kannada news now – Kannada News Now


India State

ನವದೆಹಲಿ :  ಎಲ್ಲಾ ಬಗೆಯ ಈರುಳ್ಳಿ ರಪ್ತಿಗೆ ನಿಷೇಧ ಮಾಡಿ ಇಂದು (ಸೋಮವಾರ)  ಕೇಂದ್ರ ಸರಕಾರದಿಂದ ಆದೇಶ ಹೊರಡಿಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.

ಪುಡಿ ರೂಪದಲ್ಲಿ ಕತ್ತರಿಸಿದ, ಕತ್ತರಿಸಿದ ಅಥವಾ ಒಡೆದವುಗಳನ್ನು ಹೊರತುಪಡಿಸಿ ಎಲ್ಲಾ ಬಗೆಯ ಈರುಳ್ಳಿಯನ್ನು ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ಇಂದು ನಿಷೇಧಿಸಿದೆ. ಎಲ್ಲಾ ಬಗೆಯ ಈರುಳ್ಳಿಯನ್ನು ರಫ್ತು ಮಾಡುವುದನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ”ಎಂದು ವಿದೇಶಾಂಗ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) ಅಧಿಸೂಚನೆಯಲ್ಲಿ ತಿಳಿಸಿದೆ. ಈ ನಿಷೇಧದಲ್ಲಿ ಬೆಂಗಳೂರು ಗುಲಾಬಿ ಈರುಳ್ಳಿ ಮತ್ತು ಕೃಷ್ಣಪುರಂ ಈರುಳ್ಳಿಯೂ ಸೇರಿದೆ.

ಇತ್ತೀಚಿನ ದಿನಗಳಲ್ಲಿ ಈರುಳ್ಳಿ ಬೆಲೆ ಹೆಚ್ಚಾಗಿದೆ. ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಯಲ್ಲಿ ಕೊರತೆ ಇದೆ. ಆದರೆ ಈ ಕೊರತೆ ಕಾಲೋಚಿತವಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರ್ಥಿಕ ವರ್ಷ 21 ರ ಏಪ್ರಿಲ್-ಜೂನ್ ಅವಧಿಯಲ್ಲಿ ಭಾರತ $ 198 ಮಿಲಿಯನ್ ಈರುಳ್ಳಿ ಮತ್ತು ಇಡೀ 2019-20ರಲ್ಲಿ 40 440 ಮಿಲಿಯನ್ ರಫ್ತು ಮಾಡಿದೆ.

ಮುಂಬೈ ಬಿಟ್ಟ ಬೆನ್ನಲ್ಲೇ ಆದಿತ್ಯ ಠಾಕ್ರೆ ವಿರುದ್ಧ ‘ಕಂಗನಾ ರಣಾವತ್’ ಖಡಕ್ ಟ್ವೀಟ್

State

ನವದೆಹಲಿ :  ಎಲ್ಲಾ ಬಗೆಯ ಈರುಳ್ಳಿ ರಪ್ತಿಗೆ ನಿಷೇಧ ಮಾಡಿ ಇಂದು (ಸೋಮವಾರ)  ಕೇಂದ್ರ ಸರಕಾರದಿಂದ ಆದೇಶ ಹೊರಡಿಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.

ಪುಡಿ ರೂಪದಲ್ಲಿ ಕತ್ತರಿಸಿದ, ಕತ್ತರಿಸಿದ ಅಥವಾ ಒಡೆದವುಗಳನ್ನು ಹೊರತುಪಡಿಸಿ ಎಲ್ಲಾ ಬಗೆಯ ಈರುಳ್ಳಿಯನ್ನು ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ಇಂದು ನಿಷೇಧಿಸಿದೆ. ಎಲ್ಲಾ ಬಗೆಯ ಈರುಳ್ಳಿಯನ್ನು ರಫ್ತು ಮಾಡುವುದನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ ”ಎಂದು ವಿದೇಶಾಂಗ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) ಅಧಿಸೂಚನೆಯಲ್ಲಿ ತಿಳಿಸಿದೆ. ಈ ನಿಷೇಧದಲ್ಲಿ ಬೆಂಗಳೂರು ಗುಲಾಬಿ ಈರುಳ್ಳಿ ಮತ್ತು ಕೃಷ್ಣಪುರಂ ಈರುಳ್ಳಿಯೂ ಸೇರಿದೆ.

