kannada online news – Kannada News Now

State

ಬೆಂಗಳೂರು : ರಾಜ್ಯ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿನ ಗುತ್ತಿಗೆ, ಹೊರಗುತ್ತಿಗೆ ನೌಕರರು ಬೇಡಿಕೆ ಈಡೇರಿಸುವವರೆಗೆ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ. ನಾವು ಪ್ರತಿಭಟನೆಯನ್ನು ಹಿಂಪಡೆದಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ  ವಿಶ್ವರಾಧ್ಯ ಎಚ್. ವೈ ಸ್ಪಷ್ಟ ಪಡಿಸಿದ್ದಾರೆ.

ಇದು ಗಾನ ಗಂಧರ್ವ ‘ಎಸ್.ಪಿ.ಬಾಲಸುಬ್ರಹ್ಮಣ್ಯಂ’ ಜೀವನ ‘ಗಾಯನ ಯಾತ್ರೆ’

ಈ ಕುರಿತಂತೆ ನಮ್ಮ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದ ಅವರು, ಸಮಾನ ಕೆಲಸಕ್ಕೆ ಸಮಾನ ವೇತನ, ಗುತ್ತಿಗೆ ಹೊರ ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು. ಸೇವಾ ಭದ್ರತೆಯನ್ನು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕಳೆದ ನಿನ್ನೆಯಿಂದ ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ನಿರತರಾಗಿರುವುದಾಗಿ ತಿಳಿಸಿದರು.

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಇನ್ನೂ ಮುಂದುವರೆದು ಮಾತನಾಡಿದ ಅವರು, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರು ಪ್ರತಿಭಟನೆಯನ್ನು ಮುಂದುವರೆಸಿದ್ದೇವೆ. ನಾವು ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂಬುದು ಸುಳ್ಳು. ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸುವವರೆಗೆ ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂಬುದಾಗಿ ಸ್ಪಷ್ಟ ಪಡಿಸಿದರು.

ವರದಿ : ವಸಂತ ಬಿ ಈಶ್ವರಗೆರೆ

State

ಶಿವಮೊಗ್ಗ : ಕರೋನಾ ನಿಯಂತ್ರಿಸುವ ಕ್ರಮವಾಗಿ ಮುಂದಿನ 15 ದಿನಗಳ ಕಾಲ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಕರೋನಾ ಪರೀಕ್ಷೆಯನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸವೇಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ 15ದಿನಗಳ ಕಾಲ ಪ್ರತಿದಿನ ಕನಿಷ್ಟ 3ಸಾವಿರ ವ್ಯಕ್ತಿಗಳಿಗೆ ಕರೋನಾ ಪರೀಕ್ಷೆ ನಡೆಸಬೇಕು. ಪ್ರತಿದಿನ 2ಸಾವಿರ ಆರ್‍ಟಿಪಿಸಿಆರ್ ಮತ್ತು 1ಸಾವಿರ ರ್ಯಾಪಿಡ್ ಆಂಟಿಜನ್ ಟೆಸ್ಟ್ ನಡೆಸಬೇಕು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳಲ್ಲಿ ಸಹ ಕರೋನಾ ತಪಾಸಣೆ ನಡೆಸಬೇಕು. ಇದಕ್ಕೆ ಅಗತ್ಯವಾದ ತಪಾಸಣಾ ಕಿಟ್‍ಗಳನ್ನು ಪೂರೈಕೆ ಮಾಡಲಾಗುವುದು ಎಂದು ಅವರು ಹೇಳಿದರು.

ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ

ಎಲ್ಲಾ ಸಿದ್ಧತೆ: ಕರೋನಾ ಪರೀಕ್ಷೆ ಹೆಚ್ಚಳಕ್ಕೆ ಪೂರಕವಾಗಿ ಪಾಸಿಟಿವ್ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಬೇಕು. ರೋಗ ಲಕ್ಷಣವಿಲ್ಲದ ಕರೋನಾ ಪೀಡಿತರಿಗೆ ಹೋಂ ಕ್ವಾರೆಂಟೈನ್ ವ್ಯವಸ್ಥೆ ಕಲ್ಪಿಸಬೇಕು. ಹೋಂ ಕ್ವಾರೆಂಟೈನ್‍ನಲ್ಲಿರುವವರ ಆರೋಗ್ಯದ ಮೇಲೆ ನಿಗಾ ಇರಿಸಲು ವೈದ್ಯಾಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಚಿಸಬೇಕು. ರೋಗ ಲಕ್ಷಣವಿರುವ ಮತ್ತು ಚಿಕಿತ್ಸೆ ಅಗತ್ಯವಿರುವರನ್ನು ಮಾತ್ರ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಬೇಕು. ಕೋವಿಡ್ ಆಸ್ಪತ್ರೆಗಳಲ್ಲಿ ಸೂಕ್ತ ಪ್ರಮಾಣದಲ್ಲಿ ಆಕ್ಸಿಜನ್ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಮೆಗ್ಗಾನ್ ಆವರಣದಲ್ಲಿ ಇನ್ನೊಂದು ಆಕ್ಸಿಜನ್ ಪ್ಲಾಂಟ್ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಮೆಗ್ಗಾನ್ ಪರ್ಯಾಯ ವ್ಯವಸ್ಥೆ: ಕರೋನಾ ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ಮೆಗ್ಗಾನ್ ಆಸ್ಪತ್ರೆ ಹೊರಭಾಗದಲ್ಲಿ ಸೇವಾ ಭದ್ರತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿರಿಸಿ ಹೊರ ಗುತ್ತಿಗೆ ಸಿಬ್ಬಂದಿಗಳು ನಡೆಸುತ್ತ್ರಿರುವ ಪ್ರತಿಭಟನೆ ದುರದೃಷ್ಟಕರ. ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ತಾಂತ್ರಿಕ ಕಾರಣಗಳಿಂದ ಅಂಗೀಕರಿಸಲು ಸರ್ಕಾರದ ಹಂತದಲ್ಲಿ ಸಾಧ್ಯವಾಗಿಲ್ಲ. ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾಡಳಿತ ತನ್ನಿಂದಾದ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ 350ಮಂದಿ ಕೊರೋನಾ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು, ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಸೇವೆ ಸಲ್ಲಿಸಬೇಕಾದವರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಇದು ಗಾನ ಗಂಧರ್ವ ‘ಎಸ್.ಪಿ.ಬಾಲಸುಬ್ರಹ್ಮಣ್ಯಂ’ ಜೀವನ ‘ಗಾಯನ ಯಾತ್ರೆ’

ಹೊರಗುತ್ತಿಗೆ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮುಂದುವರೆಸಲಾಗಿದೆ. ಅವರಿಗೆ ಕಾನೂನುಬದ್ಧವಾಗಿ ನೀಡಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕರೋನಾ ಪೀಡಿತರ ಸಂಖ್ಯೆ ಹೆಚ್ಚಳದಿಂದ ಇರುವ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು ಹೆಚ್ಚಿನ ಸಿಬ್ಬಂದಿಗಳ ಅಗತ್ಯವಿದೆ. ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡುವಂತೆ ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ ಅವರು ಮನವಿ ಮಾಡಿದರು.

ಹಾಡಿನಿಂದ ಅಮರರಾದ ಎಸ್.ಪಿ.ಬಿ : ಡಿಸಿಎಂ ಲಕ್ಷ್ಮಣ್ ಸವದಿ ಶೋಕ

ಕ್ರಿಮಿನಲ್ ಮೊಕದ್ದಮೆ: ಕರೋನಾ ಪೀಡಿತರ ಚಿಕಿತ್ಸೆಗೆ ಯಾವುದೇ ಕುಂದುಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅನುಮೋದನೆಗೊಂಡಿರುವ ಹುದ್ದೆಗಳಿಗೆ ತಕ್ಷಣ ಎರಡು ದಿನಗಳ ಒಳಗಾಗಿ ಪರ್ಯಾಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು. ಇಂತಹ ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿ ಅವರು ಶಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಸರ್ಜನ್ ಡಾ.ರಘುನಂದನ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

State

ಬೆಂಗಳೂರು : ಗಾನಗಂಧರ್ವ ಶ್ರೀ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಇಂದು ಅಸ್ತಂಗತರಾಗುವುದರೊಂದಿಗೆ ಚಲನಚಿತ್ರ ಸಂಗೀತದ ಒಂದು ಯುಗವೇ ಅಂತ್ಯವಾಯಿತು ಎಂದು ಹೇಳಲು ನನಗೆ ತೀವ್ರ ದುಃಖವಾಗುತ್ತಿದೆ. ಶ್ರೀ ಎಸ್.ಪಿ.ಬಿ. ಈಗ ನಮ್ಮೊಂದಿಗೆ ಇಲ್ಲದಿರಬಹುದು, ಆದರೆ ಅವರ ಮಾಧುರ್ಯ ಸಿರಿಕಂಠದ ಗೀತ, ಸಂಗೀತಗಳಿಂದ ನಮ್ಮ ಮನಸ್ಸಿನಲ್ಲಿ ಸದಾ ನೆಲೆಸಿರುತ್ತಾರೆ. ಅವರಿಗೆ ಸಂಗೀತವೇ ಸರ್ವಸ್ವವಾಗಿತ್ತು ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಶೋಕ ವ್ಯಕ್ತ ಪಡಿಸಿದ್ದಾರೆ.

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ

ನಿನ್ನ ನೀನು ಮರೆತರೇನು ಸುಖವಿದೆ ?… ತನ್ನತನವ ತೊರೆದರೇನು ಸೊಗಸಿದೆ?… ಎಂದು ಅತ್ಯಂತ ಸೊಗಸಾಗಿ ಬದುಕಿನ ಅರ್ಥ ಸ್ಫುರಿಸುವಂತೆ ಹಾಡಿದ ಎಸ್.ಪಿ.ಬಿ. ಅವರು ನಿಜಕ್ಕೂ ಅಮರರಾಗಿದ್ದಾರೆ.  ಎಸ್.ಪಿ.ಬಿ. ಅವರು ಕನ್ನಡ, ತೆಲುಗು, ತಮಿಳು, ಹಿಂದಿ ಹೀಗೆ ಅನೇಕ ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ ಎಂದರೆ ಅವರ ಸೃಜನಶೀಲತೆಯ ಅಂತಃಸತ್ವ ಎಷ್ಟೊಂದು ಸಮರ್ಥವಾಗಿತ್ತು ಎಂಬುದನ್ನು ಅರ್ಥೈಸಿಕೊಳ್ಳಬಹುದು. ಆದರೆ ಅವರ ಮೊದಲ ಪ್ರೀತಿ ಮತ್ತು ಒಲವು ಕನ್ನಡದ ಬಗ್ಗೆ ಇತ್ತು ಎಂಬುದು ಹೆಮ್ಮೆಯ ಸಂಗತಿ. ಅನೇಕ ಗೌರವ ಡಾಕ್ಟರೇಟ್ ಗಳಿಂದ ಹಿಡಿದು ಪದ್ಮ ಪ್ರಶಸ್ತಿವರೆಗೆ ಅನೇಕ ಪುರಸ್ಕಾರಗಳು ಅವರ ಪ್ರತಿಭೆಗೆ ಸಂದಿದ್ದವು ಎಂದಿದ್ದಾರೆ.

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಹೀಗೆ ಸರಸ್ವತಿಯ ಪುತ್ರರಾಗಿದ್ದ ಶ್ರೀ ಎಸ್.ಪಿ.ಬಿ. ಅವರ ಪ್ರತಿಭೆಗೆ ಅವರೇ ಸಾಟಿ. ಅವರ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಅಗಲಿದ ಅವರ ಆತ್ಮಕ್ಕೆ ಭಗವಂತನು ಸದ್ಗತಿ ಕರುಣಿಸಲಿ. ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ನನ್ನ ಸಾಂತ್ವನಗಳು.

ಇದು ಗಾನ ಗಂಧರ್ವ ‘ಎಸ್.ಪಿ.ಬಾಲಸುಬ್ರಹ್ಮಣ್ಯಂ’ ಜೀವನ ‘ಗಾಯನ ಯಾತ್ರೆ’

ಕೊರೋನ ಮಹಾಮಾರಿಯಿಂದಾಗಿ ನಮ್ಮ ನಾಡು ಇತ್ತೀಚೆಗೆ ಹಲವು ಗಣ್ಯರನ್ನು ಕಳೆದುಕೊಂಡು ಆತಂಕದಲ್ಲಿದೆ. ಇವರ ಅಗಲಿಕೆಯನ್ನು ನಮಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ದೇವರು ಕೊರೋನಾ ಪಿಡುಗಿಗೆ ಮುಕ್ತಿ ನೀಡಿ ನಾಡಿನ ಜನರಲ್ಲಿ ಸುಖಶಾಂತಿ ಸಮಾಧಾನ ನೆಲೆಸುವಂತೆ ಆಶೀರ್ವದಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

State

ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು ಎಂದಿದ್ದಾರೆ.

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು. ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದು ದುಖ ವ್ಯಕ್ತ ಪಡಿಸಿದ್ದಾರೆ.

ಇದು ಗಾನ ಗಂಧರ್ವ ‘ಎಸ್.ಪಿ.ಬಾಲಸುಬ್ರಹ್ಮಣ್ಯಂ’ ಜೀವನ ‘ಗಾಯನ ಯಾತ್ರೆ’

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

State

ಬೆಂಗಳೂರು : ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

‘ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೋನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ ಅವರ ಆರೋಗ್ಯದ ಬಗ್ಗೆ ಚಿಂತೆ ಇತ್ತು. ಲಕ್ಷಾಂತರ ಅಭಿಮಾನಿಗಳು ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಆ ಯಮ ನಿಷ್ಕರುಣಿ. ಹೀಗಾಗಿ ನಮ್ಮ ಪ್ರಾರ್ಥನೆ ಫಲಿಸಲಿಲ್ಲ ಎಂದು ತಿಳಿಸಿದ್ದಾರೆ.

BIG BREAKING : ಖ್ಯಾತ ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ವಿಧಿವಶ

ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಬಾಲಸುಬ್ರಹ್ಮಣ್ಯಂ ತಮ್ಮ ಕಂಠ ಸಿರಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅವರ ಹಾಡುಗಳನ್ನು ಕೇಳಿ ನಾವು ಬೆಳೆದಿದ್ದೇವೆ. ಅವರ ಸಾಧನೆಗೆ ಪದ್ಮ ಶ್ರೀ ಹಾಗೂ ಪದ್ಮ ಭೂಷಣ ಪ್ರಶಸ್ತಿ ಸೇರಿದಂತೆ 6 ಬಾರಿ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಸಂದಿವೆ ಎಂದು ಶಿವಕುಮಾರ್ ಅವರು ಸ್ಮರಿಸಿಕೊಂಡಿದ್ದಾರೆ .

ಇದು ಗಾನ ಗಂಧರ್ವ ‘ಎಸ್.ಪಿ.ಬಾಲಸುಬ್ರಹ್ಮಣ್ಯಂ’ ಜೀವನ ‘ಗಾಯನ ಯಾತ್ರೆ’

ತಮ್ಮ ಸರಳತೆ, ವಿನಯತೆಯಿಂದಲೂ ಅಭಿಮಾನಿಗಳ ಮನಗೆದ್ದಿದ್ದ ಎಸ್ ಪಿಬಿ ಅವರ ನಿಧನದಿಂದ ಸಿನಿಮಾ ಸಂಗೀತ ಕ್ಷೇತ್ರದಲ್ಲಿ ಒಂದು ಅದ್ಭುತ ಯುಗವೇ ಅಂತ್ಯವಾದಂತಾಗಿದೆ. ಅವರ ಮುಗಿಲೆತ್ತರದ ಸಾಧನೆ ಹಾಗೂ ಹಾಡುಗಳಿಂದ ಅವರು ನಮ್ಮೊಂದಿಗೆ ಸದಾ ಜೀವಂತವಾಗಿ ಇರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳಿಗೆ ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

State

ಚೆನ್ನೈ : ಆಗಸ್ಟ್ 5ರಿಂದ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಅವರು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಬಹುಭಾಷಾ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲವಾಗಿದ್ದಾರೆ. ಆದ್ರೇ ಅವರ ಸಾಧನೆ, ಹಾಡಿದ ಹಾಡುಗಳ ಮೂಲಕ ಇನ್ನೂ ಜೀವಂತವಾಗಿದ್ದಾರೆ. ಇಂತಹ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಜೀವನ ಗಾಯನ ಯಾತ್ರೆ ಬಗ್ಗೆ ಮುಂದೆ ಓದಿ..

ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಜೀವನ ಜೈತ್ರ

ಎಸ್ ಪಿ ಬಾಲಸುಬ್ರಹ್ಮಣ್ಯಂ ಜೂನ್ 4, 1946ರಲ್ಲಿ ಜನಿಸಿದರು. ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡುತ್ತಿದ್ದಾರೆ.

ಬಾಲಸುಬ್ರಹ್ಮಣ್ಯಂ ಅವರು ಹುಟ್ಟಿದ ದಿನ ಜೂನ್ 4, 1946. ಅವರು ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿನ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ ಜನಿಸಿದರು. ಬಾಲು ವ್ಯವಸ್ಥಿತವಾಗಿ ಸಂಗೀತ ಕಲಿಯಲಿಲ್ಲ. ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ.ಸಾಂಬಮೂರ್ತಿಯವರೇ ಅವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ಮುಂದೆ ಮೇರು ಪ್ರಸಿದ್ಧಿ ಪಡೆದ ನಂತರದಲ್ಲಿ ವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು.

1966ರ ವರ್ಷದಲ್ಲಿ ಬಾಲು ಅವರು, ಘಂಟಸಾಲಾ ಮತ್ತು ಎಸ್.ಪಿ. ಕೋದಂಡಪಾಣಿ ತೀರ್ಪುಗಾರರಾಗಿದ್ದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದರು. ಇಬ್ಬರಿಂದಲೂ ಅವರಿಗೆ ಮೆಚ್ಚುಗೆಯ ಸುರಿಮಳೆಯಾಯಿತು. ಕೋದಂಡಪಾಣಿಯವರು ತಮ್ಮ ತೆಲುಗು ಚಿತ್ರ ‘ಶ್ರೀ ಶ್ರೀ ಶ್ರೀ ಮರ್ಯಾದಾ ರಾಮಣ್ಣ’ದಲ್ಲಿ ಹಾಡಲು ಬಾಲೂಗೆ ಅವಕಾಶ ನೀಡಿದರು. ಬಾಲು ಹೇಳುತ್ತಾರೆ ‘ನಾನು ಘಂಟಸಾಲ ಅವರ ಏಕಲವ್ಯ ಶಿಷ್ಯ’.

ಎಸ್ ಪಿ ಬಿ ಮಹತ್ಸಾಧನೆ

ಆಗೊಂದು ಯುಗ, ತೆಲುಗಿನಲ್ಲಿ ಘಂಟಸಾಲ, ತಮಿಳಿನಲ್ಲಿ ಟಿ ಎಂ ಸೌಂದರ್ ರಾಜನ್, ಕನ್ನಡದಲ್ಲಿ ಪಿ ಬಿ ಶ್ರೀನಿವಾಸ್ ಹೀಗೆ ಒಬ್ಬೊಬ್ಬರೂ ಒಂದೊಂದು ಭಾಷೆಯ ಚಿತ್ರರಂಗದಲ್ಲಿ ಸಾರ್ವಭೌಮರು. ಬಾಲು ಚಿತ್ರರಂಗಕ್ಕೆ ಬಂದು ಈ ಎಲ್ಲ ಭಾಷೆಗಳಿಗೂ ಸಾರ್ವಭೌಮರಾಗಿಬಿಟ್ಟರು. ಒಮ್ಮೆ ಅವರು ತಮಿಳು ತೆಲುಗಿನಲ್ಲಿ ಒಂದೇ ದಿನದಲ್ಲಿ 19 ಗೀತೆಗಳನ್ನು ಧ್ವನಿಮುದ್ರಿಸಿದ್ದರು.

ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಧ್ವನಿಮುದ್ರಿಸಿದ್ದರು, ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿದ್ದರು. ಇದು ಎಸ್ ಪಿ ಬಿ ಅವರ ಸಾಮರ್ಥ್ಯ, ಅವರಿಗಿದ್ದ ಬೇಡಿಕೆ, ಅವರಿಗಿರುವ ವೈಶಾಲ್ಯತೆಗಳಿಗಿರುವ ನಿದರ್ಶನ. ಸಂಗೀತ ಪ್ರಧಾನವಾದ ಭಾರತೀಯ ಚಿತ್ರರಂಗದಲ್ಲಿ ಒಂದು ರೀತಿಯಲ್ಲಿ ಹಿನ್ನೆಲೆ ಗಾಯಕರು ಅಭಿನಯಿಸುವವರ ಆತ್ಮವಿದ್ದಂತೆ.

ಇದನ್ನೇ ಡಾ. ರಾಜ್ ಕುಮಾರ್ ಅವರು ಒಮ್ಮೆ ಪಿ ಬಿ ಎಸ್ ಬಗ್ಗೆ ಹೇಳುತ್ತಾ ‘ಪಿ ಬಿ ಎಸ್ ನನ್ನ ಆತ್ಮ, ನಾನು ಶರೀರ’ ಎನ್ನುತ್ತಿದ್ದರು. ರಾಜ್ ಕಪೂರ್ ಮುಖೇಶ್ ಬಗ್ಗೆ ಇದನ್ನೇ ಹೇಳುತ್ತಿದ್ದರು. ಹಾವಿನ ದ್ವೇಷ ಹನ್ನೆರಡು ವರುಷ ಎಂದು ಎಸ್. ಪಿ. ಹಾಡಿದಾಗ ವಿಷ್ಣುವರ್ಧನ್ ರಾಮಾಚಾರಿಯಾಗಿಬಿಟ್ಟರು. ಸ್ನೇಹದ ಕಡಲಲ್ಲಿ ಎಂದು ಹಾಡಿದಾಗ ಶ್ರೀನಾಥ್ ಗರಿಗೆದರಿಬಿಟ್ಟರು. ಎಲ್ಲಿರುವೇ ಮನವ ಕಾಡುವ ರೂಪಸಿಯೇ ಎಂದು ಅನಂತ್ ನಾಗ್ ಆಕಾಶಕ್ಕೆ ಹಾರಿದರು.

ನಲಿವಾ ಗುಲಾಬಿ ಹೂವೆ ಎಂದು ಶಂಕರ್ ಭಾವಸ್ಥರಾದರು. ದಕ್ಷಿಣ ಭಾರತದ ರಜನೀಕಾಂತ್, ಕಮಲಹಾಸನ್, ಚಿರಂಜೀವಿ ಹೀಗೆ ಎಪ್ಪತ್ತು ಎಂಭತ್ತರ ದಶಕದಿಂದ ಎರಡು ಸಾವಿರದ ದಶಕದವರೆಗಿನ ಬಹುತೇಕ ಹೀರೋಗಳ ಅಂತರ್ಧ್ವನಿ ಶಕ್ತಿ ಬಾಲು ಅವರದ್ದು. ಅವರ ಧ್ವನಿಯ ಮೋಡಿ ಎಂ.ಜಿ. ಆರ್, ಶಿವಾಜಿ ಗಣೇಶನ್, ಎನ್ ಟಿ ರಾಮರಾವ್, ರಾಜ್ ಕುಮಾರ್, ಅಕ್ಕಿನೇನಿ ಅಂತಹ ಹಿರಿಯರಿಗೆ ಕೂಡಾ ಆಗಾಗ ಇಣುಕಿತ್ತು.

ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಡಿದ್ದು 40 ಸಾವಿರಕ್ಕೂ ಹೆಚ್ಚು ಹಾಡುಗಳು

ಹಿಂದಿಯಲ್ಲಿ ಏಕ್ ದೂಜೇ ಕೆ ಲಿಯೇ ಬಂದಾಗ ಬಾಲು ಹಿಂದಿ ಚಿತ್ರರಂಗವನ್ನೂ ತಮ್ಮ ಮೋಡಿಗೆ ಸೆಳೆದುಕೊಂಡರು. ಸಾಜನ್, ಮೈ ನೇ ಪ್ಯಾರ್ ಕಿಯಾ ಮುಂತಾದ ಚಿತ್ರಗಳು ಬಂದಾಗ ರಫಿ, ಕಿಶೋರ್ ಅವರನ್ನು ಕಳೆದುಕೊಂಡು ಕಂಗಾಲಾಗಿದ್ದ ಹಿಂದಿ ಚಿತ್ರರಂಗಕ್ಕೆ ಬಾಲು ಬೆನ್ನೆಲುಬಾಗಿದ್ದರು.

ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ. ಎಸ್ ಪಿ ಬಿ ಅವರು ಹಾಡಿರುವ ಹಾಡುಗಳ ಸಂಖ್ಯೆ 40,000ಕ್ಕೂ ಹೆಚ್ಚು.

ವಿವಿಧ ಭಾಷೆಗಳ ಪರಿಧಿಯಲ್ಲಿ ಇಷ್ಟೊಂದು ಗೀತೆಗಳನ್ನು ಹಾಡಿರುವವರು ಇವರೊಬ್ಬರೇ. ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಕಂಠದಾನ ಕಲಾವಿದರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ. ಅವರ ಒಟ್ಟಾರೆ ಪ್ರಮುಖ ಸಾಧನೆಗಳನ್ನು ಹೇಳುವುದಾದರೆ ಅದು ಅಪರಿಮಿತವಾದುದು.

ಪ್ರಶಸ್ತಿ ಗೌರವ ಮತ್ತು ಪುರಸ್ಕಾರಗಳು

  1. ವಿವಿಧ ಭಾಷೆಗಳ ಪರಿಧಿಯಲ್ಲಿ 40,000ಕ್ಕೂ ಹೆಚ್ಚು ಹಾಡುಗಳು
  2. ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು
  3. ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು
  4. 25 ಬಾರಿ ಆಂಧ್ರಪ್ರದೇಶ ಸರ್ಕಾರದ ‘ನಂದಿ’ ಪ್ರಶಸ್ತಿ.
  5. 4 ಭಾಷೆಗಳಿಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಏಕೈಕ ವ್ಯಕ್ತಿ.
  6. ಹಲವು ವಿಶ್ವ ವಿದ್ಯಾಲಯಗಳ ಡಾಕ್ಟರೇಟ್

ದೂರದರ್ಶನದಲ್ಲಿ ಒಂದು ದಶಕದಿಂದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವಂತೆ, ಇತರ ಭಾಷೆಗಳಲ್ಲೂ ಅಂತದೇ ಕಾರ್ಯಕ್ರಮಗಳನ್ನು ಬಾಲು ನಡೆಸುತ್ತಿದ್ದಾರೆ. ಅವರು ಪುಟ್ಟ ಮಕ್ಕಳಿಂದ ಹಿಡಿದು ಸಂಗೀತದ ದಿಗ್ಗಜಗಳವರೆಗೆ ಹಿರಿಯರು ಕಿರಿಯರು ಎಲ್ಲರನ್ನೂ ಗೌರವಪೂರ್ಣವಾಗಿ ನಡೆಸಿಕೊಳ್ಳುವುದನ್ನು ಕಾಣುವುದೇ ಒಂದು ಚೆಂದ ಎಂಬುದು ಅವರ ಅಭಿಮಾನಿ ವೀಕ್ಷಕರುಗಳಗಳ ನುಡಿ. ಈ ಎಲ್ಲ ನಿಟ್ಟಿನಲ್ಲಿ ಬಾಲು ಒಬ್ಬ ನೈಜ ಸಾಂಸ್ಕೃತಿಕ ರಾಯಭಾರಿ.

ಹೀಗೆ ಅಮೋಘ ಸಾಧನೆ ಗೈತ ಮೇರು ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ, ಇನ್ನಿಲ್ಲವಾಗಿದ್ದಾರೆ. ಈ ಮೂಲಕ ಬಹುಭಾಷಾ ಗಾಯಕ ನಮ್ಮನ್ನು ಅಗಲಿದ್ದು, ತುಂಬಲಾರದ ನಷ್ಟವೇ ಸರಿ.

-ವಸಂತ ಬಿ ಈಶ್ವರಗೆರೆ

State

ಚೆನ್ನೈ : ಆಗಸ್ಟ್ 5ರಿಂದ ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಅವರು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಬಹುಭಾಷಾ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲವಾಗಿದ್ದಾರೆ.

ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ಗಾಯಕರಾಗಿ ಗುರ್ತಿಸಿಕೊಂಡಿದ್ದಂತ ಮೇರು ಗಾಯಕ. ಇಂತಹ ಗಾಯಕ ಇಂದು ನಮ್ಮನ್ನು ಅಗಲಿದ್ದಾರೆ. ಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ. ಆದ್ರೇ ಅವರ ಸಾಧನೆ, ಹಾಡಿದ ಹಾಡುಗಳ ಮೂಲಕ ಇನ್ನೂ ಜೀವಂತವಾಗಿದ್ದಾರೆ. ಇಂತಹ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಜೀವನ ಚೈತ್ರದ ಬಗ್ಗೆ ಮುಂದೆ ಓದಿ..

ಚೆನ್ನೈ : ಕೊರೋನಾ ಸೋಂಕಿನಿಂದಾಗಿ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಎಂಜಿಎಂ ಆಸ್ಪತ್ರೆಗೆ ಗಣ್ಯಾತಿ ಗಣ್ಯರು, ಎಸ್ ಪಿ ಬಿ ಕುಟುಂಬಸ್ಥರ ದಂಡೇ ಆಗಮಿಸುತ್ತಿದೆ. ಈ ಕಾರಣದಿಂದಾಗಿ ಎಂಜಿಎಂ ಆಸ್ಪತ್ರೆಯ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

BREAKING : ಗಾಯಕ ‘ಎಸ್ ಪಿ ಬಾಲಸುಬ್ರಹ್ಮಣ್ಯಂ’ ಆರೋಗ್ಯ ಸ್ಥಿತಿ ಚಿಂತಾಜನಕ

ಆಗಸ್ಟ್ 5ರಂದು ಕೊರೋನಾ ಸೋಂಕಿನಿಂದಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಕುರಿತಂತೆ ಕೆಲವೇ ಕ್ಷಣಗಳಲ್ಲಿ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಕೂಡ ಬಿಡುಗಡೆ ಮಾಡಲಿದೆ.

ದೇಶದಲ್ಲಿ ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 47 ಲಕ್ಷಕ್ಕೆ ಏರಿಕೆ

ಇದರ ಮಧ್ಯೆ ಎಸ್ ಪಿ ಬಿ ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿರುವ ಹಿನ್ನಲೆಯಲ್ಲಿ, ಆಸ್ಪತ್ರೆಗೆ ಎಸ್ ಪಿ ಬಿ ಪತ್ನಿ ಸಾವಿತ್ರಿ, ಪುತ್ರ ಚರಣ್, ಸಹೋದರಿ ಶೈಲಜಾ ಆಸ್ಪತ್ರೆಗೆ ