kannada news latest – Kannada News Now


India Sports

ಮುಂಬೈ :  ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳ ನಡುವಿನ ಕಾದಾಟದೊಂದಿಗೆ ಶನಿವಾರ IPL ಟೂರ್ನಿಗೆ ಚಾಲನೆ ಸಿಗಲಿದೆ.

ಭಾರತ ಮಾತ್ರವಲ್ಲದೆ ವಿಶ್ವದ 120 ದೇಶಗಳಲ್ಲಿ ಐಪಿಎಲ್ ಪಂದ್ಯಗಳ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದ್ದು,. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಭಾರತದಲ್ಲಿ ಪಂದ್ಯಗಳನ್ನು ನೇರಪ್ರಸಾರ ಮಾಡುವ ಹಕ್ಕು ಪಡೆದುಕೊಂಡಿದೆ. ಇನ್ನೂ, ವಿವಿಧ ರಾಷ್ಟ್ರಗಳ ಪ್ರಸಾರ ವಾಹಿನಿಗಳ ಜತೆಗೂ ಪಂದ್ಯದ ನೇರಪ್ರಸಾರವನ್ನು ಹಂಚಿಕೊಳ್ಳಲಿದೆ. ಆದರೆ ಪಾಕಿಸ್ತಾನದಲ್ಲೇ ಈ ಬಾರಿ ಐಪಿಎಲ್ ಪಂದ್ಯಗಳು ನೇರಪ್ರಸಾರ ಕಾಣುವುದಿಲ್ಲ. ಪಾಕಿಸ್ತಾನದ ಯಾವುದೇ ಚಾನಲ್‌ಗಳು ಪಂದ್ಯದ ನೇರಪ್ರಸಾರ ಹಕ್ಕು ಪಡೆದುಕೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಐಪಿಎಲ್ 13ನೇ ಆವೃತ್ತಿಗೆ ಇನ್ನು ಐದು ದಿನ ಮಾತ್ರ ಬಾಕಿಯಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಐಎಂಎ ವಂಚನೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್; ನಿಂಬಾಳ್ಕರ್, ಹಿಲೋರಿ ವಿಚಾರಣೆ ಗ್ರೀನ್‌ ಸಿಗ್ನಲ್..!‌

State

ಬೆಂಗಳುರು :  ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಇಲ್ಲಿದೆ. ಸೆ.20 ರಂದು ಕಾನ್ ಸ್ಟೇಬಲ್ ಹುದ್ದೆಗೆ ನಗರದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.

ಸಿವಿಲ್ ಪೊಲೀಸ್ ಕಾನ್‍ಟೇಬಲ್ ಪುರುಷ ಮತ್ತು ಮಹಿಳಾ  ಹಾಗೂ ಸಿವಿಲ್ ಪೊಲೀಸ್ ಕಾನ್‍ಸ್ಟೆಬಲ್ ಪುರುಷ ಮತ್ತು ಮಹಿಳಾ)( ಕಲ್ಯಾಣ ಕರ್ನಾಟಕ) ಹುದ್ದೆಗಳ ಭರ್ತಿಯ ಸಂಬಂಧ ಸುಮಾರು 37,640 ಅಭ್ಯರ್ಥಿಗಳಿಗೆ ಸೆ.20ರಂದು ಪರೀಕ್ಷೆ ನಡೆಯಲಿದೆ. ನಗರದ 69 ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.ksp.gov.in ವೆಬ್ ಸೈಟ್ ವೀಕ್ಷಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಬ್ರೇಕ್

ಮಹಾರಾಷ್ಟ್ರ ರಾಜ್ಯಪಾಲರ ಭೇಟಿಗೆ ಮುಂದಾದ ನಟಿ ಕಂಗನಾ ರಣಾವತ್

State

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಆರ್ಭಟ ಜೋರಾಗಿದ್ದು, ಇಂದು ದಾಖಲೆಯ 9557 ಮಂದಿಗೆ ಸೋಂಕು ಧೃಡವಾಗಿದೆ.

ಕಿಲ್ಲರ್ ಕೊರೊನಾ ಸೋಂಕಿಗ ರಾಜ್ಯದಲ್ಲಿ ಇಂದು 94 ಮಂದಿ ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 7161 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 21 ಮಂದಿ ಬಲಿಯಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2391 ಕ್ಕೆ ಏರಿಕೆಯಾಗಿದೆ. ಸದ್ಯ ಸಿಯುನಲ್ಲಿ 795 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ದಾಖಕೆಯ 9557 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 344556 ಕ್ಕೆ ಏರಿಕೆಯಾಗಿದೆ.

