kannada news update – Kannada News Now

India

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ಈಸ್ಟ್ ಇಂಡಿಯಾ ಕಂಪನಿ ಆಡಳಿತವನ್ನು ನೆನಪಿಸುವಂತಿವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.

ಹೊಸದಾಗಿ ಅನುಮೋದನೆ ಪಡೆಯಲಾಗಿರುವ ಮೂರು ಮಸೂದೆಗಳ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ರೈತರು ಕನಿಷ್ಠ ಬೆಂಬಲ ಬೆಲೆಯಿಂದ ವಂಚಿತರಾಗಲಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.

‘ರೈತರು ತಮ್ಮದೇ ಕೃಷಿಭೂಮಿಗಳಲ್ಲಿ ಕಾರ್ಮಿಕರಾಗಲಿದ್ದಾರೆ. ಆದರೆ ಮಸೂದೆ ಮೂಲಕ ಗುಲಾಮರನ್ನಾಗಿಸಲು ಬಲವಂತಪಡಿಸಲಾಗುತ್ತದೆ. ಈ ರೀತಿ ಅನ್ಯಾಯ ಎಸಗಲು ನಾವು ಬಿಡುವುದಿಲ್ಲ’ ಎಂದು ಪ್ರಿಯಾಂಕಾ ಹೇಳಿದ್ದಾರೆ.

State

ಬೆಂಗಳೂರು : ನಾನು ಸುಳ್ಳು, ಮೋಸದಿಂದ ಜಾತಿ, ಜನ್ಮ ಪ್ರಮಾಣ ಪತ್ರ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವ ಎಂದು ಪಶು ಸಂಗೋಪನೆ, ವಕ್ ಮತ್ತು ಹಜ್ ಖಾತೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಮಾಜಿ ಸಚಿವ ಹೆಚ್. ಆಂಜನೇಯ ಆರೋಪಕ್ಕೆ ತಿರುಗೇಟು ನೀಡಿದ ಚವ್ಹಾಣ್, ನಾನು ಸುಳ್ಳು, ಮೋಸದಿಂದ ಜಾತಿ, ಜನ್ಮ ಪ್ರಮಾಣ ಪತ್ರ ಪಡೆದಿರುವುದು ಸಾಬೀತಾದರೆ ಅದೇ ಕ್ಷಣ ರಾಜಕೀಯದಿಂದ ನಿವೃತ್ತಿ ಪಡೆಯುವೆ, ಒಂದು ವೇಳೆ ಸುಳ್ಳು ಎಂದಾದರೆ ಬಹಿರಂಗವಾಗಿ ಕ್ಷಮೆ ಕೋರಲಿ ಎಂದು ಸವಾಲು ಹಾಕಿದ್ದಾರೆ.

ನಾನು ಮೂಲತಃ ಕರ್ನಾಟಕದವನು. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೋಂತಿ ತಾಂಡಾ ನನ್ನ ಹುಟ್ಟೂರು, ನಾನು ಪರಿಶಿಷ್ಟ ಜಾತಿ ಲಂಬಾಣಿ ಜನಾಂಗಕ್ಕೆ ಸೇರಿದ್ದೇನೆ. ಆಂಜನೇಯ ಅವರು ಸುಳ್ಳು ಮಾಹಿತಿ ಪಡೆದು ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದರು.

India World

ನ್ಯೂಯಾರ್ಕ್: ಪ್ರಪಂಚದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದ ಕೊವಿಡ್-19 ಸೋಂಕಿತರ ಸಂಖ್ಯೆ ಗುರುವಾರ 3 ಕೋಟಿ 24 ಲಕ್ಷ ದಾಟಿದ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ) ತಿಳಿಸಿದೆ.

ಜಾಗತಿಕ ಪ್ರಕರಣಗಳ ಸಂಖ್ಯೆ ಸದ್ಯ 3,24,16,405 ಕ್ಕೆ ತಲುಪಿದ್ದು, ವಿಶ್ವದಾದ್ಯಂತ ಮಾರಕ ಸೋಂಕಿನಿಂದ ಸಾವಿನ ಸಂಖ್ಯೆ 9,87,813ಕ್ಕೆ ಏರಿಕೆಯಾಗಿದೆ. ಅಂತೆಯೇ ಒಟ್ಟಾರೆ ಸೋಂಕಿತರ ಪೈಕಿ 2,39,34,098 ಮಂದಿ ಸೋಂಕಿತರು ಈ ವರೆಗೂ ಗುಣಮುಖರಾಗಿದ್ದಾರೆ ಎಂದು ಸಿಎಸ್ಎಸ್ಇ ಮಾಹಿತಿ ತಿಳಿಸಿದೆ.

ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 71,85,471ಕ್ಕೆ ಏರಿಕೆಯಾಗಿದ್ದು, ಮತ್ತು 2,07,538 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 2ನೇ ಸ್ಥಾನದಲ್ಲಿರುವ ಭಾರತದಲ್ಲಿ ಸೋಂಕಿತರ ಸಂಖ್ಯೆ 58,18,571 ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‍ ನಲ್ಲಿ 46,59,909 ಪ್ರಕರಣಗಳು ದಾಖಲಾಗಿವೆ.