ಇತ್ತೀಚಿನ ದಿನಗಳಲ್ಲಿ ಈರುಳ್ಳಿ ಬೆಲೆ ಹೆಚ್ಚಾಗಿದೆ. ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಯಲ್ಲಿ ಕೊರತೆ ಇದೆ. ಆದರೆ ಈ ಕೊರತೆ ಕಾಲೋಚಿತವಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರ್ಥಿಕ ವರ್ಷ 21 ರ ಏಪ್ರಿಲ್-ಜೂನ್ ಅವಧಿಯಲ್ಲಿ ಭಾರತ $ 198 ಮಿಲಿಯನ್ ಈರುಳ್ಳಿ ಮತ್ತು ಇಡೀ 2019-20ರಲ್ಲಿ 40 440 ಮಿಲಿಯನ್ ರಫ್ತು ಮಾಡಿದೆ.

ಪರಪ್ಪನ ಅಗ್ರಹಾರದ ಪಂಜರ ಸೇರಿದ ರಾ’ಗಿಣಿ’…!

 

India

ಮುಂಬೈ:  ಮುಂಬೈಯನ್ನು ಪಾಕ್​ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ನಟಿ ಕಂಗನಾ ರಣಾವತ್ ಮಹಾರಾಷ್ಟ್ರ ಆಡಳಿತಾರೂಢ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು. ಆ ಬಳಿಕ ಮುಂಬೈನಲ್ಲಿರುವ ಕಂಗಾನ ಅವರ ಕಚೇರಿಯನ್ನು ಅನಧಿಕೃತ ಎಂದು ಹೇಳಿ ಮಹಾರಾಷ್ಟ್ರ ಸರ್ಕಾರ ಅದನ್ನು ನೆಲಸಮ ಮಾಡಿತ್ತು.

ಈ ವಿಚಾರವಾಗಿ ನೇರವಾಗಿಯೇ ಉದ್ಧವ್​ ಠಾಕ್ರೆಯವರಿಗೆ ಸವಾಲು ಹಾಕಿರುವ ಕಂಗನಾ  ಮುಂಬೈ ಬಿಟ್ಟ ಕೆಲವೇ ಕ್ಷಣದಲ್ಲಿ ಟ್ವೀಟ್ ಮೂಲಕ ಉದ್ಧವ್​ ಠಾಕ್ರೆಯವರ ಪುತ್ರ ಆದಿತ್ಯ ಠಾಕ್ರೆಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಾನು ಬಾಲಿವುಡ್​ ಮಾಫಿಯಾ, ಸುಶಾಂತ್​ ಸಿಂಗ್​ ಸಾವು, ಡ್ರಗ್ಸ್​ ದಂಧೆ ಬಗ್ಗೆ ತುಂಬ ವಿಚಾರಗಳನ್ನು ಮಾತನಾಡುತ್ತಿರುವುದೇ ಅವರಿಗೆ ಸಮಸ್ಯೆಯಾಗಿದೆ, ನನ್ನನ್ನು ಹತ್ತಿಕ್ಕಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಪ್ರಯತ್ನಿಸುತ್ತಿದ್ದಾರೆ. ಎಲ್ಲದರ ಜತೆ ಉದ್ಧವ್ ಪ್ರೀತಿಯ ಪುತ್ರ ಆದಿತ್ಯ ಠಾಕ್ರೆಗೆ ಸಂಪರ್ಕವಿದೆ. ಕೆಟ್ಟದ್ದನ್ನು ಎತ್ತಿ ತೋರಿಸಿದ್ದಕ್ಕೆ ಅವರೆಲ್ಲ ಸೇರಿ ನನ್ನನ್ನು ಬಾಯಿಮುಚ್ಚಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಂಗನಾ ಟ್ವೀಟ್ ಮಾಡಿದ್ದಾರೆ.

