kannada newsnow – Kannada News Now


India

ನವದೆಹಲಿ : ಲಡಾಕ್ ಸಮೀಪದ ಗಾಲ್ವಾನ್ ಕಣಿವೆಯಲ್ಲಿ ಕಳೆದ ರಾತ್ರಿ ಪರಿಸ್ಥಿತಿ ಉಲ್ಭಣಿಸಿದ್ದು, ಭಾರತ-ಚೀನಾ ರಾಷ್ಟ್ರಗಳ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಚೀನಾ ಸೈನಿಕರ ಗುಂಡಿಗೆ ಓರ್ವ ಮಿಲಿಟರಿ ಅಧಿಕಾರಿ ಹಾಗೂ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರು ಬಲಿಯಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಚೀನಾ-ಭಾರತ ಗಡಿಯಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗಿತ್ತು. ಕಳೆದ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ಸಂಘರ್ಷ ಏರ್ಪಟ್ಟಿದೆ. ಈ ವೇಳೆ, ಚೀನಾ ಪಡೆಯ ಗುಂಡಿಗೆ ಭಾರತೀಯ ಸೇನಾಪಡೆಯ ಮೂವರು ಸಿಬ್ಬಂದಿ ಬಲಿಯಾಗಿದ್ದಾರೆ. ಇನ್ನು ಗಡಿಯಲ್ಲಿ ಪರಿಸ್ಥಿತಿ ಶಾಂತಗೊಳಿಸುವ ಹಿನ್ನೆಲೆಯಲ್ಲಿ ಭಾರತ-ಚೀನಾ ಸೇನಾಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಸಧ್ಯದಲ್ಲೇ ಭಾರತೀಯ ಸೇನೆ ಸುದ್ದಿಗೋಷ್ಟಿ ನಡೆಸಲಿದೆ…

Bangalore State

ಬೆಂಗಳೂರು : ರಾಜ್ಯದ್ಯಂತ ಮಾರಕ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಏತನ್ಮಧ್ಯೆ  ಮಾರಕ ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗಳಿಗೂ ಮಾರಣಾಂತಿಕ ಸೋಂಕಿನ ಭೀತಿ ಎದುರಾಗಿದೆ. ಹೌದು ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್ ಗಳಿಗೆ ಮಾರಕ ಸೋಂಕು ತಗುಲಿರುವುದು ದೃಢಪಟ್ಟಿದೆ.

ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮೂವರು ಸ್ಟಾಫ್ ನರ್ಸ್ ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿನ ಲಕ್ಷಣ ಹಿನ್ನೆಲೆಯಲ್ಲಿ ಈ ಮೂರು ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿತ್ತು. ವರದಿಯಲ್ಲಿ ಮೂವರು ಸ್ಟಾಫ್ ನರ್ಸ್ ಗಳಿಗೆ ಸೋಂಕು  ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಆಸ್ಪತ್ರೆಯ ಸಿಬ್ಬಂದಿಯಲ್ಲಿ ಆತಂಕ ಮನೆಮಾಡಿದೆ. ಸೋಂಕು ದೃಢಪಡುತ್ತಿದ್ದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನು ನಿನ್ನೆಯಷ್ಟೇ ಬೆಂಗಳೂರಿನ ಇಎಸ್ಐ ಆಸ್ಪತ್ರೆಯ ಹೌಸ್ ಕೀಪಿಂಗ್ ನ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಈಗ ವಿಕ್ಟೋರಿಯಾ ಆಸ್ಪತ್ರೆಯ ಮೂವರು ಸ್ಟಾಫ್ ನರ್ಸ್ ಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ….

State

ಬೆಂಗಳೂರು :  ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ಇಂದು ಮಧ್ಯಾಹ್ನದ ಬುಲೆಟಿನ್ ನಲ್ಲಿ 10 ಮಂದಿಯಲ್ಲಿ ಹೊಸದಾಗಿ ಮಾರಕ ಸೋಂಕು ದೃಢಪಟ್ಟಿದೆ. ದಿನೇ ದಿನೇ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಹಲವು ಸೇವೆಗಳು ಸ್ಥಗಿತಗೊಂಡಿವೆ. ಹೀಗಾಗಿ ರಾಜ್ಯದ ಬೊಕ್ಕಸಕ್ಕೇ ಬರೋಬರಿ 10,675 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. 