BIG BREAKING : ರಾಜ್ಯದಲ್ಲಿ ಇಂದು 9,140 ಜನರಿಗೆ ಕೊರೋನಾ ಪಾಸಿಟಿವ್ : ಸಕ್ರೀಯ ಸೋಂಕಿತರ ಸಂಖ್ಯೆ 97,815

State

ಬೆಂಗಳೂರು : ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ, ಸಂಜನಾರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್​​ ಕಸ್ಟಡಿಗೆ ನೀಡಲಾಗಿದ್ದು. ವಿಚಾರಣೆ ನಡೆಯುತ್ತಿದೆ.

ಇಂದು ನಟಿ ಸಂಜನಾ ಹಾಗೂ ರಾಗಿಣಿ ದ್ವಿವೇದಿಗೆ ಬೆಳಗ್ಗೆಯಿಂದಲೂ ವಿಚಾರಣೆ ನಡೆಸಿರಲಿಲ್ಲ, ಆದರೆ ಸಂಜೆಯಾಗುತ್ತಲೇ ಇನ್ ಸ್ಪೆಕ್ಟರ್ ಅಂಜುಮಾಲ ತಂಡ ಆರೋಪಿಗಳ ಹೇಳಿಕೆ ಆಧರಿಸಿ ವಿಚಾರಣೆ ನಡೆಸಿದೆ.

ಆದಿತ್ಯ ಅಗರ್ವಾಲ್ ಹೇಳಿಕೆ ಆಧಾರಿತ  ರಾಗಿಣಿಗೆ ಪ್ರಶ್ನೆ ಮಾಡಲಾಗಿದ್ದು. ಪ್ರಶಾಂತ್ ಸಂಬರಗಿ ಹೇ:ಳಿಕೆ ಮೇರೆಗೆ ಸಂಜನಾ ಗಲ್ರಾನಿಯನ್ನು ಪ್ರತ್ಯೇಕವಾಗಿ ಕೂರಿಸಿ ವಿಚಾರಣೆ ನಡೆಸಲಾಗುತ್ತಿದೆ. ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು ಮಂದಿಯನ್ನು ನ್ಯಾಯಾದೀಶರು ಪೊಲೀಸ್​​ ಕಸ್ಟಡಿಗೆ ನೀಡಲಾಗಿದೆ.

ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಕೇಸ್ : ದಾಖಲೆ ಕೊಡ್ತೀನಿ ಎಂದು ಪೊಲೀಸರಿಗೆ ಪ್ರಶಾಂತ್ ಸಂಬರಗಿ ಹಾರಿಸಿದ್ರಾ ಕಾಗೆ..?

India State

ನವದೆಹಲಿ : ಕಾಂಗ್ರೆಸ್ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಎಐಸಿಸಿ ಭರ್ಜರಿ ಆಪರೇಷನ್ ನಡೆಸಿದೆ.  ಹೌದು, ಎಐಸಿಸಿ ಇಂದು ಹಲವು ವಿಭಾಗಗಳು ಹಾಗೂ ಸಂಘಟನಾ ಸಮಿತಿಗಳಿಗೆ ಮೇಜರ್ ಸರ್ಜರಿ ಮಾಡಿದೆ.

 ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ.

ಮಹತ್ವದ ಬೆಳವಣಿಗೆಯಲ್ಲಿ ಎಐಸಿಸಿ  ಪುನರ್ ರಚನೆಗೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ರಣದೀಪ್ ಸಿಂಗ್ ನೇಮಕಗೊಂಡಿದ್ದು, ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ನೇಮಕವಾಗಿದ್ದಾರೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಂ ನಬಿ ಅಜಾದ್ ಔಟ್ ಆಗಿದ್ದಾರೆ. ಹೆಚ್ ಕೆ ಪಾಟೀಲ್ ಗೆ ಮಹಾರಾಷ್ಟ್ರ ಉಸ್ತುವಾರಿ ಜವಾಬ್ದಾರಿ ನೀಡಿದ್ರೆ, ದಿನೇಶ್ ಗುಂಡೂರಾವ್ ಗೆ ಪುದುಚೇರಿ, ತಮಿಳುನಾಡು ಹಾಗೂ ಗೋವಾ ರಾಜ್ಯಗಳ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