ಮುಂಬೈ -ಚೆನ್ನೈ ತಂಡಗಳ ಕಾದಾಟದೊಂದಿಗೆ ‘IPL’ ಟೂರ್ನಿಗೆ ಚಾಲನೆ : ಪಾಕ್ ಬಿಟ್ಟು 120 ದೇಶಗಳಲ್ಲಿ ನೇರಪ್ರಸಾರ

State

ಬೆಂಗಳೂರು :  ರಾಜ್ಯದಲ್ಲಿ   ಕೊರೊನಾ ಸೋಂಕಿಗೆ 119 ಜನರು ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 7384 ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 37 ಜನರು ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 2473 ಕ್ಕೆ ಏಕೆಯಾಗಿದೆ. ಬೆಂಗಳೂರಿನಲ್ಲಿ ಸದ್ಯ 40527 ಸಕ್ರಿಯ ಪ್ರಕರಣಗಳಿದೆ.

ರಾಜ್ಯದಲ್ಲಿ ಇಂದು 8244 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 467689 ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇದುವರೆಗೆ 361823 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ರಾಜ್ಯದಲ್ಲಿ 98463 ಸಕ್ರೀಯ ಸೋಂಕಿತರಿದ್ದಾರೆ. ಅಲ್ಲದೇ ಇಂದು ಕಿಲ್ಲರ್ ಕೊರೋನಾಗೆ 119 ಸೋಂಕಿತರು ಸಾವನ್ನಪ್ಪಿದ್ದಾರೆ.

ಐಎಂಎ ವಂಚನೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್; ನಿಂಬಾಳ್ಕರ್, ಹಿಲೋರಿ ವಿಚಾರಣೆ ಗ್ರೀನ್‌ ಸಿಗ್ನಲ್..!‌

State

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಸೇರಿದಂತೆ 5 ಡ್ರಗ್ಸ್ ಪೆಡ್ಲರ್ ಗೆ ಸೆಪ್ಟೆಂಬರ್ 28ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವಾಗಿದೆ. ಇನ್ನೂ, ಇದೇ ಪ್ರಕರಣದಲ್ಲಿ ನಟಿ ಸಂಜನಾ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ 33ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

ಸಿಸಿಬಿಯಿಂದ ಬಂಧಿತರಾದ ನಂತರ ಇಷ್ಟು ದಿನಗಳ ಕಾಲ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಒಟ್ಟಿಗೆ ಇದ್ದ ಇಬ್ಬರು ನಟಿಯರು ಸೋಮವಾರ ಬೇರೆಯಾಗುವಾ ಪರಸ್ಪರ ತಬ್ಬಿಕೊಂಡು ಅತ್ತರು. ನಟಿ ರಾಗಿಣಿ ದ್ವಿವೇದಿ ಸೇರಿದಂತೆ 5 ಡ್ರಗ್ಸ್ ಪೆಡ್ಲರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

 ಅಲ್ಲದೇ ಇದೇ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ತಮ್ಮ ವಶಕ್ಕೆ ನಟಿ ಸಂಜನಾ ನೀಡುವಂತೆ ಕೋರಿಕೊಂಡ ಸಲುವಾಗಿ 3 ದಿನಗಳ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಹೀಗಾಗಿ ರಾಗಿಣಿ ಪರಪ್ಪನ ಅಗ್ರಹಾರ ಜೈಲಿಗೆ ಹೋಗುವುದು ಅನಿವಾರ್ಯವಾಗಿದೆ. ಸಂಜನಾ ಮತ್ತಷ್ಟು ದಿನಗಳ ಕಾಲ ಸಾಂತ್ವನ ಕೇಂದ್ರದಲ್ಲೇ ಇರುವುದು ಖಚಿತವಾಗಿದೆ. ಹೀಗಾಗಿ ಇಬ್ಬರು ನಟಿಯರು ಒಬ್ಬರನ್ನು ಒಬ್ಬರು ತಬ್ಬಿಕೊಂಡು ಅತ್ತರು.

