುನರುಚ್ಚರಿಸಿದ್ದಾರೆ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಚೀನಾದ ವುಹಾನ್ ಪ್ರಯೋಗಾಲಯದಿಂದ ಬಂದಿದ್ದೆಂದು ಹೇಳಲು ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ. ಆದರೆ, ವೈರಸ್ ನ್ನು ಜೈವಿಕವಾಗಿ ಮಾರ್ಪಾಡುಗೊಳಿಸಿರುವ ಬಗ್ಗೆ ಸಾಕ್ಷ್ಯಗಳಿಲ್ಲ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದ ಪ್ರಾಣಿಯನ್ನು ಪ್ರಯೋಗಾಲಯದಲ್ಲಿ ನಾಶ ಮಾಡಲಾಗಿದೆ. ಈ ವೇಳೆ ಆಕಸ್ಮಿಕವಾಗಿ ಹಲವರಿಗೆ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾ ವೈರಸ್ ಹುಟ್ಟಿನ ಬಗ್ಗೆ ಹಲವು ಸಿದ್ದಾಂತಗಳು ವ್ಯಕ್ತವಾಗಿದ್ದು, ಈ ಪೈಕಿ ಇದು ಒಂದಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮೈಕ್ ಪಾಂಪಿಯೊ ತಿಳಿಸಿದ್ದಾರೆ…State

ಬೆಂಗಳೂರು : ಮಾರಕ ಕೊರೊನಾ ವೈರಸ್ ನಿಯಂತ್ರಣಕ್ಕೆ ಕಳೆದ 40ಕ್ಕೂ ಹೆಚ್ಚು ದಿನಗಳಿಂದ ಲಾಕ್ ಡೌನ್ ವಿಧಿಸಲಾಗಿದ್ದು, ಮೇ.4 ರ ಬಳಿಕವೂ ಕೆಲ ಸಡಿಲಿಕೆಯೊಂದಿಗೆ ಲಾಕ್ ಡೌನ್ ಮುಂದುವರೆಯಲಿದೆ. ಏತನ್ಮಧ್ಯೆ, ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೇ ಸಂಕಷ್ಟದಲ್ಲಿ ಸಿಲುಕಿರುವ ಕಾರ್ಮಿಕರು ಊರಿಗೆ ತೆರಳಲು ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಕೆಎಸ್.ಆರ್.ಟಿ.ಸಿ ವತಿಯಿಂದಲೇ ಬಡ ಕಾರ್ಮಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ.

ಇಂದು ತಮ್ಮ ತಮ್ಮ ಊರುಗಳಿಗೆ ವಾಪಾಸ್ ಹೋಗಲು ಕಾರ್ಮಿಕರು ಏಕಾಏಕಿ ಮುಗಿಬಿದ್ದರು. ಮೆಜೆಸ್ಟಿಕ್ ನಿಂದ ಬಸ್ ಗಳ ವ್ಯವಸ್ಥೆ ಕಲ್ಪಿಸಿದ್ದು, ಕಾರ್ಮಿಕರು ಸಾಮಾಜಿಕ ಅಂತರವಿಲ್ಲದೇ, ಯಾವುದೇ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ವಹಿಸಿದ್ದು ಕಂಡುಬಂತು. ಇನ್ನು ಈಗಾಗಲೇ ಕೆಲಸವಿಲ್ಲದೇ ತತ್ತರಿಸಿರುವ ಬಡ ಕಾರ್ಮಿಕರಿಗೆ ಕೆ.ಎಸ್.ಆರ್.ಟಿ.ಸಿ ಭಾರಿ ಮೊತ್ತದ ಪ್ರಯಾಣ ದರ ವಿಧಿಸುವ ಮೂಲಕ ದೊಡ್ಡ ಶಾಕ್ ನೀಡಿದೆ. ಬಾಗಲಕೋಟೆಗೆ ತೆರಳಲು ಈ ಮೊದಲು 700 ರೂ.ಯಿತ್ತು. ಆದರೆ, ಈ 1311 ರೂ.ವಿಧಿಸಲಾಗಿದೆ. ಇನ್ನು ಬಳ್ಳಾರಿಗೆ ತೆರಳಲು 450 ರೂ. ಇದ್ದ ದರವನ್ನು 884ಕ್ಕೆ ಏರಿಕೆ ಮಾಡಲಾಗಿದೆ. ಅಂತೆಯೇ ಬೆಳಗಾವಿಗೆ ಈ ಮೊದಲು 800 ರೂ. ಇದ್ದ ದರವನ್ನು 1478 ರೂ.ಗೆ ಹೆಚ್ಚಿಸಲಾಗಿದೆ…..State

