kannada news – Kannada News Now


State

ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು ಎಂದಿದ್ದಾರೆ.

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು. ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದು ದುಖ ವ್ಯಕ್ತ ಪಡಿಸಿದ್ದಾರೆ.

ಇದು ಗಾನ ಗಂಧರ್ವ ‘ಎಸ್.ಪಿ.ಬಾಲಸುಬ್ರಹ್ಮಣ್ಯಂ’ ಜೀವನ ‘ಗಾಯನ ಯಾತ್ರೆ’

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

India

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ಈಸ್ಟ್ ಇಂಡಿಯಾ ಕಂಪನಿ ಆಡಳಿತವನ್ನು ನೆನಪಿಸುವಂತಿವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.

ಹೊಸದಾಗಿ ಅನುಮೋದನೆ ಪಡೆಯಲಾಗಿರುವ ಮೂರು ಮಸೂದೆಗಳ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ರೈತರು ಕನಿಷ್ಠ ಬೆಂಬಲ ಬೆಲೆಯಿಂದ ವಂಚಿತರಾಗಲಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.

‘ರೈತರು ತಮ್ಮದೇ ಕೃಷಿಭೂಮಿಗಳಲ್ಲಿ ಕಾರ್ಮಿಕರಾಗಲಿದ್ದಾರೆ. ಆದರೆ ಮಸೂದೆ ಮೂಲಕ ಗುಲಾಮರನ್ನಾಗಿಸಲು ಬಲವಂತಪಡಿಸಲಾಗುತ್ತದೆ. ಈ ರೀತಿ ಅನ್ಯಾಯ ಎಸಗಲು ನಾವು ಬಿಡುವುದಿಲ್ಲ’ ಎಂದು ಪ್ರಿಯಾಂಕಾ ಹೇಳಿದ್ದಾರೆ.

State

ಬೆಂಗಳೂರು : ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

‘ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೋನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ ಅವರ ಆರೋಗ್ಯದ ಬಗ್ಗೆ ಚಿಂತೆ ಇತ್ತು. ಲಕ್ಷಾಂತರ ಅಭಿಮಾನಿಗಳು ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಆ ಯಮ ನಿಷ್ಕರುಣಿ. ಹೀಗಾಗಿ ನಮ್ಮ ಪ್ರಾರ್ಥನೆ ಫಲಿಸಲಿಲ್ಲ ಎಂದು ತಿಳಿಸಿದ್ದಾರೆ.

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಬಾಲಸುಬ್ರಹ್ಮಣ್ಯಂ ತಮ್ಮ ಕಂಠ ಸಿರಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಹಾಡುಗಳನ್ನು ಕೇಳಿ ನಾವು ಬೆಳೆದಿದ್ದೇವೆ. ಅವರ ಸಾಧನೆಗೆ ಪದ್ಮ ಶ್ರೀ ಹಾಗೂ ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ 6 ಬಾರಿ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿವೆ ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ .

ಇದು ಗಾನ ಗಂಧರ್ವ ‘ಎಸ್.ಪಿ.ಬಾಲಸುಬ್ರಹ್ಮಣ್ಯಂ’ ಜೀವನ ‘ಗಾಯನ ಯಾತ್ರೆ’

ತಮ್ಮ ಸರಳತೆ, ವಿನಯತೆಯಿಂದಲೂ ಅಭಿಮಾನಿಗಳ ಮನಗೆದ್ದಿದ್ದ ಎಸ್ ಪಿಬಿ ಅವರ ನಿಧನದಿಂದ ಸಿನಿಮಾ ಸಂಗೀತ ಕ್ಷೇತ್ರದಲ್ಲಿ ಒಂದು ಅದ್ಭುತ ಯುಗವೇ ಅಂತ್ಯವಾದಂತಾಗಿದೆ. ಅವರ ಮುಗಿಲೆತ್ತರದ ಸಾಧನೆ ಹಾಗೂ ಹಾಡುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತವಾಗಿ ಇರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

