kannada news.com – Kannada News Now


India

ನವದೆಹಲಿ : ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ಗೊಂದಲಗಳ ನಡುವೆಯೇ ಜೂನ್ 25 ರಿಂದ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಏತನ್ಮಧ್ಯೆ, ಎಸ್.ಎಸ್.ಎಲ್.ಸಿ ಪರೀಕ್ಷೆಗಳಿಗೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ನಳೆ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ನಾಳಿನ ವಿಚಾರಣಾ ಪಟ್ಟಿಯಲ್ಲಿ ಅರ್ಜಿಯನ್ನು ಪರಿಗಣಿಸಲಾಗಿದ್ದು, ನ್ಯಾಯಮೂರ್ತಿ ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರದ ಪರ ವಕೀಲ ಸುಬ್ರಾಂಶು ಕೆವಿಯೇಟ್ ಸಲ್ಲಿಸಿದ್ದು, ರಾಜ್ಯದ ಸರ್ಕಾರದ ಅಭಿಪ್ರಾಯ ಕೇಳಿದ ಬಳಿಕವಷ್ಟೇ ಆದೇಶ ನೀಡುವಂತೆ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರ ಜೂನ್ 25ರಿಂದ ಎಸ್‍.ಎಸ್‍.ಎಲ್‍.ಸಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಬೆಳಗಾವಿಯ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ್ ಎಂಬವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಮೊದಲು ರಾಜಶ್ರೀ ನಾಗರಾಜ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿಯಲ್ಲಿದ್ದ ಅಂಶಗಳನ್ನು ಪರಿಗಣಿಸಲು ಹೈಕೋರ್ಟ್ ತಿರಸ್ಕರಿಸಿತ್ತು. ಹೀಗಾಗಿ  ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ನಾಳೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ…

India

ನವದೆಹಲಿ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಾರತದಲ್ಲಿ ಸೋಂಕು ಪೀಡಿತರ ಚಿಕಿತ್ಸೆಗೆ ಅಗತ್ಯವಿರುವ ವೆಂಟಿಲೇಟರ್ ಗಳ ಕೊರತೆಯಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಕೊಟ್ಟ ಮಾತಿನಂತೆ ಭಾರತಕ್ಕೆ ವೆಂಟಿಲೇಟರ್ ಗಳ ನೆರವು ನೀಡಿದ್ದಾರೆ. ಇದರ ಮೊದಲ ಹಂತವಾಗಿ ಇಂದು 100 ವೆಂಟಿಲೇಟರ್ ಗಳನ್ನು ಪೂರೈಸಲಾಗಿದೆ.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಭಾರತದಲ್ಲಿನ ಅಮೆರಿಕಾ ರಾಯಭಾರಿ ಕೆನ್ನಿತ್ ಐ ಜಸ್ಟರ್ ಅಮೆರಿಕಾದ ಅಂತಾರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿಯಿಂದ 100 ವೆಂಟಿಲೇಟರ್ ಗಳನ್ನು ಭಾರತಕ್ಕೆ ಹಸ್ತಾಂತರಿಸಿದರು. ಈ ವೆಂಟಿಲೇಟರ್ ಗಳನ್ನು  ಅಮೆರಿಕ ಮೂಲದ ಜೊಲ್ ಸಂಸ್ಥೆ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದೆ.  ಏರ್ ಇಂಡಿಯಾ ವಿಮಾನದ ಮೂಲಕ ಈ ವೆಂಟಿಲೇಟರ್ ಗಳು ಬಂದಿದ್ದು, ಭಾರತೀಯ ರೆಡ್ ಕ್ರಾಸ್ ಸೂಸೈಟಿಯಲ್ಲಿ ಸಣ್ಣ ಕಾರ್ಯಕ್ರಮದ ನಂತರ ರೋಗಿಗಳ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ವಿತರಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಅಮೆರಿಕ ರಾಯಭಾರಿ ಕೆನ್ನೆತ್, ಕೊರೊನಾ ಸೋಂಕು ಇಡೀ ಜಗತ್ತಿಗೆ ಕಂಟಕವಾಗಿದ್ದು, ಅಪಾಯ ತಂದೊಡ್ಡಿದೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ರಾಷ್ಟ್ರಗಳು ಪರಸ್ಪರ ಸಹಕಾರ ಹಾಗೂ ಪಾಲುದಾರಿಕೆಯಿಂದ ಕ್ರಮಗಳನ್ನು ಕೈಗೊಳ್ಳಬೇಕಿದೆ. ವಿಶ್ವದ ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಇದು ಸಹಕಾರಿ ಎಂದು ತಿಳಿಸಿದರು….