India

ನವದೆಹಲಿ : ಯೂನಿಯನ್ ಪಬ್ಲಿಕ್ ಸರ್ವೀಸಸ್ ಕಮಿಷನ್ (UPSC) 2020 ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗವು ಬಿಡುಗಡೆ ಮಾಡಿದೆ.

ಯುಪಿಎಸ್ ಸಿ ಇಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ ಅಕ್ಟೋಬರ್ 18 ರಂದು ಎರಡು ಶಿಫ್ಟ್ ಗಳಲ್ಲಿ ನಡೆಸಲಾಗುತ್ತದೆ. ಮೊದಲ ಶಿಫ್ಟ್ ಪರೀಕ್ಷೆಯನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಸಲಾಗುತ್ತದೆ. ಎರಡನೇ ಶಿಫ್ಟ್ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುತ್ತದೆ ಎಂದು ಆಯೋಗ ತಿಳಿಸಿದೆ.

ಯುಪಿಎಸ್ ಸಿ ಸಿಎಸ್ ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅ.18 ರವರೆಗೆ ಅವಕಾಶ ನೀಡಲಾಗಿದೆ.

State

ಚೆನ್ನೈ : ಕರೋನ ಸೊಂಕಿನಿಂದ ಬಳಲುತ್ತಿದ್ದ ಬಹು ಭಾಷಾ ನಟ, ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಚನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರ ಶ್ವಾಸಕೋಶವು ತೀವ್ರ ಪ್ರಮಾಣದಲ್ಲಿ ಏರುಪೇರು ಉಂಟಾದ ಪರಿಣಾಮ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಕೊರೋನಾ ವೈರಸ್ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

India

ನವದೆಹಲಿ : ಭಾರತ ಚುನಾವಣಾ ಆಯೋಗ (ಇಸಿಐ) ಬಿಹಾರ ವಿಧಾನಸಭೆ 2020 ರ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಹೊಸದಾಗಿ 243 ಸದಸ್ಯರ ಸಭೆಯನ್ನು ಆಯ್ಕೆ ಮಾಡುವ ಮತದಾನ ಅಕ್ಟೋಬರ್ 28ರಿಂದ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.

ಕರೋನವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ ಚುನಾವಣೆಗಳನ್ನು ಮುಂದೂಡಬೇಕೆಂಬ ರಾಜಕೀಯ ಪಕ್ಷಗಳ ಬೇಡಿಕೆಗೆ ಪ್ರತಿಕ್ರಿಯೆಯಾಗಿ, ಇಸಿ ಈ ಪ್ರಕ್ರಿಯೆಯ ಉದ್ದಕ್ಕೂ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಅಕ್ಟೋಬರ್ 28 ರಂದು ಮತದಾನ ಆರಂಭವಾಗಲಿದ್ದು ಮೂರು ಹಂತದ ಮತದಾನ ನಡೆಯಲಿದೆ. ನವೆಂಬರ್ 3, ನವೆಂಬರ್ 7 ರಂದು ಬಿಹಾರ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದ್ದು ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.

ಸಾಮಾಜಿಕ ಅಂತರವನ್ನ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಮತ್ತು ಪ್ರತಿಯೊಬ್ಬರೂ ಮತದಾನ ಕೇಂದ್ರಗಳಲ್ಲಿ ಮುಖವಾಡಗಳನ್ನು ಧರಿಸಬೇಕಾಗುತ್ತದೆ. ಹೆಚ್ಚಿನ ತಾಪಮಾನ ಇರುವವರು ಮತದಾನ ಪ್ರಕ್ರಿಯೆಯ ಕೊನೆಯ ಒಂದು ಗಂಟೆಯಲ್ಲಿ ಮತ ಚಲಾಯಿಸಬೇಕಾಗುತ್ತದೆ ಮತ್ತು ಬೂತ್‌ನಲ್ಲಿ ಕಡಿಮೆ ಮತದಾರರು ಇರುತ್ತಾರೆ ಎಂದು ಇಸಿಯ ಮಾರ್ಗಸೂಚಿಗಳು ತಿಳಿಸಿವೆ.

State

ಚೆನ್ನೈ : ಕರೋನ ಸೊಂಕಿನಿಂದ ಬಳಲುತ್ತಿದ್ದ ಬಹು ಭಾಷಾ ನಟ, ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಚನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರ ಶ್ವಾಸಕೋಶವು ತೀವ್ರ ಪ್ರಮಾಣದಲ್ಲಿ ಏರುಪೇರು ಉಂಟಾದ ಪರಿಣಾಮ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಕೊರೋನಾ ವೈರಸ್ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

State

ನವದೆಹಲಿ : ಬಿಹಾರ ವಿಧಾನಸಭೆಯ 243 ಕ್ಷೇತ್ರಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

ಇಂದು ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಗಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನಿಲ್ ಅರೋರಾ,  ಅಕ್ಟೋಬರ್ 28 ರಂದು ಬಿಹಾರ್ ವಿಧಾನಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಕೊರೊನಾ ಮಾರ್ಗಸೂಚಿ ಪಾಲಿಸುವುದಕ್ಕಾಗಿ ನೋಡಲ್ ಹೆಲ್ತ್ ಆಫೀಸರ್ ಗಳನ್ನು ನೇಮಕ ಮಾಡಲಾಗುತ್ತಿದೆ. ಪ್ರತಿ ಮತಗಟ್ಟೆಯಲ್ಲಿ 1,500 ಮತದಾರರ ಬದಲು 1,000 ಮತದಾರರನ್ನಷ್ಟೇ ಮತಚಲಾಯಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

243 ಕ್ಷೇತ್ರಗಳ ಪೈಕಿ 38 ಸ್ಥಾನಗಳು ಎಸ್ ಸಿಗಳಿಗೆ ಎರಡು ಸ್ಥಾನ ಎಸ್ ಟಿ ಮೀಸಲಾಗಿದೆ. ಮತದಾನ ಬೆಳಗ್ಗ 7 ರಿಂದ ಸಂಜೆ 6 ಗಂಟೆಯವರೆಗೆ  ನಡೆಯಲಿದ್ದು, ಕೊರನಾ ಸೋಂಕಿರೂ ಮತದಾನ ಚಲಾಯಿಸಬಹುದು. ಮನೆ ಮನೆ ಪ್ರಚಾರಕ್ಕೆ ಐವರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮೂರು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 71, 2 ನೇ ಹಂತದಲ್ಲಿ 94 ಮತ್ತು ಮೂರನೇ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.  ಅ.28 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ನವೆಂಬರ್ 3 ರಂದು ಎರಡನೇ ಹಂತದ ಮತದಾನ ಮತ್ತು ನವೆಂಬರ್ 7 ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

State

ನವದೆಹಲಿ : ಬಿಹಾರ ವಿಧಾನಸಭೆಯ 243 ಕ್ಷೇತ್ರಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

ಇಂದು ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಗಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನಿಲ್ ಅರೋರಾ,  ಅಕ್ಟೋಬರ್ 28 ರಂದು ಬಿಹಾರ್ ವಿಧಾನಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಕೊರೊನಾ ಮಾರ್ಗಸೂಚಿ ಪಾಲಿಸುವುದಕ್ಕಾಗಿ ನೋಡಲ್ ಹೆಲ್ತ್ ಆಫೀಸರ್ ಗಳನ್ನು ನೇಮಕ ಮಾಡಲಾಗುತ್ತಿದೆ. ಪ್ರತಿ ಮತಗಟ್ಟೆಯಲ್ಲಿ 1,500 ಮತದಾರರ ಬದಲು 1,000 ಮತದಾರರನ್ನಷ್ಟೇ ಮತಚಲಾಯಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

243 ಕ್ಷೇತ್ರಗಳ ಪೈಕಿ 38 ಸ್ಥಾನಗಳು ಎಸ್ ಸಿಗಳಿಗೆ ಎರಡು ಸ್ಥಾನ ಎಸ್ ಟಿ ಮೀಸಲಾಗಿದೆ. ಮತದಾನ ಬೆಳಗ್ಗ 7 ರಿಂದ ಸಂಜೆ 6 ಗಂಟೆಯವರೆಗೆ  ನಡೆಯಲಿದ್ದು, ಕೊರನಾ ಸೋಂಕಿರೂ ಮತದಾನ ಚಲಾಯಿಸಬಹುದು. ಮನೆ ಮನೆ ಪ್ರಚಾರಕ್ಕೆ ಐವರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮೂರು ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 71, 2 ನೇ ಹಂತದಲ್ಲಿ 94 ಮತ್ತು ಮೂರನೇ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

India

ಲಖನೌ: ವಿಶ್ವಾದ್ಯಂತ ಕೊರೊನಾ ವೈರಸ್ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳು ಶ್ರಮಿಸುತ್ತಿದ್ದಾರೆ. ಇದೀಗ ‘ಕೋವಾಕ್ಸಿನ್’ 3ನೇ ಹಂತದ ಪ್ರಯೋಗ ಅಕ್ಟೋಬರ್ ನಿಂದ ಲಖನೌ ಮತ್ತು ಗೋರಖ್​ಪುರದಲ್ಲಿ ಪ್ರಾರಂಭವಾಗಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ಪ್ರಕಟಿಸಿದೆ.

ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸುತ್ತಿರುವ ಕೋವಾಕ್ಸಿನ್ 3ನೇ ಹಂತದ ಪ್ರಯೋಗ ಅಕ್ಟೋಬರ್ ನಿಂದ ಲಖನೌ ಮತ್ತು ಗೋರಖ್​ಪುರದಲ್ಲಿ ಪ್ರಾರಂಭವಾಗಲಿದೆ ಎಂದು ಉತ್ತರ ಪ್ರದೇಶದ ಪ್ರಧಾನ ಆರೋಗ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ತಿಳಿಸಿದ್ದಾರೆ.

ಕೋವಾಕ್ಸಿನ್ ಅಭಿವೃದ್ಧಿಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಭಾರತ್ ಬಯೋಟೆಕ್ ಜೊತೆ ಸಹಕರಿಸುತ್ತಿದೆ.