ಬೆಂಗಳೂರು : ಕೇಂದ್ರ ಸರ್ಕಾರ ಮೇ.17ರವರೆಗೆ ಲಾಕ್ ಡೌನ್ ವಿಸ್ತರಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಇಂದು ಸಂಪುಟದ ಹಿರಿಯ ಸದಸ್ಯರು, ಉನ್ನತಾಧಿಕಾರಿಗಳು ಹಾಗೂ ಡಿಸಿಗಳೊಂದಿಗೆ ಸಭೆ ನಡೆಸಲಿದ್ದು, ಈ ಬಳಿಕ ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಟಗೊಳ್ಳಲಿದೆ. 

ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದು, ಆ ಬಳಿಕ ಮುಖ್ಯಕಾರ್ಯದರ್ಶಿ, ಹಿರಿಯ ಸಚಿವರೊಂದಿಗೆ ಸುದೀರ್ಘ ಸಭೆ ನಡೆಸಿ ರಾಜ್ಯ ಸರಕಾರ ಅನುಸರಿಸಬೇಕಾಗ ಮಾರ್ಗಸೂಚಿಗಳನ್ನು ನಿರ್ಧರಿಸಲಿದ್ದಾರೆ. ಕೆಂಪು, ಹಸಿರು, ಕಿತ್ತಳೆ ಮೂರು ವಲಯಗಳ ನಿರ್ಧಾರವನ್ನು ರಾಜ್ಯಗಳ ವಿವೇಚನೆಗೆ ಬಿಟ್ಟಿರುವುದರಿಂದ ಕೊರೊನಾ ಸೋಂಕು ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆಗೆ ಅನುಗುಣವಾಗಿ ರಾಜ್ಯ ಸರ್ಕಾರ ಜಿಲ್ಲೆಗಳನ್ನು ಮೂರು ವಲಯಗಳನ್ನಾಗಿ ವಿಂಗಡಿಸಲಿದೆ. ಈ ಮಧ್ಯೆ ಹಸಿರು ವಲಯ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಹುತೇಕ ಚಟುವಟಿಕೆ ಪ್ರಾರಂಭಿಸಲು ಕೇಂದ್ರದ ಮಾರ್ಗಸೂಚಿಯಲ್ಲಿ ಪ್ರಸ್ತಾಪಿಸಲಾಗಿದೆ. ಹೀಗಾಗಿ ಲಿಕ್ಕರ್, ಪಾನ್ ಶಾಪ್ ಪ್ರಾರಂಭಿಸುವ ಕುರಿತಂತೆಯೂ ಸಭೆಯಲ್ಲಿ ತೀರ್ಮಾನವಾಗಲಿದೆ….Mysore State

ಮೈಸೂರು : ಮಾರಕ ಕೊರೊನಾ ವೈರಸ್ ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ್ದು, ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಹಲವೆಡೆ ಲಾಕ್ ಡೌನ್ ನಿಯಮ ಉಲ್ಲಂಘಿಸಲಾಗುತ್ತಿದ್ದು, ಹಾಟ್ ಸ್ಪಾಟ್ ಗಳಲ್ಲಿ ಈ ನಿಯಮ ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ. ಮೈಸೂರಿನಲ್ಲೂ ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮಹಾನಗರ ಪಾಲಿಕೆ ಮುಂದಾಗಿದ್ದು, ಮಾಸ್ಕ್ ಧರಿಸದೇ ಮನೆಯಿಂದ ಹೊರಬಂದರೆ ಅಂತಹವರಿಗೆ ದಂಡ ವಿಧಿಸಲು ನಿರ್ಧರಿಸಿದೆ.