India

ಶ್ರೀನಗರ : ಪ್ರಸಕ್ತ ವರ್ಷದಲ್ಲಿ ಈವರೆಗೆ 94 ಮಂದಿ ಭಯೋತ್ಪಾದಕರನ್ನು ಜಮ್ಮು ಕಾಶ್ಮೀರ ಖಾಕಿಪಡೆ ಹತ್ಯೆಗೈದಿದ್ದು, ಈಗ ಪೊಲೀಸ್ ಹದ್ದಿನ ಕಣ್ಣು ಉತ್ತರ ಕಾಶ್ಮೀರದ ಮೇಲೆ ನೆಟ್ಟಿದೆ ಎಂದು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

  ಈ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  2020ರಲ್ಲಿ ಈವರೆಗೆ 94 ಮಂದಿ ಉಗ್ರರನ್ನು ಸದೆಬಡಿಯಲಾಗಿದೆ. ಇನ್ನು ಇಂದು ಮುಂಜಾನೆ ಶೋಪಿಯಾನ್ ಬಳಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಈ ಮೂವರು ಉಗ್ರರ ಪೋಷಕರು ಬಂದು ಹತರಾದವರು ಮೃತದೇಹಗಳನ್ನು ಪತ್ತೆ ಹಚ್ಚಬೇಕೆಂದು ತಿಳಿಸಿದರು. ಇದೇ ವೇಳೆ, ಈ ಎನ್ ಕೌಂಡರ್ ವ್ಯವಸ್ಥಿತಿ ಅಪರೇಶನ್ ಆಗಿದ್ದು, ಕಾರ್ಯಾಚರಣೆ ವೇಳೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಜೂನ್ 11ರಂದು ಹಂದ್ವಾರದಲ್ಲಿ ನಡೆದ ಕಾರ್ಯಾಚರಣೆ ಕುರಿತು ತನಿಖೆ ಪ್ರಗತಿಯಲ್ಲಿದೆ. ಈ ಕೃತ್ಯದಲ್ಲಿ ಕೈವಾಡ ಹಿನ್ನೆಲೆಯಲ್ಲಿ ಇನ್ನು ಹಲವರನ್ನು ಬಂಧಿಸಲಾಗಿದೆ. ಅಗತ್ಯ ಬಿದ್ದಲ್ಲಿ ಈ ಪ್ರಕರಣವನ್ನು ಎನ್ ಐಎ ಹಾಗೂ ದೆಹಲಿ, ಮುಂಬೈ, ಪಂಜಾಬ್ ರಾಜ್ಯಗಳ ತನಿಖಾ ಸಂಸ್ಥೆಗಳಿಗೆ ತನಿಖೆಗೆ ವಹಿಸಲಾಗುತ್ತದೆ ಎಂದು ಮಾಹಿಸಿ ನೀಡಿದರು. ಇದೇ ವೇಳೆ, ಅನಂತ್ ನಾಗ್ ಬಳಿ ಕಾಂಗ್ರೆಸ್ ಸರಪಂಚ್ ಅಜಯ್ ಪಂಡಿತ್ ರನ್ನು ಕೊಲೆಗೈದ ಪ್ರಕರಣದ ಬಗ್ಗೆಯೂ ಪ್ರಸ್ತಾಪಿಸಿದ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್, ಈ ಕೃತ್ಯದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಉಮರ್ ನ ಕೈವಾಡವಿದ್ದು, ಈತನನ್ನು ಇತ್ತೀಚೆಗೆ ನಡೆದ ಕಾರ್ಯಾಚರಣೆ ವೇಳೆ ಹತ್ಯೆ ಮಾಡಲಾಗಿದೆ. ಸದ್ಯ ಇದಕ್ಕೆ ಸಂಬಂಧಿಸಿದ ಫೋರೆನ್ಸಿಕ್ ಲ್ಯಾಬ್ ರಿಪೋರ್ಟ್ ಬರಬೇಕಿದೆ ಎಂದು ಮಾಹಿತಿ ನೀಡಿದರು…

