kannada newslive – Kannada News Now


India

ನವದೆಹಲಿ : ಲಡಾಕ್ ಸಮೀಪದ ಗಾಲ್ವಾನ್ ಕಣಿವೆಯಲ್ಲಿ ಕಳೆದ ರಾತ್ರಿ ಪರಿಸ್ಥಿತಿ ಉಲ್ಭಣಿಸಿದ್ದು, ಭಾರತ-ಚೀನಾ ರಾಷ್ಟ್ರಗಳ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಚೀನಾ ಸೈನಿಕರ ಗುಂಡಿಗೆ ಓರ್ವ ಮಿಲಿಟರಿ ಅಧಿಕಾರಿ ಹಾಗೂ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರು ಬಲಿಯಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಚೀನಾ-ಭಾರತ ಗಡಿಯಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗಿತ್ತು. ಕಳೆದ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ಸಂಘರ್ಷ ಏರ್ಪಟ್ಟಿದೆ. ಈ ವೇಳೆ, ಚೀನಾ ಪಡೆಯ ಗುಂಡಿಗೆ ಭಾರತೀಯ ಸೇನಾಪಡೆಯ ಮೂವರು ಸಿಬ್ಬಂದಿ ಬಲಿಯಾಗಿದ್ದಾರೆ. ಇನ್ನು ಗಡಿಯಲ್ಲಿ ಪರಿಸ್ಥಿತಿ ಶಾಂತಗೊಳಿಸುವ ಹಿನ್ನೆಲೆಯಲ್ಲಿ ಭಾರತ-ಚೀನಾ ಸೇನಾಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಸಧ್ಯದಲ್ಲೇ ಭಾರತೀಯ ಸೇನೆ ಸುದ್ದಿಗೋಷ್ಟಿ ನಡೆಸಲಿದೆ…

Bangalore State

ಬೆಂಗಳೂರು : ರಾಜ್ಯದ್ಯಂತ ಮಾರಕ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಏತನ್ಮಧ್ಯೆ  ಮಾರಕ ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗಳಿಗೂ ಮಾರಣಾಂತಿಕ ಸೋಂಕಿನ ಭೀತಿ ಎದುರಾಗಿದೆ. ಹೌದು ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್ ಗಳಿಗೆ ಮಾರಕ ಸೋಂಕು ತಗುಲಿರುವುದು ದೃಢಪಟ್ಟಿದೆ.

ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮೂವರು ಸ್ಟಾಫ್ ನರ್ಸ್ ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನ ಲಕ್ಷಣ ಹಿನ್ನೆಲೆಯಲ್ಲಿ ಈ ಮೂರು ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿತ್ತು. ವರದಿಯಲ್ಲಿ ಮೂವರು ಸ್ಟಾಫ್ ನರ್ಸ್ ಗಳಿಗೆ ಸೋಂಕು  ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಆತಂಕ ಮನೆಮಾಡಿದೆ. ಸೋಂಕು ದೃಢಪಡುತ್ತಿದ್ದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನು ನಿನ್ನೆಯಷ್ಟೇ ಬೆಂಗಳೂರಿನ ಇಎಸ್ಐ ಆಸ್ಪತ್ರೆಯ ಹೌಸ್ ಕೀಪಿಂಗ್ ನ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಈಗ ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್ ಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ….

State

ಬಾಗಲಕೋಟೆ : ರಾಜಸ್ತಾನದ ಅಜ್ಮೀರ್ ನಿಂದ ವಾಪಾಸ್ ಆದವರ ಬೆನ್ನಲ್ಲೇ ಬಾಗಲಕೋಟೆಗೆ ಈಗ ಅಹಮದಾಬಾದ್ ನಿಂದ ಬಂದ ತಬ್ಲಿಘಿಗಳಿಂದ ಆತಂಕ ಎದುರಾಗಿದೆ. ಲಾಕ್​​ಡೌನ್​​ ಸಡಿಲಗೊಳಿಸಿದ ಬಳಿಕ ಗುಜರಾತ್​​ ನ  ಅಹಮದಾಬಾದ್​ನಿಂದ ಬಂದ ಬಾಗಲಕೋಟೆ ಮೂಲದ ತಬ್ಲಿಘಿಗಳಿಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ಹೀಗಾಗಿ  ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಎಲ್ಲರಲ್ಲೂ ನೆಗಿಟಿವ್​ ವರದಿ ಬಂದಿದೆಯಾದರೂ ಕ್ವಾರಂಟೈನ್​​ ಮಾಡಲಾಗಿದೆ.