BIG NEWS : IMA ವಂಚನೆ ಪ್ರಕರಣ : ರಾಜ್ಯ ಸರ್ಕಾರದಿಂದ IPS ಅಧಿಕಾರಿಗಳ ವಿರುದ್ಧದ ತನಿಖೆಗೆ ಅನುಮತಿ

State

ಬೆಂಗಳುರು :  ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಇಲ್ಲಿದೆ. ಸೆ.20 ರಂದು ಕಾನ್ ಸ್ಟೇಬಲ್ ಹುದ್ದೆಗೆ ನಗರದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.

ಸಿವಿಲ್ ಪೊಲೀಸ್ ಕಾನ್‍ಟೇಬಲ್ ಪುರುಷ ಮತ್ತು ಮಹಿಳಾ  ಹಾಗೂ ಸಿವಿಲ್ ಪೊಲೀಸ್ ಕಾನ್‍ಸ್ಟೆಬಲ್ ಪುರುಷ ಮತ್ತು ಮಹಿಳಾ)( ಕಲ್ಯಾಣ ಕರ್ನಾಟಕ) ಹುದ್ದೆಗಳ ಭರ್ತಿಯ ಸಂಬಂಧ ಸುಮಾರು 37,640 ಅಭ್ಯರ್ಥಿಗಳಿಗೆ ಸೆ.20ರಂದು ಪರೀಕ್ಷೆ ನಡೆಯಲಿದೆ. ನಗರದ 69 ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.ksp.gov.in ವೆಬ್ ಸೈಟ್ ವೀಕ್ಷಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಬ್ರೇಕ್

ಮಹಾರಾಷ್ಟ್ರ ರಾಜ್ಯಪಾಲರ ಭೇಟಿಗೆ ಮುಂದಾದ ನಟಿ ಕಂಗನಾ ರಣಾವತ್

State

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ನಟಿ ಸಂಜನಾ ವಿರುದ್ಧ ವಾಗ್ಧಾಳಿ ನಡೆಸುತ್ತಲೇ ಇದ್ದಾರೆ. ಡ್ರಗ್ಸ್ ಮಾಫಿಯಾದಲ್ಲಿ ಹಲವು ನಟ ನಟಿಯರು ಭಾಗಿಯಾಗಿದ್ದಾರೆ, ಈ ಬಗ್ಗೆ ದಾಖಲೆಗಳನ್ನು ನೀಡುವುದಾಗಿ ಸಂಬರಗಿ ಹೇಳಿದ್ದರು. ಆದರೆ ಇದೀಗ ನನ್ನ ಬಳಿ ಯಾವುದೇ ದಾಖಲೆ ಇಲ್ಲ ಎಂದು ಪ್ರಶಾಂತ್ ಸಂಬರಗಿ ಪೊಲೀಸರಿಗೆ ಕಾಗೆ ಹಾರಿಸಿದ್ದಾರೆ.

ಸದ್ಯಕ್ಕೆ ನನ್ನ ಹತ್ರ ಯಾವುದೇ ದಾಖಲೆ ಇಲ್ಲ ಎಂದು ಸಿಸಿಬಿ ಪೊಲೀಸರ ‌ಮುಂದೆ ಪ್ರಶಾಂತ್ ಸಂಬರಗಿ ಸೈಲೆಂಟ್ ಆಗಿದ್ದಾರೆ. ಸಂಜನಾ ಸಿನಿಮಾ ಲಿಸ್ಟ್, ಇಡ್ಕೊಂಡು ಸಂಬರ್ಗಿ ಬಂದಿದ್ದು, ಬರೇ ಖಾಲಿ ಫೈಲ್ ಇಡ್ಕೊಂಡು ಬಂದಿದ್ದನ್ನು ನೋಡಿ ಪೊಲೀಸರು ಗರಂ ಆಗಿದ್ದಾರೆ.