ಆರಂಭದಲ್ಲಿ ಲಾಕ್ ಡೌನ್ ನಿಯಮ ಕಠಿಣಗೊಂಡಿದ್ದರಿಂದ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ  ಸರ್ಕಾರಕ್ಕೆ ಬರಬೇಕಿದ್ದ ಎಲ್ಲಾ ಆದಾಯ ಸ್ಥಗಿತಗೊಂಡಿತ್ತು.  ತೆರಿಗೆ, ಅಬಕಾರಿ, ಅಂಚೆ ಚೀಟಿ, ನೋಂದಾಣಿ, ಸಾರಿಗೆಗಳಿಂದ ಬರಬೇಕಿದ್ದ ಆದಾಯ ಬಾರದ ಕಾರಣ ರಾಜ್ಯದ ಬೊಕ್ಕಸಕ್ಕೆ ಬರೋಬರಿ 10,675 ಕೋಟಿ ರೂ ನಷ್ಟ ಸಂಭವಿಸಿದೆ. ಏಪ್ರಿಲ್​​ ತಿಂಗಳಿನಲ್ಲಿ ಮಾತ್ರ ವಾಣಿಜ್ಯ ತೆರಿಗೆ ರೂ.6,870.25 ಕೋಟಿ, ಅಬಕಾರಿ ರೂ.1,891.6, ಅಂಚೆ ಮತ್ತು ನೋಂದಾವಣಿ ರೂ.1,054 ಕೋಟಿ ಹಾಗೂ ಸಾರಿಗೆ ರೂ.592.91 ಕೋಟಿ ಸಂಗ್ರಹವಾಗಿಬೇಕಿತ್ತು. ಆದರೆ, 10,675 ಕೋಟಿ ರೂ. ನಷ್ಟವಾದ್ದರಿಂದ, 2020-2021ರ ಆರ್ಥಿಕ ವರ್ಷದಲ್ಲಿ ಸುಮಾರು 1/12 ನೇ ಅಂದಾಜು ಆದಾಯವನ್ನು ಕಳೆದುಕೊಳ್ಳಲಾಗಿದೆ. ಸದ್ಯ ಲಾಕ್​​ಡೌನ್​​ ಸಡಿಲಗೊಳಿಸಿದ ಬಳಿಕ ಅಬಕಾರಿ ಸುಂಕದ ಹೆಚ್ಚಳವೂ 2,530 ಕೋಟಿ ರೂ. ಆದಾಯ ತಂದುಕೊಟ್ಟಿದೆ. 2019ನೇ ವರ್ಷದ ನವೆಂಬರ್ ತಿಂಗಳರವರೆಗೆ ಜಿಎಸ್​​ಟಿ ಪರಿಹಾರ ಸ್ವೀಕರಿಸಿದ ಪರಿಣಾಮ 5,000 ಕೋಟಿ ರೂ. ಬಾಕಿಯಿದೆ. ಇನ್ನು  ರಾಜ್ಯದ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದು, 1 ತಿಂಗಳಿಗೆ ಸಂಬಳ ನೀಡಲು 130 ಕೋಟಿ ರೂ. ಅವಶ್ಯಕತೆ ಇದೆ. ಸದ್ಯ ಸಾರಿಗೆ ಸಂಸ್ಥೆಗೆ ಈ ಮೊತ್ತದ ಆದಾಯ ಸಂಗ್ರಹವಿಲ್ಲದ ಕಾರಣ ಸಾರಿಗೆ ನೌಕರರಿಗೆ ವೇತನ ನೀಡುವುದು ದುಸ್ತರವಾಗಿದೆ…

 