State

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಲಾಕ್ ಡೌನ್ ಅಗತ್ಯವಿಲ್ಲ. ಹೀಗಾಗಿ ಮತ್ತಷ್ಟು ವಿನಾಯಿತಿ ನೀಡುವಂತೆ ನಾಳೆ ವಿಡಿಯೋ ಕಾನ್ಫರೆನ್ಸ್ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮನವಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಂದು ಅವಧಿಗೆ ಲಾಕ್ ಡೌನ್ ವಿಸ್ತರಿಸುವ ಅಗತ್ಯವಿಲ್ಲ. ಮತ್ತಷ್ಚು ರಿಲ್ಯಾಕ್ಸ್ ನೀಡಿ ಜನಜೀವನ, ಆರ್ಥಿಕ ಸ್ಥಿತಿ ಸುಧಾಕರಣೆಗೆ ಅವಕಾಶ ಮಾಡಿಕೊಡುವಂತೆ ನಾಳೆ ವಿಡಿಯೋ ಕಾನ್ಫರೆನ್ಸ್ ವೇಳೆ ಪ್ರಧಾನಿ ಅವರಿಗೆ ಮನವಿ ಮಾಡಿಕೊಡುವುಗಾಗಿ ಯಡಿಯೂರಪ್ಪ ತಿಳಿಸಿದರು.  ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಹೊರಗಿನಿಂದ ಬಂದವರಿಂದ ಇಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆಯೂ ಪ್ರಧಾನಿ ಅವರಿಗೆ ತಿಳಿಸಲಾಗುತ್ತದೆ ಎಂದರು. ರಾಜ್ಯದಲ್ಲಿ ಕೋವಿಡ್- 19 ನಿಂದ ತಪ್ಪಿಸಿಕೊಳ್ಳಲು ಅತ್ಯಂತ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಅತಿಹೆಚ್ಚು ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ ಎಂತಲೂ ಸಿಎಂ ತಿಳಿಸಿದರು.

ಇದೇ ವೇಳೆ, ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಪ್ರಸ್ತಾಪಿಸಿದ ಸಿಎಂ, ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು….

World

ನ್ಯೂಸ್ ಡೆಸ್ಕ್ : ವಾಟ್ಸ್ ಆಪ್ ಬಳಕೆದಾರರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಸಂದೇಶ, ಫೋಟೋ, ವಿಡಿಯೋಗಳನ್ನು ಕಳುಹಿಸದಷ್ಟು ಸುಲಭವಾಗಿಯೇಹಣ ವರ್ಗಾವಣೆ ಮಾಡಬಹುದಾಗಿದೆ. ಈ ವಾಟ್ಸ್ ಆಪ್ ಪೇಮೆಂಟ್ ಸೇವೆ ಬ್ರೆಜಿಲ್ ನಲ್ಲಿ ಆರಂಭವಾಗಿದ್ದು, ಸದ್ಯದಲ್ಲೇ ಈ ಸೇವೆ ಇತರೇ ರಾಷ್ಟ್ರಗಳಿಗೆ ವಿಸ್ತರಣೆಯಾಗಲಿದೆ. 