ನೀನು ತೋರಿಸಿದ ಎಲ್ಲಾ ದಾಖಲೆಗಳು ನಮ್ಮ ಹತ್ರ ಕೂಡ ಇದಾವೆ..ಇದನ್ನು ಬಿಟ್ಟು ಬೇರೆ ಏನಿದೆ ಹೇಳಿ ಎಂದು ಮಾಧ್ಯಮಗಳ ಮುಂದೆ ಪೋಸ್ ಕೊಡೋದಲ್ಲ ಅಂತಾ ಗರಂ ಪೊಲೀಸರು ಗರಂ ಆಗಿದ್ದಾರೆ. ಬಳಿಕ ದಾಖಲೆ ಸಮೇತ ಶುಕ್ರವಾರ ಬರ್ತಿನಿ ಹೋದ ಸಂಬರ್ಗಿ ಎದ್ದುಹೋಗಿದ್ದಾರೆ. ಶುಕ್ರವಾರ ಬರೋಕೆ ನಾವು ಯಾವುದೇ ನೋಟಿಸ್ ಕೊಟ್ಟಿಲ್ಲ, ಕೊಡೋದು ಇಲ್ಲ.. ಸಿಸಿಬಿ ಪೊಲೀಸರ ಪ್ರಶ್ನೆ ಗೆ ಗಲಿಬಿಲಿಗೊಂಡ ಸಂಬರ್ಗಿ ಸೈಲೆಂಟ್ ಆಗಿ ಎದ್ದು ಬಂದಿದ್ದಾರೆ.

ನಾಳೆ NEET ಪರೀಕ್ಷೆ: ಕೊರೊನಾ ಕಟ್ಟುನಿಟ್ಟಿನ ಕ್ರಮಗಳ ನಡುವೆ ಪರೀಕ್ಷೆ ಬರೆಯಲಿದ್ದಾರೆ 15 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು..!

India State

ನವದೆಹಲಿ : ಕಾಂಗ್ರೆಸ್ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಎಐಸಿಸಿ ಭರ್ಜರಿ ಆಪರೇಷನ್ ನಡೆಸಿದೆ.  ಹೌದು, ಎಐಸಿಸಿ ಇಂದು ಹಲವು ವಿಭಾಗಗಳು ಹಾಗೂ ಸಂಘಟನಾ ಸಮಿತಿಗಳಿಗೆ ಮೇಜರ್ ಸರ್ಜರಿ ಮಾಡಿದೆ.

 ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ.

ಮಹತ್ವದ ಬೆಳವಣಿಗೆಯಲ್ಲಿ ಎಐಸಿಸಿ  ಪುನರ್ ರಚನೆಗೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ರಣದೀಪ್ ಸಿಂಗ್ ನೇಮಕಗೊಂಡಿದ್ದು, ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ನೇಮಕವಾಗಿದ್ದಾರೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಂ ನಬಿ ಅಜಾದ್ ಔಟ್ ಆಗಿದ್ದಾರೆ. ಹೆಚ್ ಕೆ ಪಾಟೀಲ್ ಗೆ ಮಹಾರಾಷ್ಟ್ರ ಉಸ್ತುವಾರಿ ಜವಾಬ್ದಾರಿ ನೀಡಿದ್ರೆ, ದಿನೇಶ್ ಗುಂಡೂರಾವ್ ಗೆ ಪುದುಚೇರಿ, ತಮಿಳುನಾಡು ಹಾಗೂ ಗೋವಾ ರಾಜ್ಯಗಳ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

BIGG NEWS -ಪ್ರಯಾಣಿಕರಿಗೆ ಬಿಗ್ ಶಾಕ್ : ಕೇಂದ್ರದಿಂದ ರೈಲ್ವೆ ಪ್ಲಾಟ್‌ಫಾರ್ಮ್‌ ಟಿಕೆಟ್ ದರ ಐದು ಪಟ್ಟು ಹೆಚ್ಚಳ

 

India State

ನವದೆಹಲಿ:  ರೈಲ್ವೆ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿಯೊಂದನ್ನು ರೈಲ್ವೆ ಇಲಾಖೆ ನೀಡಿದೆ. ಕೋವಿಡ್ ಸೋಂಕಿನ ಹಿನ್ನೆಲೆ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್‌ ಟಿಕೆಟ್ ದರವನ್ನು ಬರೋಬ್ಬರಿ ಐದು ಪಟ್ಟು ಹೆಚ್ಚಿಸಿದೆ. 