State

ಬಾಗಲಕೋಟೆ : ರಾಜಸ್ತಾನದ ಅಜ್ಮೀರ್ ನಿಂದ ವಾಪಾಸ್ ಆದವರ ಬೆನ್ನಲ್ಲೇ ಬಾಗಲಕೋಟೆಗೆ ಈಗ ಅಹಮದಾಬಾದ್ ನಿಂದ ಬಂದ ತಬ್ಲಿಘಿಗಳಿಂದ ಆತಂಕ ಎದುರಾಗಿದೆ. ಲಾಕ್​​ಡೌನ್​​ ಸಡಿಲಗೊಳಿಸಿದ ಬಳಿಕ ಗುಜರಾತ್​​ ನ  ಅಹಮದಾಬಾದ್​ನಿಂದ ಬಂದ ಬಾಗಲಕೋಟೆ ಮೂಲದ ತಬ್ಲಿಘಿಗಳಿಗೆ ಸೋಂಕಿನ ಲಕ್ಷಣ ಕಾಣಿಸಿಕೊಂಡಿತ್ತು. ಹೀಗಾಗಿ  ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಎಲ್ಲರಲ್ಲೂ ನೆಗಿಟಿವ್​ ವರದಿ ಬಂದಿದೆಯಾದರೂ ಕ್ವಾರಂಟೈನ್​​ ಮಾಡಲಾಗಿದೆ.

ಗುಗರಾತ್ ನಿಂದ ಬಂದಿರುವ 29 ಮಂದಿಯ ಪೈಕಿ ಮುಧೋಳದ 17 ಮತ್ತು ಬನಹಟ್ಟಿ ಮೂಲದ 12 ಮಂದಿಯಿದ್ದಾರೆ. ಎಲ್ಲರನ್ನು ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ವರದಿ ನೆಗೆಟಿವ್ ಬಂದಿದ್ದರೂ ಹಲವರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿದೆ. ಹೀಗಾಗಿ ಎಲ್ಲರ ಥ್ರೋಟ್ ಸ್ರ್ಕ್ಯಾಬ್ ನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಇನ್ನು ಕೆಲ ದಿನಗಳ ಹಿಂದೆ  ಬಾಗಲಕೋಟೆಯಿಂದ ರಾಜಸ್ತಾನದ ಅಜ್ಮೀರ್​​ ಪ್ರವಾಸ ಬೆಳೆಸಿದ್ದ ಅಷ್ಟು ಮಂದಿಗೂ ಕೊರೋನಾ ಬಂದಿದೆ. ಹೀಗಾಗಿ ರಾಜಸ್ತಾನ ಕಂಟಕವೂ ಬಾಗಲಕೋಟೆಯಲ್ಲಿ ಮತ್ತಷ್ಟು ಆವರಿಸುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ. ಅಲ್ಲದೆ, ಅಂತರ ರಾಜ್ಯ ಓಡಾಟವೇ ಹೆಚ್ಚಿನ ಪ್ರಕರಣಗಳಲ್ಲಿ ಸೋಂಕಿನ ಮೂಲ ಎಂದೂ ಹೇಳಲಾಗುತ್ತಿದೆ. ಹೀಗಿರುವಾಗಲೇ ಅಜ್ಮೀರ್​​ಗೆ ಹೋಗಿ ಸೋಂಕು ತಗುಲಿಸಿಕೊಂಡು ಬಂದ 8 ಮಂದಿಯನ್ನು ಇಲ್ಲಿನ ಸೋಂಕಿತರ ಪಟ್ಟಿಗೆ ಸೇರಿಸಬೇಡಿ ಎಂದು ಬಾಗಲಕೋಟೆ ಜಿಲ್ಲಾಡಳಿತ ವಿರೋಧ ವ್ಯಕ್ತಪಡಿಸಿದೆ….

State

ಬೆಂಗಳೂರು : ನೆರೆಯ ರಾಜ್ಯ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ರಾಜ್ಯಕ್ಕೆ ಆಗಮಿಸುವವರು 14 ದಿನ ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಜಿಪಿ, ದೆಹಲಿ, ಗುರಜಾತ್, ರಾಜಸ್ಥಾನ, ಮಹಾರಾಷ್ಟ್ರ, ತಮಿಳುನಾಡಿನಿಂದ ಬರುವವರು ಕಡ್ಡಾಯವಾಗಿ 14 ದಿನಗಳ ಕಾಲ ಸರ್ಕಾರ ಗೊತ್ತುಪಡಿಸಿದ ಕ್ವಾರಂಟೈನ್ ಕೇಂದ್ರಗಳಲ್ಲಿ ಇರಬೇಕು. ಸರ್ಕಾರದ ಪೋರ್ಟಲ್ ಸೇವಾ ಸಿಂಧು ಆ್ಯಪ್ ಮೂಲಕ ಮಾತ್ರ ಪಾಸ್ ಗಳನ್ನು ವಿತರಿಸಲಾಗುತ್ತಿದ್ದು, ಬಹಳ ಅತ್ಯಾವಶ್ಯಕವೆನಿಸಿದರೆ ಮಾತ್ರ ಪ್ರಯಾಣಿಸಬೇಕು. ಈ ಪ್ರಯಾಣಿಕರು ಸೋಂಕಿನ ಲಕ್ಷಣಗಳಿಲ್ಲದಿದ್ದರೂ ಕ್ವಾರಂಟೈನ್ ನಲ್ಲಿರಲು ಸಿದ್ದರಾಗಿ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಸೇವಾಸಿಂಧು ಇ-ಪಾಸ್‌ ಹೊಂದಿದವರಿಗೆ ಅಂತಾರಾಜ್ಯ ಸಾರಿಗೆ ಸೌಲಭ್ಯ ಕಲ್ಪಿಸಲು ಇಂದಿನಿಂದ ಜಾರಿಗೆ ಬರುವಂತೆ ಸಹಾಯವಾಣಿ ಆರಂಭಿಸಿದೆ. ರಾಜ್ಯದಿಂದ ಹೊರರಾಜ್ಯಗಳಿಗೆ ತೆರಳುವವರು ಯಾವ ರಾಜ್ಯಕ್ಕೆ ತೆರಳುತ್ತಾರೋ, ಅಲ್ಲಿಂದಲೂ ಪಾಸ್‌ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಸೇವಾಸಿಂಧು ಮೂಲಕ ಪಾಸ್‌ ಪಡೆದುಕೊಳ್ಳುವವರ ಪಟ್ಟಿಯನ್ನು ಸಂಬಂಧಪಟ್ಟ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುತ್ತದೆ. ಅವರು ಪರಿಶೀಲನೆ ನಡೆಸಿ, ಅನುಮತಿ ನೀಡಿದ ಬಳಿಕ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ನಿರ್ಧರಿಸಲಾಗಿದೆ.

ಇನ್ನು ಸಹಾಯವಾಣಿ ಸಂಖ್ಯೆಗಳ ವಿವರ: 

ತಮಿಳುನಾಡು/ಪಾಂಡಿಚೇರಿ: 7760990100, 7760990560, 7760990034, 7760990035, 7760991295

ಆಂಧ್ರಪ್ರದೇಶ/ತೆಲಂಗಾಣ: 7760990561, 7760990532, 7760990955, 7760990530, 7760990967

ಕೇರಳ: 
7760990287, 7760990988, 7760990531, 6366423895, 6366423896

India

ಹೈದರಾಬಾದ್ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಏತನ್ಮಧ್ಯೆ, ಆಂಧ್ರಪ್ರದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 54 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1887ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ಆಂಧ್ರಪ್ರದೇಶದ ನೋಡಲ್ ಅಧಿಕಾರಿಹೆಲ್ತ್ ಬುಲೆಟಿನ್ ವರದಿ ನೀಡಿದ್ದು, ಒಂದೇ ದಿನದಲ್ಲಿ 54 ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಮೂರು ಮಂದಿ ಬಲಿಯಾಗಿದ್ದಾರೆ. ಒಟ್ಟಾರೆ, ಈವರೆಗೆ 1887 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈವರೆಗೆ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಸೋಂಕಿನಿಂದ ಬಳಲುತ್ತಿದ್ದ 842 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ…