State

ಬೆಂಗಳೂರು : ನಾನು ಸುಳ್ಳು, ಮೋಸದಿಂದ ಜಾತಿ, ಜನ್ಮ ಪ್ರಮಾಣ ಪತ್ರ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವ ಎಂದು ಪಶು ಸಂಗೋಪನೆ, ವಕ್ ಮತ್ತು ಹಜ್ ಖಾತೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂಬ ಮಾಜಿ ಸಚಿವ ಹೆಚ್. ಆಂಜನೇಯ ಆರೋಪಕ್ಕೆ ತಿರುಗೇಟು ನೀಡಿದ ಚವ್ಹಾಣ್, ನಾನು ಸುಳ್ಳು, ಮೋಸದಿಂದ ಜಾತಿ, ಜನ್ಮ ಪ್ರಮಾಣ ಪತ್ರ ಪಡೆದಿರುವುದು ಸಾಬೀತಾದರೆ ಅದೇ ಕ್ಷಣ ರಾಜಕೀಯದಿಂದ ನಿವೃತ್ತಿ ಪಡೆಯುವೆ, ಒಂದು ವೇಳೆ ಸುಳ್ಳು ಎಂದಾದರೆ ಬಹಿರಂಗವಾಗಿ ಕ್ಷಮೆ ಕೋರಲಿ ಎಂದು ಸವಾಲು ಹಾಕಿದ್ದಾರೆ.

ನಾನು ಮೂಲತಃ ಕರ್ನಾಟಕದವನು. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೋಂತಿ ತಾಂಡಾ ನನ್ನ ಹುಟ್ಟೂರು, ನಾನು ಪರಿಶಿಷ್ಟ ಜಾತಿ ಲಂಬಾಣಿ ಜನಾಂಗಕ್ಕೆ ಸೇರಿದ್ದೇನೆ. ಆಂಜನೇಯ ಅವರು ಸುಳ್ಳು ಮಾಹಿತಿ ಪಡೆದು ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದರು.

State

ಚೆನ್ನೈ : ಆಗಸ್ಟ್ 5ರಿಂದ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಅವರು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಬಹುಭಾಷಾ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲವಾಗಿದ್ದಾರೆ. ಆದ್ರೇ ಅವರ ಸಾಧನೆ, ಹಾಡಿದ ಹಾಡುಗಳ ಮೂಲಕ ಇನ್ನೂ ಜೀವಂತವಾಗಿದ್ದಾರೆ. ಇಂತಹ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಜೀವನ ಗಾಯನ ಯಾತ್ರೆ ಬಗ್ಗೆ ಮುಂದೆ ಓದಿ..

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಜೀವನ ಜೈತ್ರ

ಎಸ್ ಪಿ ಬಾಲಸುಬ್ರಹ್ಮಣ್ಯಂ ಜೂನ್ 4, 1946ರಲ್ಲಿ ಜನಿಸಿದರು. ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದಾರೆ.

ಬಾಲಸುಬ್ರಹ್ಮಣ್ಯಂ ಅವರು ಹುಟ್ಟಿದ ದಿನ ಜೂನ್ 4, 1946. ಅವರು ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿನ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ ಜನಿಸಿದರು. ಬಾಲು ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ. ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ.ಸಾಂಬಮೂರ್ತಿಯವರೇ ಅವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ಮುಂದೆ ಮೇರು ಪ್ರಸಿದ್ಧಿ ಪಡೆದ ನಂತರದಲ್ಲಿ ವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು.

1966ರ ವರ್ಷದಲ್ಲಿ ಬಾಲು ಅವರು, ಘಂಟಸಾಲಾ ಮತ್ತು ಎಸ್.ಪಿ. ಕೋದಂಡಪಾಣಿ ತೀರ್ಪುಗಾರರಾಗಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದರು. ಇಬ್ಬರಿಂದಲೂ ಅವರಿಗೆ ಮೆಚ್ಚುಗೆಯ ಸುರಿಮಳೆಯಾಯಿತು. ಕೋದಂಡಪಾಣಿಯವರು ತಮ್ಮ ತೆಲುಗು ಚಿತ್ರ ‘ಶ್ರೀ ಶ್ರೀ ಶ್ರೀ ಮರ್ಯಾದಾ ರಾಮಣ್ಣ’ದಲ್ಲಿ ಹಾಡಲು ಬಾಲೂಗೆ ಅವಕಾಶ ನೀಡಿದರು. ಬಾಲು ಹೇಳುತ್ತಾರೆ ‘ನಾನು ಘಂಟಸಾಲ ಅವರ ಏಕಲವ್ಯ ಶಿಷ್ಯ’.