ಹೌದು, ಕೇಂದ್ರ ಸರ್ಕಾರ ಬೆಂಗಳೂರು ಸೇರಿದಂತೆ ದೇಶದ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್‌ ಟಿಕೆಟ್ ದರವನ್ನು ಬರೋಬ್ಬರಿ ಐದು ಪಟ್ಟು ಹೆಚ್ಚಿಸಿದೆ.

ಕೆಎಸ್ ಆರ್, ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರಿಂದ 50 ರೂಪಾಯಿಗೆ ಹೆಚ್ಚಿಸಲಾಗಿದೆ. ಈ ದರ ಏರಿಕೆ ಇಂದಿನಿಂದ ಜಾರಿಗೆ ಬಂದಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಕೋವಿಡ್ ಸೋಂಕಿನ ಹಿನ್ನೆಲೆ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್‌ ಟಿಕೆಟ್ ದರವನ್ನು ಬರೋಬ್ಬರಿ ಐದು ಪಟ್ಟು ಹೆಚ್ಚಿಸಿದೆ, ಆದರೆ ಇದು ತಾತ್ಕಾಲಿಕ ಎಂದಷ್ಟೇ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.

BREAKING : ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ‘ರಣದೀಪ್ ಸಿಂಗ್ ಸುರ್ಜೇವಾಲ’ ನೇಮಕ

India State

ನ್ಯೂಸ್ ಡೆಸ್ಕ್ :  ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪುನಾರಚನೆಗೊಂಡಿದ್ದು, ಕೈ’  ಚುನಾವಣಾ ಕಮಿಟಿಯಿಂದ ವೀರಪ್ಪ ಮೊಯ್ಲಿ ಔಟ್ ಆಗಿದ್ದಾರೆ. ಈ ಮೂಲಕ ಮೊಯಿಲಿಗೆ ಎಐಸಿಸಿ ಬಿಗ್  ಶಾಕ್ ನೀಡಿದೆ. ಕೇಂದ್ರ ಕಾಂಗ್ರೆಸ್ ಚುನಾವಣಾ ಸಮಿತಿಯ ಸದಸ್ಯ ಸ್ಥಾನಕ್ಕೆ ಕೃಷ್ಣಭೈರೇಗೌಡ ಅವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.

ನೂತನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬದಲಾವಣೆಯಾಗಿದ್ದು, ನೂತನ ಉಸ್ತುವಾರಿಯಾಗಿ ‘ರಣದೀಪ್ ಸಿಂಗ್ ಸುರ್ಜೇವಾಲ’ ರನ್ನು ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಹೌದು. ಮಹತ್ವದ ಬೆಳವಣಿಗೆಯಲ್ಲಿ ಎಐಸಿಸಿ  ಪುನರ್ ರಚನೆಗೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ರಣದೀಪ್ ಸಿಂಗ್ ನೇಮಕಗೊಂಡಿದ್ದು, ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ನೇಮಕವಾಗಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಂ ನಬಿ ಅಜಾದ್ ಔಟ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ, ಮಹಾರಾಷ್ಟ್ರ ಉಸ್ತುವಾರಿಯಾಗಿ  ಹೆಚ್ ಕೆ  ಪಾಟೀಲ್ ನೇಮಕಗೊಂಡಿದ್ದರೆ, ತಮಿಳುನಾಡು  ಉಸ್ತುವಾರಿಯಾಗಿ ದಿನೇಶ್ ಗುಂಡೂರಾವ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

BIG BREAKING : ಆರ್ಯ ಸಮಾಜದ ಮುಖಂಡ ‘ಸ್ವಾಮಿ ಅಗ್ನಿವೇಶ್’ ನಿಧನ