BIGG NEWS -ಪ್ರಯಾಣಿಕರಿಗೆ ಬಿಗ್ ಶಾಕ್ : ಕೇಂದ್ರದಿಂದ ರೈಲ್ವೆ ಪ್ಲಾಟ್‌ಫಾರ್ಮ್‌ ಟಿಕೆಟ್ ದರ ಐದು ಪಟ್ಟು ಹೆಚ್ಚಳ

 

India State

ನವದೆಹಲಿ:  ರೈಲ್ವೆ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿಯೊಂದನ್ನು ರೈಲ್ವೆ ಇಲಾಖೆ ನೀಡಿದೆ. ಕೋವಿಡ್ ಸೋಂಕಿನ ಹಿನ್ನೆಲೆ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್‌ ಟಿಕೆಟ್ ದರವನ್ನು ಬರೋಬ್ಬರಿ ಐದು ಪಟ್ಟು ಹೆಚ್ಚಿಸಿದೆ. 

ಹೌದು, ಕೇಂದ್ರ ಸರ್ಕಾರ ಬೆಂಗಳೂರು ಸೇರಿದಂತೆ ದೇಶದ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್‌ ಟಿಕೆಟ್ ದರವನ್ನು ಬರೋಬ್ಬರಿ ಐದು ಪಟ್ಟು ಹೆಚ್ಚಿಸಿದೆ.

ಕೆಎಸ್ ಆರ್, ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರಿಂದ 50 ರೂಪಾಯಿಗೆ ಹೆಚ್ಚಿಸಲಾಗಿದೆ. ಈ ದರ ಏರಿಕೆ ಇಂದಿನಿಂದ ಜಾರಿಗೆ ಬಂದಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಕೋವಿಡ್ ಸೋಂಕಿನ ಹಿನ್ನೆಲೆ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್‌ ಟಿಕೆಟ್ ದರವನ್ನು ಬರೋಬ್ಬರಿ ಐದು ಪಟ್ಟು ಹೆಚ್ಚಿಸಿದೆ, ಆದರೆ ಇದು ತಾತ್ಕಾಲಿಕ ಎಂದಷ್ಟೇ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.

BREAKING : ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ‘ರಣದೀಪ್ ಸಿಂಗ್ ಸುರ್ಜೇವಾಲ’ ನೇಮಕ

India State

ನ್ಯೂಸ್ ಡೆಸ್ಕ್ :  ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪುನಾರಚನೆಗೊಂಡಿದ್ದು, ಕೈ’  ಚುನಾವಣಾ ಕಮಿಟಿಯಿಂದ ವೀರಪ್ಪ ಮೊಯ್ಲಿ ಔಟ್ ಆಗಿದ್ದಾರೆ. ಈ ಮೂಲಕ ಮೊಯಿಲಿಗೆ ಎಐಸಿಸಿ ಬಿಗ್  ಶಾಕ್ ನೀಡಿದೆ. ಕೇಂದ್ರ ಕಾಂಗ್ರೆಸ್ ಚುನಾವಣಾ ಸಮಿತಿಯ ಸದಸ್ಯ ಸ್ಥಾನಕ್ಕೆ ಕೃಷ್ಣಭೈರೇಗೌಡ ಅವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.

ನೂತನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬದಲಾವಣೆಯಾಗಿದ್ದು, ನೂತನ ಉಸ್ತುವಾರಿಯಾಗಿ ‘ರಣದೀಪ್ ಸಿಂಗ್ ಸುರ್ಜೇವಾಲ’ ರನ್ನು ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಹೌದು. ಮಹತ್ವದ ಬೆಳವಣಿಗೆಯಲ್ಲಿ ಎಐಸಿಸಿ  ಪುನರ್ ರಚನೆಗೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ರಣದೀಪ್ ಸಿಂಗ್ ನೇಮಕಗೊಂಡಿದ್ದು, ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ನೇಮಕವಾಗಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಂ ನಬಿ ಅಜಾದ್ ಔಟ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ, ಮಹಾರಾಷ್ಟ್ರ ಉಸ್ತುವಾರಿಯಾಗಿ  ಹೆಚ್ ಕೆ  ಪಾಟೀಲ್ ನೇಮಕಗೊಂಡಿದ್ದರೆ, ತಮಿಳುನಾಡು  ಉಸ್ತುವಾರಿಯಾಗಿ ದಿನೇಶ್ ಗುಂಡೂರಾವ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

BIG BREAKING : ಆರ್ಯ ಸಮಾಜದ ಮುಖಂಡ ‘ಸ್ವಾಮಿ ಅಗ್ನಿವೇಶ್’ ನಿಧನ

State

ಬೆಂಗಳೂರು :  ನಾಳೆಯಿಂದ ‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲಿದೆ.

ಹೌದು, ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಸೋಂಕಿನ ಹಿನ್ನೆಲೆ ‘ಸಾರ್ವಜನಿಕ ಗ್ರಂಥಾಲಯವನ್ನು ಮುಚ್ಚಲಾಗಿತ್ತು.ಇದೀಗ ನಾಳೆಯಿಂದ ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ.

ಆದರೆ ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾತ್ರವಲ್ಲದೆ ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ತಪಾಸಣೆ ನಡೆಸಬೇಕು ಎಂದು ಇದೇ ವೇಳೆ ಸೂಚನೆ ನೀಡಲಾಗಿದೆ.ಅನ್ ಲಾಕ್ 4 ಮಾರ್ಗಸೂಚಿ ಪ್ರಕಾರ ಕಂಟೈನ್ ಮೆಂಟ್ ಹೊರತುಪಡಿಸಿ ಹೊರಗಿನ ಪ್ರದೇಶಗಳಲ್ಲಿ ಗ್ರಂಥಾಲಯಗಳು ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ.

BREAKING : ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಕೇಸ್ : ‘CCB’ ಯಿಂದ ಮತ್ತೋರ್ವ ಡ್ರಗ್ ಪೆಡ್ಲರ್ ಬಂಧನ

 

BREAKING : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಟ್ವಿಸ್ಟ್ : ‘ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್’ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ

State

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಹೆಡೆಮುರಿಕಟ್ಟಿದ್ದಾರೆ.

ಪ್ರಕರಣದ 5 ನೇ ಆರೋಪಿ ವೈಭವ್ ಜೈನ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ವೈಯಾಲಿಕಾವಲ್ ನಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಇನ್ನೂ, ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ ಸೇರಿದಂತೆ 6 ಜನರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್​​ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ.

ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು ಮಂದಿಯನ್ನು ನ್ಯಾಯಾಧೀಶರು ಪೊಲೀಸ್​​ ಕಸ್ಟಡಿಗೆ ನೀಡಿದ್ದಾರೆ.

ಕುರಿ/ಮೇಕೆ ಸಾಕಾಣಿಕೆದಾರರಿಗೆ ಸಂಚಾರಿ ಟೆಂಟ್ ಮತ್ತು ಇನ್ನಿತರೆ ಪರಿಕರಗಳ ಖರೀದಿಗಾಗಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

State

ಬೆಂಗಳೂರು : ಕಿಲ್ಲರ್ ಕೊರೊನಾ ರಾಜ್ಯದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ಕೊರೊನಾ ಸೋಂಕಿಗೆ ಇಂದು 130 ಮಂದಿ ಬಲಿಯಾಗಿದ್ದಾರೆ.  ಈ ಮೂಲಕ ರಾಜ್ಯದಲ್ಲಿ ಕೊರೊನಾ  ಸಾವಿನ ಸಂಖ್ಯೆ 7067   ಕ್ಕೆ ಏರಿಕೆಯಾಗಿದೆ.

ಹೌದು, ರಾಜ್ಯದಲ್ಲಿ ಇಂದು 130 ಮಂದಿ ಸೋಂಕು ಧೃಡವಾಗಿದ್ದು,. ಕರ್ನಾಟಕದಲ್ಲಿ ಸಾವಿನ ಸಂಖ್ಯೆ 6937 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 3426 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2370  ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 9464  ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 440411 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 770  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

BIG BREAKING : ರಾಜ್ಯದಲ್ಲಿ ಇಂದು 9,464 ಜನರಿಗೆ ಕೊರೋನಾ ದೃಢ : ಸಕ್ರೀಯ ಸೋಂಕಿತರ ಸಂಖ್ಯೆ 98,326