ಗೂಗಲ್ ಪೇ, ಪೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಬಹುದಾಗಿತ್ತು, ಈಗ ಅದರಂತೆಯೇ ವಾಟ್ಸ್ ಅಪ್ ಪೇಮೆಂಟ್ ಸೇವೆ ಬ್ರೆಜಿಲ್ ನಲ್ಲಿ ಆರಂಭವಾಗಿದೆ. ವಾಟ್ಸಾಪ್ ನಲ್ಲಿ ಹಣ ವರ್ಗಾವಣೆಯನ್ನು  ಫೇಸ್‌ಬುಕ್ ಪೇ ತಂತ್ರಜ್ಞಾನದಿಂದ ನಡೆಸಬಹುದಾಗಿದ್ದು, ಈ ಸೇವೆಯನ್ನು ಬ್ರೆಜಿಲ್‌ನ ಫಿನ್‌ಟೆಕ್ ಕಂಪನಿ ಸಿಯೆಲೊ ಪ್ರಕ್ರಿಯೆಗೊಳಿಸಲಿದೆ. ಈ ವಾಟ್ಸ್ ಆಪ್ ಪೇಮೆಂಟ್ ಸೇವೆ ಕುರಿತು ಫೇಸ್ ಬುಕ್ ಸಂಸ್ಥಾಪಕ  ಮಾರ್ಕ್ ಜುಕರ್‌ಬರ್ಗ್ ಮಾಹಿತಿ ನೀಡಿದ್ದಾರೆ. “ಇನ್ನು ಮುಂದೆ ನಾವು ಫೋಟೋಗಳನ್ನು ಹಂಚಿಕೊಳ್ಳುವಷ್ಟು ಸುಲಭವಾಗಿ ಹಣವನ್ನು ಕಳುಹಿಸಬಹುದು ಮತ್ತು ಸ್ವೀಕರಿಸಬಹುದು. ಅದರ ಜೊತೆಗೆ ಸಣ್ಣ ಉದ್ಯಮಗಳು ತಮ್ಮ ಉತ್ಪನ್ನಗಳನ್ನು  ವಾಟ್ಸಾಪ್‌ ನಲ್ಲಿಯೇ ಮಾರಾಟ ಮಾಡಲು ಅನುವು ಮಾಡಿಕೊಡಲಾಗುವುದು” ಎಂದು ಜುಗರ್ ಬರ್ಗ್ ತಿಳಿಸಿದ್ದಾರೆ.

ಇನ್ನು ಸದ್ಯ ಬ್ರೆಜಿಲ್ ನಲ್ಲಿ ವಾಟ್ಸಾಪ್  ಅನ್ನು ಸುಮಾರು 120 ಮಿಲಿಯನ್ ಜನರು ಬಳಸುತ್ತಿದ್ದಾರೆ.  ಇದು ಭಾರತದ ನಂತರದ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದೆ. ಬ್ರೆಜಿಲ್ ನಲ್ಲಿ ವಾಟ್ಸಾಪ್ ಹಲವಾರು ಸ್ಥಳೀಯ ವ್ಯಾಪಾರಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಇದರಿಂದಾಗಿ ಬಳಕೆದಾರರು ಅವರೊಂದಿಗೆ ಚಾಟ್ ಮಾಡಬಹುದು ಮತ್ತು ಸುಲಭವಾಗಿ ಪಾವತಿಗಳನ್ನು ಮಾಡಬಹುದು. ಇದಕ್ಕಾಗಿ ಬಳಕೆದಾರರು ತಮ್ಮ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ವಿವರಗಳನ್ನು ಕೇವಲ ಒಂದು ಬಾರಿ ನಮೂದಿಸಬೇಕಿದೆ.  ಈ ಸೇವೆಗಾಗಿ ಹಣವನ್ನು ವಿಶೇಷವಾಗಿ ಪಾವತಿಸಬೇಕಾಗಿಲ್ಲ ಎಂತಲೂ ಜುಕರ್ ಬರ್ಗ್ ಸ್ಪಷ್ಟಪಡಿಸಿದ್ದಾರೆ….

 

Uncategorized

ನವದೆಹಲಿ : ದೇಶಾದ್ಯಂತ ಮಾರಣಾಂತಿಕ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಆತಂಕ ಮನೆಮಾಡಿದೆ. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿದ್ದರೂ ಸರ್ಕಾರಗಳಿಗೆ ನಿಜಕ್ಕೂ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 10,667 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ  3,43,091ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ಕೇಂದ್ರದ ಕುಟುಂಬ ಮತ್ತು ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 10,667 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕಿಲ್ಲರ್ ಕೊರೊನಾಗೆ 380 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟಾರೆ ಸೋಂಕು ಪೀಡಿತರ ಸಂಖ್ಯೆ  3,43,091ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1,80,013 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 1,53,178 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈವರೆಗೆ ಡೆಡ್ಲಿ ಕೊರೊನಾಗೆ 9900 ಮಂದಿ ಬಲಿಯಾಗಿದ್ದಾರೆ…

India

ಶ್ರೀನಗರ : ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆ ಭಯೋತ್ಪಾದಕರ ಹೆಡೆಮುರಿ ಕಟ್ಟಿದ್ದಾರೆ. ಶೋಪಿಯಾನ್ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ ಸೇನಾ ಕಾರ್ಯಾಚರಣೆ ವೇಳೆ ಮೂವರು ಉಗ್ರರು ಬಲಿಯಾಗಿದ್ದಾರೆ.