State

ರಾಮನಗರ : ರಾಮನಗರ ಜಿಲ್ಲೆಯಾದ್ಯಂತ ಯಾವುದೇ ಕೊರೊನಾ ಸೋಂಕು ಪ್ರಕರಣ ವರದಿಯಾಗಿಲ್ಲ. ಹೀಗಾಗಿ ಜಿಲ್ಲೆಯನ್ನು ಹಸಿರು ವಲಯ ಎಂದು ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಸಣ್ಣ ಹೊಟೇಲ್ ಉದ್ಯಮ ನಡೆಸುತ್ತಿರುವವರು ಸಂಕಷ್ಟಕ್ಕೆ ತುತ್ತಾಗಿದ್ದು, ಅವರಿಗೆ ಹೊಟೇಲ್ ತೆರೆಯಲು ಅನುಮತಿ ನೀಡಬೇಕೆಂದು ಸಂಸದ ಡಿ.ಕೆ.ಸುರೇಶ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 

ಈ ಕುರಿತು ಫೇಸ್ ಬುಕ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಡಿ.ಕೆ.ಸುರೇಶ್, ರಾಮನಗರ ಜಿಲ್ಲೆಯಲ್ಲಿರುವ ಸಣ್ಣಪುಟ್ಟ ಹೋಟೆಲ್‌ಗಳನ್ನು ಬಂದ್ ಮಾಡಲಾಗಿದ್ದು, ಸಾಮಾನ್ಯ ಜನರಿಗೆ ಹಾಗೂ ಉದ್ಯಮ ನಡೆಸುತ್ತಿರುವವರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ದಿನನಿತ್ಯ ನೂರಾರು ಜನರು ತಮ್ಮ ಕೆಲಸಕಾರ್ಯಗಳಿಗೆ ನಗರ ಪ್ರದೇಶಕ್ಕೆ ಆಗಮಿಸುತ್ತಾರೆ. ಆದರೆ, ಅವರಿಗೆ ನಗರ ಪ್ರದೇಶದಲ್ಲಿ ತಿನ್ನೋಕೆ ಆಹಾರ ಸಿಗುತ್ತಿಲ್ಲ. ಇದರ ಜೊತೆಗೆ ಉದ್ಯಮ ನಡೆಸುತ್ತಿರುವವರು ಸಾಲ ಮಾಡಿಕೊಂಡು ಉದ್ಯಮಕ್ಕೆ ಕೈಹಾಕಿದ್ದಾರೆ. ಆದರೆ ಕಳೆದ ಒಂದು ತಿಂಗಳಿಂದ ವ್ಯಾಪಾರ ವಹಿವಾಟಿಲ್ಲದ ಕಾರಣ ಎಲ್ಲರೂ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಹಾಗಾಗಿ ಸಿಎಂ ಯಡಿಯೂರಪ್ಪನವರು ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿ ತ್ವರಿತವಾಗಿ ಜಿಲ್ಲೆಯಲ್ಲಿ ಹೋಟೆಲ್‌ಗಳ ಪ್ರಾರಂಭಕ್ಕೆ ಸೂಚನೆ ಕೊಡಬೇಕು. ಇದರಿಂದಾಗಿ ಉದ್ಯಮ ನಡೆಸುತ್ತಿರುವವರಿಗೆ ಹಾಗೂ ಸಾಮಾನ್ಯ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ” ಎಂದು ಒತ್ತಾಯಿಸಿದ್ದಾರೆ….

Gepostet von DK Suresh am Dienstag, 5. Mai 2020

State

ಬೆಂಗಳೂರು : ಮಾರಕ ಕೊರೊನಾ ವಿಚಾರದಲ್ಲೂ ಕಾಂಗ್ರೆಸ್ ನ ನಾಯಕರಿಗೆ ರಾಜಕೀಯ ಮತ್ತು ಪ್ರಚಾರವೇ ಮುಖ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹರಿಹಾಯ್ದಿದ್ದಾರೆ.