ಗುಗರಾತ್ ನಿಂದ ಬಂದಿರುವ 29 ಮಂದಿಯ ಪೈಕಿ ಮುಧೋಳದ 17 ಮತ್ತು ಬನಹಟ್ಟಿ ಮೂಲದ 12 ಮಂದಿಯಿದ್ದಾರೆ. ಎಲ್ಲರನ್ನು ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ವರದಿ ನೆಗೆಟಿವ್ ಬಂದಿದ್ದರೂ ಹಲವರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿದೆ. ಹೀಗಾಗಿ ಎಲ್ಲರ ಥ್ರೋಟ್ ಸ್ರ್ಕ್ಯಾಬ್ ನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಇನ್ನು ಕೆಲ ದಿನಗಳ ಹಿಂದೆ  ಬಾಗಲಕೋಟೆಯಿಂದ ರಾಜಸ್ತಾನದ ಅಜ್ಮೀರ್​​ ಪ್ರವಾಸ ಬೆಳೆಸಿದ್ದ ಅಷ್ಟು ಮಂದಿಗೂ ಕೊರೋನಾ ಬಂದಿದೆ. ಹೀಗಾಗಿ ರಾಜಸ್ತಾನ ಕಂಟಕವೂ ಬಾಗಲಕೋಟೆಯಲ್ಲಿ ಮತ್ತಷ್ಟು ಆವರಿಸುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ. ಅಲ್ಲದೆ, ಅಂತರ ರಾಜ್ಯ ಓಡಾಟವೇ ಹೆಚ್ಚಿನ ಪ್ರಕರಣಗಳಲ್ಲಿ ಸೋಂಕಿನ ಮೂಲ ಎಂದೂ ಹೇಳಲಾಗುತ್ತಿದೆ. ಹೀಗಿರುವಾಗಲೇ ಅಜ್ಮೀರ್​​ಗೆ ಹೋಗಿ ಸೋಂಕು ತಗುಲಿಸಿಕೊಂಡು ಬಂದ 8 ಮಂದಿಯನ್ನು ಇಲ್ಲಿನ ಸೋಂಕಿತರ ಪಟ್ಟಿಗೆ ಸೇರಿಸಬೇಡಿ ಎಂದು ಬಾಗಲಕೋಟೆ ಜಿಲ್ಲಾಡಳಿತ ವಿರೋಧ ವ್ಯಕ್ತಪಡಿಸಿದೆ….

India

ಮುಂಬೈ : ಮಹಾರಾಷ್ಟ್ರದ ಮೇಲ್ಮನೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಚುನಾವಣೆಗೆ ನಿಗದಿಯಾಗುತ್ತಿದ್ದಂತೆ ಮಹಾ ವಿಕಾಸ್ ಅಘಾಡಿಯ ಮಿತ್ರ ಪಕ್ಷ ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾ ಅಖಾಡಕ್ಕೆ ಇಳಿಸಲು ನಿರ್ಧರಿಸಿತ್ತು. ಹೀಗಾಗಿ ಶಿವಸೇನೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪರಿಣಾಮ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಿದೆ. 

ಸದ್ಯ  ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸೇರಿದಂತೆ ಮೇಲ್ಮನೆ ಚುನಾವಣೆಗೆ 9 ಅಭ್ಯರ್ಥಿಗಳು ಕಣದಲ್ಲಿದ್ದು, ಉದ್ಧವ್ ಠಾಕ್ರೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಸ್ಪರ್ಧೆಯೇ ಇಲ್ಲದೇ ಮಹಾರಾಷ್ಟ್ರ ವಿಕಾಸ್ ಅಘಾಡಿಯ ಭಾಗವಾಗಿರುವ ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷ 5 ಸ್ಥಾನಗಳನ್ನು ಗಳಿಸಲಿದೆ.  ಬಿಜೆಪಿ 4 ಸ್ಥಾನಗಳನ್ನು ಗಳಿಸಲಿದೆ. ಮೇಲ್ಮನೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಮೇ.09 ರಂದು ಏಕಾಏಕಿಯಾಗಿ 2 ನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಎರಡನೇ ಅಭ್ಯರ್ಥಿಯನ್ನು ಹಿಂಪಡೆದಿದೆ….

State

ಬೆಂಗಳೂರು : ನೆರೆಯ ರಾಜ್ಯ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ರಾಜ್ಯಕ್ಕೆ ಆಗಮಿಸುವವರು 14 ದಿನ ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಜಿಪಿ, ದೆಹಲಿ, ಗುರಜಾತ್, ರಾಜಸ್ಥಾನ, ಮಹಾರಾಷ್ಟ್ರ, ತಮಿಳುನಾಡಿನಿಂದ ಬರುವವರು ಕಡ್ಡಾಯವಾಗಿ 14 ದಿನಗಳ ಕಾಲ ಸರ್ಕಾರ ಗೊತ್ತುಪಡಿಸಿದ ಕ್ವಾರಂಟೈನ್ ಕೇಂದ್ರಗಳಲ್ಲಿ ಇರಬೇಕು. ಸರ್ಕಾರದ ಪೋರ್ಟಲ್ ಸೇವಾ ಸಿಂಧು ಆ್ಯಪ್ ಮೂಲಕ ಮಾತ್ರ ಪಾಸ್ ಗಳನ್ನು ವಿತರಿಸಲಾಗುತ್ತಿದ್ದು, ಬಹಳ ಅತ್ಯಾವಶ್ಯಕವೆನಿಸಿದರೆ ಮಾತ್ರ ಪ್ರಯಾಣಿಸಬೇಕು. ಈ ಪ್ರಯಾಣಿಕರು ಸೋಂಕಿನ ಲಕ್ಷಣಗಳಿಲ್ಲದಿದ್ದರೂ ಕ್ವಾರಂಟೈನ್ ನಲ್ಲಿರಲು ಸಿದ್ದರಾಗಿ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಸೇವಾಸಿಂಧು ಇ-ಪಾಸ್‌ ಹೊಂದಿದವರಿಗೆ ಅಂತಾರಾಜ್ಯ ಸಾರಿಗೆ ಸೌಲಭ್ಯ ಕಲ್ಪಿಸಲು ಇಂದಿನಿಂದ ಜಾರಿಗೆ ಬರುವಂತೆ ಸಹಾಯವಾಣಿ ಆರಂಭಿಸಿದೆ. ರಾಜ್ಯದಿಂದ ಹೊರರಾಜ್ಯಗಳಿಗೆ ತೆರಳುವವರು ಯಾವ ರಾಜ್ಯಕ್ಕೆ ತೆರಳುತ್ತಾರೋ, ಅಲ್ಲಿಂದಲೂ ಪಾಸ್‌ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಸೇವಾಸಿಂಧು ಮೂಲಕ ಪಾಸ್‌ ಪಡೆದುಕೊಳ್ಳುವವರ ಪಟ್ಟಿಯನ್ನು ಸಂಬಂಧಪಟ್ಟ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುತ್ತದೆ. ಅವರು ಪರಿಶೀಲನೆ ನಡೆಸಿ, ಅನುಮತಿ ನೀಡಿದ ಬಳಿಕ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ನಿರ್ಧರಿಸಲಾಗಿದೆ.