ಶೋಪಿಯಾನ್ ಸಮೀಪದ ತುರ್ಕವಾಂಗಂ ನಲ್ಲಿ ಇಂದು ಮುಂಜಾನೆ ಉಗ್ರರು ಅಡಗಿದ್ದ ಬಗ್ಗೆ ಸೇನಾಪಡೆಗೆ ಖಚಿತ ಮಾಹಿತಿ ಬಂದಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ಪಡೆ ಉಗ್ರರು ಅಡಗಿದ್ದ ಸ್ಥಳವನ್ನು ಸುತ್ತುವರಿದು ಕಾರ್ಯಾಚರಣೆ ಕೈಗೊಂಡರು. ಈ ವೇಳೆ, ಉಗ್ರರು ಭದ್ರತಾ ಸಿಬ್ಬಂದಿ ವಿರುದ್ಧ ಗುಂಡಿನ ಸುರಿಮಳೆಗರೆದಿದ್ದಾರೆ. ಇದಕ್ಕೆ ಪ್ರತಿಯಾಗಿ ಸೇನಾಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಏತನ್ಮಧ್ಯೆ, ಸ್ಥಳದ ಆಸುಪಾಸಿನಲ್ಲಿ ಇನ್ನು ಕೆಲ ಉಗ್ರರು ಅಡಗಿರುವ ಸಾಧ್ಯತೆ ಇದ್ದು, ಭದ್ರತಾ ಪಡೆ ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ…

Uncategorized

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣ ಸರ್ಕಾರಕ್ಕೆ  ಸವಾಲಾಗಿ ಪರಿಣಮಿಸಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕು ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಏತನ್ಮಧ್ಯೆ, ಮಿತಿಮೀರುತ್ತಿರುವ ಕೊರೊನಾ ಹಾವಳಿ ಹಿನ್ನಲೆಯಲ್ಲಿ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಸಿ ವಿವಿಧ ರಾಜಕೀಯ ನಾಯಕರೊಂದಿಗೆ ಮಾರಣಾಂತಿಕ ವೈರಸ್ ನಿಯಂತ್ರಣ ಹಿನ್ನೆಲೆ ಚರ್ಚೆ ನಡೆಸಿದರು.

ಈ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ, ಆಮ್ ಆದ್ಮಿ, ಕಾಂಗ್ರೆಸ್, ಬಿಎಸ್ಪಿ ಸೇರಿದಂತೆ ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಂಡು ಕೊರೊನಾ ಸೋಂಕು ನಿಯಂತ್ರಣ ಹಿನ್ನಲೆಯಲ್ಲಿ ತಮ್ಮ ಸಲಹೆಗಳನ್ನು ನೀಡಿದರು.  ಈ ವೇಳೆ,  ಸಾಮೂಹಿಕ ಪರೀಕ್ಷೆ ಪ್ರಕ್ರಿಯೆಯನ್ನು ತೀವ್ರಗೊಳಿಸುವಂತೆ ಒತ್ತಾಯಿಸಿದ ಕಾಂಗ್ರೆಸ್ ಪಕ್ಷದ ನಾಯಕರು, ಕೊರೊನಾ ವೈರಸ್ ಸೋಂಕಿಗೆ ತುತ್ತಾದವರ ಕುಟುಂಬಕ್ಕೆ ಕೇಂದ್ರ ಸರ್ಕಾರ 10,000 ರೂ. ಧನಸಹಾಯ ಮಾಡಬೇಕು ಎಂದು ಒತ್ತಾಯಿಸಿದರು.  ಸಾಮೂಹಿಕ ಪರೀಕ್ಷೆ ಜನರ ಸಾಂವಿಧಾನಿಕ ಹಕ್ಕು ಆಗಿದ್ದು,   ಈ ಕೂಡಲೇ ದೇಶದಾದ್ಯಂತ ಸಾಮೂಹಿಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ. ಇನ್ನು ದೇಶದಲ್ಲಿ ವೈದ್ಯರ ಕೊರತೆಯಿದ್ದು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ 4ನೇ ವರ್ಷದಲ್ಲಿ ಓದುತ್ತಿರುವ ವೈದ್ಯ ವಿದ್ಯಾರ್ಥಿಗಳನ್ನು ಚಿಕಿತ್ಸಕರನ್ನಾಗಿ ನೇಮಿಸುವಂತೆ ಕಾಂಗ್ರೆಸ್ ಮುಖಂಡರು ತಮ್ ಅಭಿಪ್ರಾಯ ವ್ಯಕ್ತಪಡಿಸಿದರು…