ಎಸ್ ಪಿ ಬಿ ಮಹತ್ಸಾಧನೆ

ಆಗೊಂದು ಯುಗ, ತೆಲುಗಿನಲ್ಲಿ ಘಂಟಸಾಲ, ತಮಿಳಿನಲ್ಲಿ ಟಿ ಎಂ ಸೌಂದರ್ ರಾಜನ್, ಕನ್ನಡದಲ್ಲಿ ಪಿ ಬಿ ಶ್ರೀನಿವಾಸ್ ಹೀಗೆ ಒಬ್ಬೊಬ್ಬರೂ ಒಂದೊಂದು ಭಾಷೆಯ ಚಿತ್ರರಂಗದಲ್ಲಿ ಸಾರ್ವಭೌಮರು. ಬಾಲು ಚಿತ್ರರಂಗಕ್ಕೆ ಬಂದು ಈ ಎಲ್ಲ ಭಾಷೆಗಳಿಗೂ ಸಾರ್ವಭೌಮರಾಗಿಬಿಟ್ಟರು. ಒಮ್ಮೆ ಅವರು ತಮಿಳು ತೆಲುಗಿನಲ್ಲಿ ಒಂದೇ ದಿನದಲ್ಲಿ 19 ಗೀತೆಗಳನ್ನು ಧ್ವನಿಮುದ್ರಿಸಿದ್ದರು.

ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಧ್ವನಿಮುದ್ರಿಸಿದ್ದರು, ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿದ್ದರು. ಇದು ಎಸ್ ಪಿ ಬಿ ಅವರ ಸಾಮರ್ಥ್ಯ, ಅವರಿಗಿದ್ದ ಬೇಡಿಕೆ, ಅವರಿಗಿರುವ ವೈಶಾಲ್ಯತೆಗಳಿಗಿರುವ ನಿದರ್ಶನ. ಸಂಗೀತ ಪ್ರಧಾನವಾದ ಭಾರತೀಯ ಚಿತ್ರರಂಗದಲ್ಲಿ ಒಂದು ರೀತಿಯಲ್ಲಿ ಹಿನ್ನೆಲೆ ಗಾಯಕರು ಅಭಿನಯಿಸುವವರ ಆತ್ಮವಿದ್ದಂತೆ.

ಇದನ್ನೇ ಡಾ. ರಾಜ್ ಕುಮಾರ್ ಅವರು ಒಮ್ಮೆ ಪಿ ಬಿ ಎಸ್ ಬಗ್ಗೆ ಹೇಳುತ್ತಾ ‘ಪಿ ಬಿ ಎಸ್ ನನ್ನ ಆತ್ಮ, ನಾನು ಶರೀರ’ ಎನ್ನುತ್ತಿದ್ದರು. ರಾಜ್ ಕಪೂರ್ ಮುಖೇಶ್ ಬಗ್ಗೆ ಇದನ್ನೇ ಹೇಳುತ್ತಿದ್ದರು. ಹಾವಿನ ದ್ವೇಷ ಹನ್ನೆರಡು ವರುಷ ಎಂದು ಎಸ್. ಪಿ. ಹಾಡಿದಾಗ ವಿಷ್ಣುವರ್ಧನ್ ರಾಮಾಚಾರಿಯಾಗಿಬಿಟ್ಟರು. ಸ್ನೇಹದ ಕಡಲಲ್ಲಿ ಎಂದು ಹಾಡಿದಾಗ ಶ್ರೀನಾಥ್ ಗರಿಗೆದರಿಬಿಟ್ಟರು. ಎಲ್ಲಿರುವೇ ಮನವ ಕಾಡುವ ರೂಪಸಿಯೇ ಎಂದು ಅನಂತ್ ನಾಗ್ ಆಕಾಶಕ್ಕೆ ಹಾರಿದರು.