ಇನ್ನು ಸಹಾಯವಾಣಿ ಸಂಖ್ಯೆಗಳ ವಿವರ: 

ತಮಿಳುನಾಡು/ಪಾಂಡಿಚೇರಿ: 7760990100, 7760990560, 7760990034, 7760990035, 7760991295

ಆಂಧ್ರಪ್ರದೇಶ/ತೆಲಂಗಾಣ: 7760990561, 7760990532, 7760990955, 7760990530, 7760990967

ಕೇರಳ: 
7760990287, 7760990988, 7760990531, 6366423895, 6366423896

State

ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವಿಭಾಗದಲ್ಲಿ  ಶೀಘ್ರದಲ್ಲೇ ಹೃದ್ರೋಗ ಮತ್ತು ನರರೋಗ ವಿಭಾಗ ಆರಂಭವಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಈ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೆಗ್ಗಾನ್ ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ವಿಭಾಗ ಪ್ರಾರಂಭವಾಗಿ 10ವರ್ಷಗಳಾದರೂ ಹೃದ್ರೋಗ ಮತ್ತು ನರರೋಗ ವಿಭಾಗ ಇದುವರೆಗೆ ಪ್ರಾರಂಭವಾಗಿಲ್ಲ. ಇದೀಗ ಮೆಗ್ಗಾನ್ ಆಸ್ಪತ್ರೆಯ 3ಜನ ಹೃದ್ರೋಗ ತಜ್ಞರು ಮತ್ತು ಒಬ್ಬ ನರರೋಗ ತಜ್ಞರ ಸೇವೆಯನ್ನು ಪಡೆದುಕೊಂಡು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೃದ್ರೋಗ ಮತ್ತು ನರರೋಗ ವಿಭಾಗದ ಒಪಿಡಿ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಈ ವಿಭಾಗಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದಾಗಿ ತಿಳಿಸಿದ್ದಾರೆ. ಹುಟ್ಟಿನಿಂದಲೇ ಕಿವುಡುತನ ಇರುವ ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಅಳವಡಿಸಲು ಮತ್ತು ವಾಕ್‍ಶ್ರವಣ ಕೇಂದ್ರದಲ್ಲಿ ಬಿಎಸ್ಸಿ ತರಗತಿಗಳನ್ನು ಆರಂಭಿಸಲು 4.84ಕೋಟಿ ರೂ. ಬಿಡುಗಡೆಯಾಗಿದ್ದು, ಒಂದು ವಾರದೊಳಗೆ ಇದರ ಪ್ರಕ್ರಿಯೆ ಪ್ರಾರಂಭಿಸಲು ಸೂಚಿಸಲಾಗಿದೆ ಎಂದರು.

ಇನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಒಂದು ಕಾರ್ಡ್ ಎಂದು ನಿರ್ಬಂಧವಿಲ್ಲ. ಒಂದು ಕುಟುಂಬದ ಅರ್ಹ ಸದಸ್ಯರೆಲ್ಲರೂ ಜಾಬ್ ಕಾರ್ಡ್‍ಗೆ ಅರ್ಜಿ ಸಲ್ಲಿಸಿದರೆ ಕಾರ್ಡ್ ನೀಡಲಾಗುವುದು ಎಂದರು. ಇದೀಗ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಜನರು ಉದ್ಯೋಗಕ್ಕಾಗಿ ಮುಂದೆ ಬರುತ್ತಿದ್ದು, 15ದಿನಗಳ ಒಳಗಾಗಿ ಕೂಲಿ ಮೊತ್ತವನ್ನು ಪಾವತಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು…