ರಾಜ್ಯದಲ್ಲಿ ಬೆಂಗಳೂರು ಬಳಿಕ ಮೈಸೂರು ಕೊರೊನಾ ಹಾಟ್ ಸ್ಪಾಟ್ ಆಗಿದ್ದು, ಲಾಕ್ ಡೌನ್ ಕಠಿಣ ಲಾಕ್ ಡೌನ್ ನಿಯಮ ಜಾರಿಗೆ ತಂದಿದ್ದರೂ ಕೆಲವೆಡೆ ಜನತೆ ಮಾತ್ರ ಇದಕ್ಕೆ ಕ್ಯಾರೆ ಅನ್ನುತ್ತಿಲ್ಲ.  ತರಕಾರಿ ಖರೀದಿ ಸೇರಿದಂತೆ ಇತರೇ ಕಾರಣಗಳಿಗಾಗಿ ಜನತೆ ಮುಗಿಬೀಳುತ್ತಿದ್ದಾರೆ. ಏತನ್ಮಧ್ಯೆ, ಮಾಸ್ಕ್ ಧರಿಸದೇ ಮನೆಗಳಿಂದ ಹೊರಬರುವವರ ವಿರುದ್ಧ ಕಠಿಣ ಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಧರಿಸಿದ್ದು, ಏ.30ರ ಬಳಿಕ ಒಂದು ವೇಳೆ ಮಾಸ್ಕ್ ಧರಿಸದೇ ನಾಗರಿಕರು ಮನೆಗಳಿಂದ ಹೊರಬಂದರೆ ಅಂತಹವರಿಗೆ 100 ರೂ. ದಂಡ ವಿಧಿಸಲು ನಿರ್ಧರಿಸಿದ್ದಾರೆ…State

ಬೆಂಗಳೂರು : ಪಾದರಾಯನಪುರದಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹಮದ್ ಅವರೇ ಕಾರಣ, ಅವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಕೊರೊನಾದಂತಹ ತುರ್ತು ಸಂದರ್ಭದಲ್ಲಿ ಪಾದರಾಯನಪುರ ಗಲಾಟೆ ಅಕ್ಷಮ್ಯ. ಈ ಗಲಭೆಕೋರರ ವಿರುದ್ದ ಸರ್ಕಾರ ಸೂಕ್ತ ಕ್ರಮ ಜರುಗಿಸುತ್ತಿದೆ. ಆದರೆ, ಇದಕ್ಕೆ ಕಾರಣವಾದ ಶಾಸಜ ಜಮೀರ್ ಅಹಮದ್ ವಿರುದ್ಧ ಗೂಂಡಾ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು” ಎಂದು ಅವರು ಒತ್ತಾಯಿಸಿದರು. ಇನ್ನು ಇದೇ ವೇಳೆ,  ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಅಮೆರಿಕ, ಇಟಲಿ ದೇಶಗಳು ಕೊರೊನಾ ಕುರಿತು ಸೂಕ್ತ ಎಚ್ಚರಿಕೆ ವಹಿಸದ ಕಾರಣ ಅತಿಹೆಚ್ಚಿನ ಸಂಖ್ಯೆಯ ಸಾವು ನೋವನ್ನು ಎದುರಿಸಿದೆ. ಆದರೆ, ಪ್ರಧಾನಿ ಮೋದಿ ಪ್ರಾರಂಭದ ಹಂತದಲ್ಲೇ ಉತ್ತಮವಾಗಿ ನಿರ್ವಹಣೆ ಮಾಡಿದ್ದರು.ಇವತ್ತು ಇಡೀ ಜಗತ್ತು ಭಾರತದ ಕಡೆ, ಮೋದಿ ತೆಗೆದುಕೊಳ್ಳುವ ತೀರ್ಮಾನದ ಕಡೆ ನೋಡುತ್ತಿದೆ. ಪರಿಸ್ಥಿತಿ ಸೂಕ್ತವಾಗಿ ನಿಭಾಯಿಸಿದ ಪರಿಣಾಮ ಸೋಂಕಿಗೆ ತುತ್ತಾಗಿದ್ದ ರಾಷ್ಟ್ರಗಳ ಪೈಕಿ ಮೂರನೇ ಸ್ಥಾನದಲ್ಲಿದ್ದ ಭಾರತ 11ನೇ ಸ್ಥಾನಕ್ಕೆ ಇಳಿದಿದೆ ಎಂದು ತಿಳಿಸಿದರು….World