ಬೆಂಗಳೂರಿನಲ್ಲಿರುವ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಲು ರಾಜ್ಯ ಸರ್ಕಾರ ಮೊದಲ ಬಸ್‌ ಮತ್ತು ರೈಲಿನ ವ್ಯವಸ್ಥೆ ಮಾಡಿತ್ತಾದರೂ ಅದಕ್ಕೆ ಕಾರ್ಮಿಕರಿಂದಲೇ ಹಣ ವಸೂಲಿ ಮಾಡಲು ಮುಂದಾಗಿತ್ತು. ಆದರೆ, ಇದನ್ನು ಖಂಡಿಸಿದ್ದ ರಾಜ್ಯ ಕಾಂಗ್ರೆಸ್‌ ನಾಯಕರು ತಾವೇ ಕಾರ್ಮಿಕರ ಬಸ್‌ ಮತ್ತು ರೈಲಿನ ಪ್ರಯಾಣ ದರವನ್ನು ನೀಡುವುದಾಗಿ ಘೋಷಿಸಿದ್ದರು. ಕಾಂಗ್ರೆಸ್‌ ನಾಯಕರ ಈ ವರ್ತನೆಯನ್ನು ಖಂಡಿಸಿರುವ ಸಚಿವ ಡಾ.ಕೆ. ಸುಧಾಕರ್‌, ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. “ಕೊರೊನಾ ವಿಷಯದಲ್ಲೂ ರಾಜಕೀಯವೇ ತಮಗೆ ಮುಖ್ಯ ಮತ್ತು ಲಾಭ ಅನ್ನುವ ಇವರ ಮನಸ್ಥಿತಿ ಹಾಗು ರೋಮ್ ನ ಅಂದಿನ ದೊರೆ ನೀರೋ ಗು ವ್ಯತ್ಯಾಸವಿಲ್ಲ. ಯಾಕೆಂದರೆ ಇಡೀ ರೋಮ್ ಸುಟ್ಟು ನಾಶವಾಗುತ್ತಿರುವಾಗ ನೀರೋ ಪಿಟೀಲು ಬಾರಿಸುತ್ತಿದ್ದ” ಎಂದು ಕಿಡಿಕಾರಿದ್ದಾರೆ.

 

ಮತ್ತೊಂದು ಟ್ವೀಟ್‌ನಲ್ಲಿ “ಕಾಂಗ್ರೆಸ್‌ನವರು ಕಾರ್ಮಿಕರ ಬಸ್ ಮತ್ತು ಟ್ರೈನ್ ಚಾರ್ಜ್ ಕೊಡ್ತೀವಿ ಅಂತ ರೋಡ್ ರೋಡ್‌ನಲ್ಲಿ ಓಡಾಟ ಹಾಗು ಅದರ ಜಾಹಿರಾತುಗಳನ್ನ ಕೊಟ್ಟಿರುವುದು ನೋಡಿದರೆ ಇದು ಭರ್ಜರಿ ಬಯಲುನಾಟಕ ಎಂದು ಗೊತ್ತಾಗುತ್ತೆ. ನಿಯಮದಂತೆ ಹಣ ಯಾರಿಗೆ ಕೊಡಬೇಕಿತ್ತೋ ಅವರಿಗೆ ಕೊಡುವುದು ಬಿಟ್ಟು ಊರೆಲ್ಲ ಕ್ಯಾಮೆರಾ ಮುಂದೆ ಕೊರೊನ ಮೀರುವ ಓಡಾಟ ,ಚೀರಾಟ ಮತ್ತು ಹಾರಾಟ” ಎಂದು ವ್ಯಂಗ್ಯ ಮಾಡಿದ್ದಾರೆ.

World

ನ್ಯೂಸ್ ಡೆಸ್ಕ್ : ಮಾರಕ ಕೊರೊನಾ ಸೋಂಕು ಜಗತ್ತಿಗೆ ಕಂಟಕವಾಗಿ ಪರಿಣಮಿಸಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇನ್ನು ಅಭಿವೃದ್ಧಿ ಹೊಂದಿದ ದೇಶಗಳೂ ಕೊರೊನಾ ಸೋಂಕಿನಿಂದಾಗಿ ತತ್ತರಿಸಿ ಹೋಗಿವೆ. ಏತನ್ಮಧ್ಯೆ, ರಷ್ಟಾ ಪ್ರಧಾನಿ ಮಿಖಾಯಿಲ್ ಮಿಶುಸ್ಟಿನ್ ಗೂ  ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಸ್ವತಃ ಮಿಖಾಯಿಲ್ ಅವರೇ ಮಾಹಿತಿ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ಸ್ವಯಂ ದಿಗ್ಬಂಧನಕ್ಕೆ ಗುರಿಯಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆಂದು ಹೇಳಿದ್ದಾರೆ. ನನಗೆ ಕೊರೋನಾ ವೈರಸ್ ಸೋಂಕು ತಗುಲಿದ್ದು, ಕ್ಯಾಬಿನೆಟ್ ಸಚಿವರ ಆರೋಗ್ಯದ ಹಿತದೃಷ್ಟಿಯಿಂದ ಸ್ವಯಂ ದಿಗ್ಭಂದನದಲ್ಲಿ ಇರುವುದಾಗಿ ಮಿಖಾಯಿಲ್ ತಿಳಿಸಿದ್ದಾರೆ. ಈ ಕುರಿತು ರಷ್ಯಾ ಅದ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಮಿಖಾಯಿಲ್, ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು,  ಸ್ವಯಂ ದಿಗ್ಭಂಧನದಲ್ಲಿರುವುದಾಗಿ ಹೇಳಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಪುಟಿನ್, ಮಿಖಾಯಿಲ್ ಅವರು ಆದಷ್ಟು ಬೇಗನೇ ಚೇತರಿಕೆ ಕಂಡು, ಸರ್ಕಾರದ ಜವಾಬ್ದಾರಿಗಳನ್ನು ನೋಡಿಕೊಳ್ಳುವಂತಾಗಲಿ ಎಂದು ಶುಭ ಕೋರಿದ್ದಾರೆ….
India

ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ಸೋಂಕು ತಂದೊಡ್ಡಿರುವ ಪರಿಸ್ಥಿತಿ ಸುಧಾರಿಸಬೇಕಾದರೆ, ಲಾಕ್ ಡೌನ್ ಉಲ್ಲಂಘನೆ ತಕ್ಷಣ ನಿಲ್ಲಬೇಕು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಮೇ.3 ರ ಬಳಿಕ ಲಾಕ್ ಡೌನ್ ಮುಂದುವರೆಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಎಲ್ಲ ರಾಜ್ಯಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ಸಂವಾದ ನಡೆಯಿತು. ಇದೇ ವೇಳೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ದೇಶದಲ್ಲಿ ಎಲ್ಲದಕ್ಕಿಂತ ಮೊದಲು ಲಾಕ್ ಡೌನ್ ಉಲ್ಲಂಘನೆ ತಕ್ಷಣ ನಿಲ್ಲಬೇಕು. ಮಾರಣಾಂತಿಕ ಕೊರೊನಾ ವೈರಸ್ ನಿಂದಾಗಿ ಇಡೀ ವಿಶ್ವದಲ್ಲಿ 2 ಲಕ್ಷಕ್ಕೂ ಅಧಿಕ ಮಂಡಿ ಬಲಿಯಾಗಿದ್ದಾರೆ. ಇತರೇ ರಾಷ್ಟ್ರಗಳಿಗೆ ಹೋಲಿಸಿದರೆ ಸದ್ಯ ಭಾರತದಲ್ಲಿ ಪರಿಸ್ಥಿತಿ ಉತ್ತಮವಾಗಿದೆ. ಜೀವನ ಹಾಗೂ ಜೀವನೋಪಾಯ ಉಳಿಸರು ಪ್ರಧಾನಿ ಮೋದಿ ಕೆಲ ಮಾರ್ಗೋಪಾಯಗಳನ್ನು ಕಂಡುಹಿಡಿದಿದ್ದಾರೆ. ಇದನ್ನು ಎಲ್ಲ ರಾಜ್ಯಗಳು ಪಾಲಿಸಬೇಕೆಂದು ಸಲಹೆ ನೀಡಿದರು…