India

ನವದೆಹಲಿ :  ಮಾರಕ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿಸಲಾಗಿರುವ ಲಾಕ್ ಡೌನ್ ಆನ್-ಆಫ್ ಸ್ವಿಚ್ ಅಲ್ಲ. ಈಗಾಗಲೇ ಲಕ್ಷಾಂತರ ಮಂದಿ ತೊಂದರೆಗೆ ಸಿಲುಕಿದ್ದು, ಮೇ.17ರ ಬಳಿಕ ಮುಂದೇನು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಇಂದು ಡಿಜಿಟಲ್ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಲಾಕ್​ಡೌನ್ ಜಾರಿಯಲ್ಲಿರುವುದರಿಂದ ಉದ್ಯೋಗವಿಲ್ಲದೆ, ಹಣವಿಲ್ಲದೆ, ಊಟವಿಲ್ಲದೆ ಲಕ್ಷಾಂತರ ಮಂದಿ ತೊಂದರೆಗೀಡಾಗಿದ್ದಾರೆ. ಇಂತಹವರ ನೆರವಿಗೆ ಕೇಂದ್ರ ಸರ್ಕಾರ ಕೂಡಲೇ ಮುಂದಾಗಬೇಕಿದೆ. ಅದಕ್ಕಾಗಿ 65 ಸಾವಿರ ಕೋಟಿ ರೂ. ಅಗತ್ಯವಿದೆ. ಬಡವರು, ವಲಸಿಗರು, ಕೂಲಿ ಕಾರ್ಮಿಕರಿಗೆ ತುರ್ತಾಗಿ ನೆರವು ನೀಡಲು ಕೂಡಲೇ ಕೇಂದ್ರ ಸರ್ಕಾರ ಈ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.  ಸದ್ಯದ ಪರಿಸ್ಥಿತಿಯಲ್ಲಿ ಸಮಯವನ್ನು ವ್ಯರ್ಥ ಮಾಡುತ್ತಿದ್ದು, ಮುಂದೆ ಇದರ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ. ದೇಶಿಯ ವಸ್ತುಗಳ ಬಳಕೆ ಹೆಚ್ಚು ಮಾಡುವುದರಿಂದ ದೇಶದ ಆರ್ಥಿಕತೆ ಸದೃಢವಾಗಲಿದೆ. ಕೇಂದ್ರ ಸರ್ಕಾರ ಈ ವಿಷಯದ ಬಗ್ಗೆ ಗಮನ ಹರಿಸಬೇಕೆಂದು ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರ ರೆಡ್, ಆರೇಂಜ್, ಗ್ರೀನ್ ಝೋನ್ ಗಳನ್ನು ನಿರ್ಧರಿಸುವುದು ಬೇಡ. ಜಿಲ್ಲಾಧಿಕಾರಿಗಳು ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ‌ನಿರ್ಧರಿಸಲಿ. ಕೇಂದ್ರ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ಜಿಲ್ಲೆಗಳ ಮಟ್ಟದಲ್ಲೇ ನಿಭಾಯಿಸಬೇಕು. ಪ್ರಧಾನ ಮಂತ್ರಿಗಳ ಕಚೇರಿಯಿಂದ ಕೊರೊನಾ ‌ಪರಿಸ್ಥಿತಿ ನಿಭಾಯಿಸಲು ಸಾಧ್ಯವಿಲ್ಲ. ಪ್ರಧಾನಮಂತ್ರಿ ಮುಖ್ಯಮಂತ್ರಿಗಳ ಮೇಲೆ, ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಮೇಲೆ‌ ಭರವಸೆ ಇಡಬೇಕು.‌ ಇಲ್ಲದಿದ್ದರೆ ಕೊರೊನಾ ವಿರುದ್ಧ ಹೋರಾಟದಲ್ಲಿ ಸೋಲಲಿದ್ದೇವೆ ಎಂದರು. ಇನ್ನು ಕೇಂದ್ರ ಸರ್ಕಾರ ಲಾಕ್​ಡೌನ್ ತೆರವುಗೊಳಿಸಿದ ಬಳಿಕ ಏನು ಮಾಡಬೇಕು ಎಂಬ ಯೋಜನೆ ರೂಪಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸೇರಿ ಮುಂದಿನ ಕ್ರಮಗಳೇನು ಎಂಬ ಬಗ್ಗೆ ನಿರ್ಧರಿಸಬೇಕು. ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಕ್ರಮಗಳು ಪಾರದರ್ಶಕವಾಗಿರಬೇಕು. ಆದರೆ ಸದ್ಯ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ರಾಜ್ಯ ಸರ್ಕಾರಗಳನ್ನು ಪರಿಗಣಿಸುತ್ತಿಲ್ಲ ಎಂದು ಕಿಡಿಕಾರಿದರು. ಇನ್ನು ಆರೋಗ್ಯ ಸೇತು ಅ್ಯಪ್ ವಿಚಾರದಲ್ಲಿ ಪಾರದರ್ಶಕತೆ ಇರಬೇಕು. ಆ್ಯಪ್ ಅನ್ನು ಹ್ಯಾಕ್ ಮಾಡುವ ಸಾಧ್ಯತೆಗಳು ಈಗಾಗಲೇ ಸ್ಪಷ್ಟವಾಗಿವೆ. ಸಿಂಗಾಪುರ್ ದಲ್ಲೂ ಆ್ಯಪ್ ಬಳಸಲಾಗುತ್ತಿದೆ. ಭಾರತ ಅದೇ ಮಾದರಿಯಲ್ಲಿ ಪಾರದರ್ಶಕವಾಗಿರಬೇಕು ಎಂದು ಹೇಳಿದರು….