ನಲಿವಾ ಗುಲಾಬಿ ಹೂವೆ ಎಂದು ಶಂಕರ್ ಭಾವಸ್ಥರಾದರು. ದಕ್ಷಿಣ ಭಾರತದ ರಜನೀಕಾಂತ್, ಕಮಲಹಾಸನ್, ಚಿರಂಜೀವಿ ಹೀಗೆ ಎಪ್ಪತ್ತು ಎಂಭತ್ತರ ದಶಕದಿಂದ ಎರಡು ಸಾವಿರದ ದಶಕದವರೆಗಿನ ಬಹುತೇಕ ಹೀರೋಗಳ ಅಂತರ್ಧ್ವನಿ ಶಕ್ತಿ ಬಾಲು ಅವರದ್ದು. ಅವರ ಧ್ವನಿಯ ಮೋಡಿ ಎಂ.ಜಿ. ಆರ್, ಶಿವಾಜಿ ಗಣೇಶನ್, ಎನ್ ಟಿ ರಾಮರಾವ್, ರಾಜ್ ಕುಮಾರ್, ಅಕ್ಕಿನೇನಿ ಅಂತಹ ಹಿರಿಯರಿಗೆ ಕೂಡಾ ಆಗಾಗ ಇಣುಕಿತ್ತು.

ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಡಿದ್ದು 40 ಸಾವಿರಕ್ಕೂ ಹೆಚ್ಚು ಹಾಡುಗಳು

ಹಿಂದಿಯಲ್ಲಿ ಏಕ್ ದೂಜೇ ಕೆ ಲಿಯೇ ಬಂದಾಗ ಬಾಲು ಹಿಂದಿ ಚಿತ್ರರಂಗವನ್ನೂ ತಮ್ಮ ಮೋಡಿಗೆ ಸೆಳೆದುಕೊಂಡರು. ಸಾಜನ್, ಮೈ ನೇ ಪ್ಯಾರ್ ಕಿಯಾ ಮುಂತಾದ ಚಿತ್ರಗಳು ಬಂದಾಗ ರಫಿ, ಕಿಶೋರ್ ಅವರನ್ನು ಕಳೆದುಕೊಂಡು ಕಂಗಾಲಾಗಿದ್ದ ಹಿಂದಿ ಚಿತ್ರರಂಗಕ್ಕೆ ಬಾಲು ಬೆನ್ನೆಲುಬಾಗಿದ್ದರು.

ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ. ಎಸ್ ಪಿ ಬಿ ಅವರು ಹಾಡಿರುವ ಹಾಡುಗಳ ಸಂಖ್ಯೆ 40,000ಕ್ಕೂ ಹೆಚ್ಚು.

ವಿವಿಧ ಭಾಷೆಗಳ ಪರಿಧಿಯಲ್ಲಿ ಇಷ್ಟೊಂದು ಗೀತೆಗಳನ್ನು ಹಾಡಿರುವವರು ಇವರೊಬ್ಬರೇ. ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಕಂಠದಾನ ಕಲಾವಿದರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ. ಅವರ ಒಟ್ಟಾರೆ ಪ್ರಮುಖ ಸಾಧನೆಗಳನ್ನು ಹೇಳುವುದಾದರೆ ಅದು ಅಪರಿಮಿತವಾದುದು.

ಪ್ರಶಸ್ತಿ ಗೌರವ ಮತ್ತು ಪುರಸ್ಕಾರಗಳು

  1. ವಿವಿಧ ಭಾಷೆಗಳ ಪರಿಧಿಯಲ್ಲಿ 40,000ಕ್ಕೂ ಹೆಚ್ಚು ಹಾಡುಗಳು
  2. ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು
  3. ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು
  4. 25 ಬಾರಿ ಆಂಧ್ರಪ್ರದೇಶ ಸರ್ಕಾರದ ‘ನಂದಿ’ ಪ್ರಶಸ್ತಿ.
  5. 4 ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ.
  6. ಹಲವು ವಿಶ್ವ ವಿದ್ಯಾಲಯಗಳ ಡಾಕ್ಟರೇಟ್