ಬೀಜಿಂಗ್ : ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಎಂಬ ವಿಷವನ್ನು ಪಸರಿಸಿರುವ ಚೀನಾದಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲಾಗಿದೆ. ಪ್ರತಿನಿತ್ಯ ವರದಿಯಾಗುತ್ತಿದ್ದ ಹೊಸ ಪ್ರಕರಣಗಳ ಪೈಕಿ ಇಳಿಮುಖವಾಗಿದೆ ಎನ್ನಲಾಗಿದೆ. ನಿನ್ನೆ ಚೀನಾದಲ್ಲಿ ಕೇವಲ 26 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. 

ಏತನ್ಮಧ್ಯೆ, ಚೀನಾಗೆ ಎರಡನೇ ಸುತ್ತಿನ ವೈರಸ್ ದಾಳಿ ಆರಂಭವಾಗಲಿದೆ ಎಂದು ಎಂದು ತಜ್ಞರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಮುಂಬರುವ ನವೆಂಬರ್‌ನಲ್ಲಿ ಚೀನಾದಲ್ಲಿ ಮತ್ತೆ ಕೊರೊನಾ ವೈರಸ್ ಸಮಸ್ಯೆ ಕಾಣಿಸಿಕೊಳ್ಳಲಿದ್ದು, ಎರಡನೇ ಬಾರಿಗೆ ಜಗತ್ತಿಗೆ ಪಸರಿಸುವ ಸಾಧ್ಯತೆ ದಟ್ಟವಾಗಿದೆ ಎಂದು ಚೀನಾದ ತಜ್ಞರೇ ಅಂದಾಜಿಸಿದ್ದಾರೆ. ಈ ಕುರಿತು ಶಾಂಘೈ ಕೋವಿಡ್-19 ತಂಡದ ಸದಸ್ಯ ಜಾಂಗ್ ವೆನ್ಹಾಂಗ್ ಮಾತನಾಡಿದ್ದು,  ಮುಂದಿನ ದಿನಗಳಲ್ಲಿ ಎದುರಾಗಲಿರುವ ಎರಡನೇ ಸುತ್ತಿನ ಕೊರೊನಾ ವೈರಸ್ ದಾಳಿಯ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ ಎಂದು ಎಚ್ಚರಿಸಿದ್ದಾರೆ. ನವಂಬರ್ ಚಳಿಗಾಳದಲ್ಲಿ ಚೀನಾದಲ್ಲಿ ಎರಡನೇ ಸುತ್ತಿನ ಕೊರೊನಾ ವೈರಸ್ ದಾಳಿ ಮಾಡುವ ಸಾಧ್ಯತೆಗಳಿದ್ದು, ಈಗಾಗಲೇ ವೈರಸ್ ನಿಯಂತ್ರಣದ ಕುರಿತು ಅಪಾರ ಅನುಭವ ಹೊಂದಿರುವ ಚೀನಾ ತಕ್ಷಣದಿಂದಲೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದರೆ ಜಗತ್ತು ಸುರಕ್ಷಿತವಾಗಿರಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ….India
ನವದೆಹಲಿ : ಮಾರಕ ಕೊರೊನಾ ಸೋಂಕು ದೇಶದೆಲ್ಲೆಡೆ ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1007 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, 23 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. 
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1007 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, 23 ಮಂದಿ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ  13,387 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 11,201 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 1749 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ದೇಶದಲ್ಲಿ ಈವರೆಗೆ ಕಿಲ್ಲರ್ ಕೊರೊನಾಗೆ 437 ಮಂದಿ ಬಲಿಯಾಗಿದ್ದಾರೆ….
error: Content is protected !!