India

ಹೈದರಾಬಾದ್ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಏತನ್ಮಧ್ಯೆ, ಆಂಧ್ರಪ್ರದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 54 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1887ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ಆಂಧ್ರಪ್ರದೇಶದ ನೋಡಲ್ ಅಧಿಕಾರಿಹೆಲ್ತ್ ಬುಲೆಟಿನ್ ವರದಿ ನೀಡಿದ್ದು, ಒಂದೇ ದಿನದಲ್ಲಿ 54 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಮೂರು ಮಂದಿ ಬಲಿಯಾಗಿದ್ದಾರೆ. ಒಟ್ಟಾರೆ, ಈವರೆಗೆ 1887 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಸೋಂಕಿನಿಂದ ಬಳಲುತ್ತಿದ್ದ 842 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ…

India

ನವದೆಹಲಿ : ಕೊರೊನಾ ಸೋಂಕು ಹಿನ್ನಲೆಯಲ್ಲಿ ವಿಶ್ವದ ಬಲಾಢ್ಯ ರಾಷ್ಟ್ರಗಳು ತತ್ತರಿಸಿ ಹೋಗಿದ್ದು, ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ವಿವಿಧ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ವಂದೇ ಬಾರತ್ ಮಿಷನ್ ಹೆಸರಿನಲ್ಲಿ ಈ ರಕ್ಷಣಾ ಕಾರ್ಯ ಇನ್ನು ಒಂದು ವಾರ ಮುಂದುವರೆಯಲಿದೆ.  ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿದ್ದ ಲಕ್ಷಾಂತರ ಅನಿವಾಸಿ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗುತ್ತಿದ್ದು, ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ. ಅಬುಧಾಬಿಯಿಂದ ಹೊರಟ ಮೊದಲ ವಿಮಾನ ನಿನ್ನೆ ರಾತ್ರಿ ಕೇರಳದ ಕೋಝಿಕೋಡ್​ಗೆ ತಲುಪಿದೆ.

ಭಾರತದ ಅತಿದೊಡ್ಡ ರಕ್ಷಣಾ ಕಾರ್ಯಾಚರಣೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು,  ಅಬುಧಾಬಿಯಿಂದ 177 ಪ್ರಯಾಣಿಕರು ಮತ್ತು 4 ಶಿಶುಗಳೊಂದಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಫ್ಲೈಟ್ ಕಳೆದ ರಾತ್ರಿ 10 ಗಂಟೆಗೆ ಕೊಚ್ಚಿ ಇಂಟರ್​ನ್ಯಾಷನಲ್ ಏರ್​ಪೋರ್ಟ್​ಗೆ ಬಂದಿಳಿದಿದೆ. ಹಾಗೇ ದುಬೈನಿಂದ ಹೊರಟಿದ್ದ ಮತ್ತೊಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ ಕೂಡ ಕೇರಳದ ಕೋಝಿಕೋಡ್​ಗೆ ತಲುಪಿದೆ. ಭಾರತಕ್ಕೆ ಬಂದಿಳಿದ ಎಲ್ಲ 363 ಅನಿವಾಸಿ ಭಾರತೀಯರನ್ನು ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅವರನ್ನು 14 ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರಿಸಲಾಗುವುದು. ಎಲ್ಲ ಅನಿವಾಸಿಗಳಿಗೂ ಆರೋಗ್ಯ ಸೇತು ಆ್ಯಪ್ ಡೌನ್​ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದ್ದು, ಮುಂಜಾಗ್ರತಾ ಕ್ರಮ ವಹಿಸಲಾಗಿದೆ…