State

ಬೆಂಗಳೂರು :  ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಮುಹೂರ್ತ ಫಿಕ್ಸ್ ಆಗಿರುವ ಬೆನ್ನಲ್ಲೇ ಡಿಕೆಶಿ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆಮಾಡಿದೆ. ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಹಾಗೂ ಕಾಫಿಡೇ ಮಾಲೀಕರಾಗಿದ್ದ ದಿವಂಗತ ಸಿದ್ದಾರ್ಥ್ ಅವರ ಪುತ್ರ ಅಮರ್ಥ್ಯ ಅವರ ವಿವಾಹ ಮಾತುಕತೆ ನಡೆಯುತ್ತಿದ್ದು, ಇಂದು ಸಂಜೆ ಇವರ ನಿಶ್ಚಿತಾರ್ಥ ನೆರವೇರುವ ಸಾಧ್ಯತೆ ಇದೆ.

ಕಳೆದ ಎರಡು ದಿನಗಳ ಹಿಂದೆ ಡಿ.ಕೆ.ಶಿವಕುಮಾರ್ ಅವರ ಕುಟುಂಬ ಸದಸ್ಯರು ಅಮರ್ಥ್ಯ ಅವರ ನಿವಾಸಕ್ಕೆ ತೆರಳಿ ಹುಡುಗನ ನೋಡುವ ಶಾಸ್ತ್ರ ಮುಗಿಸಿದ್ದರು. ಇದರ ಬೆನ್ನಲ್ಲೇ ಇಂದು ಎಸ್.ಎಂ.ಕೃಷ್ಣ ಅವರ ಸಂಬಂಧಿಕರು ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸುತ್ತಿದ್ದು, ಹುಡುಗಿ ನೋಡುವ ಶಾಸ್ತ್ರ ನೆರವೇರಿಸಲಿದ್ದಾರೆ. ಆ ಬಳಿಕ ಇಂದು ಸಂಜೆ ಎಸ್.ಎಂ.ಕೃಷ್ಣ ಅವರ ಸಹೋದರಿ ಅವರ ನಿವಾಸದಲ್ಲಿ ಇಂದು ಅಮರ್ಥ್ಯ ಹಾಗೂ ಐಶ್ವರ್ಯ ನಿಶ್ಚಿತಾರ್ಥ ನೆರವೇರಲಿದೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಜುಲೈ 2 ರಂದು ಮೂಹೂರ್ತ ನಿಗದಿಯಾಗಿದೆ. ಇದಕ್ಕೂ ಮುನ್ನವೇ ಡಿಕೆಶಿ ಕುಟುಂಬದಲ್ಲಿ ಪುತ್ರಿ ಐಶ್ವರ್ಯ ವಿವಾಹದ ಸಂಭ್ರಮ ಮನೆ ಮಾಡಿದೆ…

Uncategorized World

ನವದೆಹಲಿ : ಪಾಕಿಸ್ತಾನದ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಿದ್ದ ಈ ಇಬ್ಬರು ಸಿಬ್ಬಂದಿ ಕಣ್ಮರೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ.

ಇನ್ನು ಈ ಮೊದಲು ಪಾಕಿಸ್ತಾನದಲ್ಲಿ ರಾಯಭಾರ ಕಚೇರಿಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಿರುಕುಳ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದರೊಂದಿಗೆ ಈ ಹಿಂದೆ ಪಾಕಿಸ್ಥಾನದ ಐಎಸ್ಐ ಕೂಡ ಭಾರತೀಯ ರಾಜತಾಂತ್ರಿಕ ಸಿಬ್ಬಂದಿ ಪ್ರಯಾಣಿಸಿದ್ದ ಕಾರನ್ನು ಹಿಂಬಾಲಿಸಿದ್ದರು… .