ದೂರದರ್ಶನದಲ್ಲಿ ಒಂದು ದಶಕದಿಂದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವಂತೆ, ಇತರ ಭಾಷೆಗಳಲ್ಲೂ ಅಂತದೇ ಕಾರ್ಯಕ್ರಮಗಳನ್ನು ಬಾಲು ನಡೆಸುತ್ತಿದ್ದಾರೆ. ಅವರು ಪುಟ್ಟ ಮಕ್ಕಳಿಂದ ಹಿಡಿದು ಸಂಗೀತದ ದಿಗ್ಗಜಗಳವರೆಗೆ ಹಿರಿಯರು ಕಿರಿಯರು ಎಲ್ಲರನ್ನೂ ಗೌರವಪೂರ್ಣವಾಗಿ ನಡೆಸಿಕೊಳ್ಳುವುದನ್ನು ಕಾಣುವುದೇ ಒಂದು ಚೆಂದ ಎಂಬುದು ಅವರ ಅಭಿಮಾನಿ ವೀಕ್ಷಕರುಗಳಗಳ ನುಡಿ. ಈ ಎಲ್ಲ ನಿಟ್ಟಿನಲ್ಲಿ ಬಾಲು ಒಬ್ಬ ನೈಜ ಸಾಂಸ್ಕೃತಿಕ ರಾಯಭಾರಿ.

ಹೀಗೆ ಅಮೋಘ ಸಾಧನೆ ಗೈತ ಮೇರು ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ, ಇನ್ನಿಲ್ಲವಾಗಿದ್ದಾರೆ. ಈ ಮೂಲಕ ಬಹುಭಾಷಾ ಗಾಯಕ ನಮ್ಮನ್ನು ಅಗಲಿದ್ದು, ತುಂಬಲಾರದ ನಷ್ಟವೇ ಸರಿ.

-ವಸಂತ ಬಿ ಈಶ್ವರಗೆರೆ

India World

ನ್ಯೂಯಾರ್ಕ್: ಪ್ರಪಂಚದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದ ಕೊವಿಡ್-19 ಸೋಂಕಿತರ ಸಂಖ್ಯೆ ಗುರುವಾರ 3 ಕೋಟಿ 24 ಲಕ್ಷ ದಾಟಿದ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ) ತಿಳಿಸಿದೆ.

ಜಾಗತಿಕ ಪ್ರಕರಣಗಳ ಸಂಖ್ಯೆ ಸದ್ಯ 3,24,16,405 ಕ್ಕೆ ತಲುಪಿದ್ದು, ವಿಶ್ವದಾದ್ಯಂತ ಮಾರಕ ಸೋಂಕಿನಿಂದ ಸಾವಿನ ಸಂಖ್ಯೆ 9,87,813ಕ್ಕೆ ಏರಿಕೆಯಾಗಿದೆ. ಅಂತೆಯೇ ಒಟ್ಟಾರೆ ಸೋಂಕಿತರ ಪೈಕಿ 2,39,34,098 ಮಂದಿ ಸೋಂಕಿತರು ಈ ವರೆಗೂ ಗುಣಮುಖರಾಗಿದ್ದಾರೆ ಎಂದು ಸಿಎಸ್ಎಸ್ಇ ಮಾಹಿತಿ ತಿಳಿಸಿದೆ.

ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 71,85,471ಕ್ಕೆ ಏರಿಕೆಯಾಗಿದ್ದು, ಮತ್ತು 2,07,538 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 2ನೇ ಸ್ಥಾನದಲ್ಲಿರುವ ಭಾರತದಲ್ಲಿ ಸೋಂಕಿತರ ಸಂಖ್ಯೆ 58,18,571 ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‍ ನಲ್ಲಿ 46,59,909 ಪ್ರಕರಣಗಳು ದಾಖಲಾಗಿವೆ.

India

ನವದೆಹಲಿ : ಯೂನಿಯನ್ ಪಬ್ಲಿಕ್ ಸರ್ವೀಸಸ್ ಕಮಿಷನ್ (UPSC) 2020 ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗವು ಬಿಡುಗಡೆ ಮಾಡಿದೆ.

ಯುಪಿಎಸ್ ಸಿ ಇಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ ಅಕ್ಟೋಬರ್ 18 ರಂದು ಎರಡು ಶಿಫ್ಟ್ ಗಳಲ್ಲಿ ನಡೆಸಲಾಗುತ್ತದೆ. ಮೊದಲ ಶಿಫ್ಟ್ ಪರೀಕ್ಷೆಯನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ನಡೆಸಲಾಗುತ್ತದೆ. ಎರಡನೇ ಶಿಫ್ಟ್ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುತ್ತದೆ ಎಂದು ಆಯೋಗ ತಿಳಿಸಿದೆ.

ಯುಪಿಎಸ್ ಸಿ ಸಿಎಸ್ ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅ.18 ರವರೆಗೆ ಅವಕಾಶ ನೀಡಲಾಗಿದೆ.

State

ಚೆನ್ನೈ : ಕರೋನ ಸೊಂಕಿನಿಂದ ಬಳಲುತ್ತಿದ್ದ ಬಹು ಭಾಷಾ ನಟ, ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಚನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರ ಶ್ವಾಸಕೋಶವು ತೀವ್ರ ಪ್ರಮಾಣದಲ್ಲಿ ಏರುಪೇರು ಉಂಟಾದ ಪರಿಣಾಮ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಕೊರೋನಾ ವೈರಸ್ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

India

ನವದೆಹಲಿ : ಭಾರತ ಚುನಾವಣಾ ಆಯೋಗ (ಇಸಿಐ) ಬಿಹಾರ ವಿಧಾನಸಭೆ 2020 ರ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಹೊಸದಾಗಿ 243 ಸದಸ್ಯರ ಸಭೆಯನ್ನು ಆಯ್ಕೆ ಮಾಡುವ ಮತದಾನ ಅಕ್ಟೋಬರ್ 28ರಿಂದ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.

ಕರೋನವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ ಚುನಾವಣೆಗಳನ್ನು ಮುಂದೂಡಬೇಕೆಂಬ ರಾಜಕೀಯ ಪಕ್ಷಗಳ ಬೇಡಿಕೆಗೆ ಪ್ರತಿಕ್ರಿಯೆಯಾಗಿ, ಇಸಿ ಈ ಪ್ರಕ್ರಿಯೆಯ ಉದ್ದಕ್ಕೂ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಅಕ್ಟೋಬರ್ 28 ರಂದು ಮತದಾನ ಆರಂಭವಾಗಲಿದ್ದು ಮೂರು ಹಂತದ ಮತದಾನ ನಡೆಯಲಿದೆ. ನವೆಂಬರ್ 3, ನವೆಂಬರ್ 7 ರಂದು ಬಿಹಾರ ವಿಧಾನಸಭಾ ಚುನಾವಣೆ ಮತದಾನ ನಡೆಯಲಿದ್ದು ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ.

ಸಾಮಾಜಿಕ ಅಂತರವನ್ನ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಮತ್ತು ಪ್ರತಿಯೊಬ್ಬರೂ ಮತದಾನ ಕೇಂದ್ರಗಳಲ್ಲಿ ಮುಖವಾಡಗಳನ್ನು ಧರಿಸಬೇಕಾಗುತ್ತದೆ. ಹೆಚ್ಚಿನ ತಾಪಮಾನ ಇರುವವರು ಮತದಾನ ಪ್ರಕ್ರಿಯೆಯ ಕೊನೆಯ ಒಂದು ಗಂಟೆಯಲ್ಲಿ ಮತ ಚಲಾಯಿಸಬೇಕಾಗುತ್ತದೆ ಮತ್ತು ಬೂತ್‌ನಲ್ಲಿ ಕಡಿಮೆ ಮತದಾರರು ಇರುತ್ತಾರೆ ಎಂದು ಇಸಿಯ ಮಾರ್ಗಸೂಚಿಗಳು ತಿಳಿಸಿವೆ.

State

ಚೆನ್ನೈ : ಕರೋನ ಸೊಂಕಿನಿಂದ ಬಳಲುತ್ತಿದ್ದ ಬಹು ಭಾಷಾ ನಟ, ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಚನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರ ಶ್ವಾಸಕೋಶವು ತೀವ್ರ ಪ್ರಮಾಣದಲ್ಲಿ ಏರುಪೇರು ಉಂಟಾದ ಪರಿಣಾಮ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಕೊರೋನಾ ವೈರಸ್ ಕಾರಣ ಆಗಸ್ಟ್ 5 ರಂದು ಎಸ್ಪಿಬಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದೆಗೆಟ್ಟಿದ್ದರಿಂದ ಆಗಸ್ಟ್ 13 ರ ಬಳಿಕ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.