India

ನವದೆಹಲಿ : ವಿಶಾಖಪಟ್ಟಣಂ ಹೊರವಲಯದ ಎಲ್ ಜಿ ಪಾಲಿಮರ್ಸ್ ಕಂಪನಿಯಲ್ಲಿ ವಿಷಾನಿಲ ಸೋರಿಕೆಯಿಂದಾಗಿ  9 ಮಂದಿ ಬಲಿಯಾಗಿದ್ದಾರೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಗ್ರಾಮದ ಸುತ್ತಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ತೀವ್ರ ಆತಂಕ ಮನೆಮಾಡಿದೆ. ಸುತ್ತಮುತ್ತಲ ಗ್ರಾಮಸ್ಥರಲ್ಲಿ ಗಂಟಲು ಹಾಗೂ ಚರ್ಮದ ಸಮಸ್ಯೆ ಕಾಣಿಸಿಕೊಂಡಿದ್ದು, ಈವರೆಗೆ ಸುಮಾರು ಒಂದೂವರೆ ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಇದೇ ವೇಳೆ 800 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ದುರ್ಘಟನೆಯಿಂದಾಗಿ 5 ಸಾವಿರ ಮಂದಿ ಅಸ್ವಸ್ಥರಾಗಿದ್ದಾರೆಂದು ಹೇಳಲಾಗುತ್ತಿದೆ. ಇದೇ ವೇಳೆ, ಸುತ್ತಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ಯಾರೂ ಕೆರೆ, ಬೋರ್ ವೆಲ್ ಸೇರಿದಂತೆ ಇತರೇ ಮೂಲಗಳಿಂದ  ನೀರು ಸೇವಿಸದಂತೆ ಸೂಚಿಸಲಾಗಿದೆ. ಇದೇ ವೇಳೆ, ವಿಶಾಖಪಟ್ಟಣಂನಲ್ಲೂ ಭಾರಿ ಆತಂಕ ಮನೆಮಾಡಿದ್ದು, ನಾಗರಿಕರಿಗೆ ಯಾರೂ ಮನೆಗಳಿಂದ ಹೊರಬರಬೇಡಿ, ಮೂಗು ಹಾಗೂ ಬಾಯಿಗೆ ಒದ್ದೆ ಬಟ್ಟೆಗಳನ್ನು ಕಟ್ಟಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇದೇ ವೇಳೆ, ಕೊರೊನಾ ಹಿನ್ನೆಲೆಯಲ್ಲಿ ವಲಸೆಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ವಿಶಾಖಪಟ್ಟಣಂ ಮಾರ್ಗದ ಸಂಚಾರವನ್ನು ಬದಲಿಸಲಾಗಿದೆ.

ಏತನ್ಮಧ್ಯೆ, ದುರ್ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಖೇಧ ವ್ಯಕ್ತಪಡಿಸಿದ್ದಾರೆ.  ಅಲ್ಲದೇ, ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ, 300ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಅಸ್ವಸ್ಥರಾಗಿದ್ದು, ಅವರೆಲ್ಲ ಶೀಘ್ರ ಗುಣಮುಖರಾಗಲೆಂದು ಆಶಿಸಿದ್ದಾರೆ.

ಇನ್ನು ಇದೇ ವೇಳೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ದುರ್ಘಟನೆಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ, ಅಸ್ವಸ್ಥರು ಶೀಘ್ರ ಗುಣಮುಖರಾಗಲೆಂದು ಆಶಿಸಿದ್ದಾರೆ. ಅಲ್ಲದೇ, ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಅಗತ್ಯ ಆರೋಗ್ಯ ಕ್ರಮಗಳನ್ನು ಪಾಲಿಸಿ ಜಿಲ್ಲಾಡಳಿತಕ್ಕೆ ಅಗತ್ಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ.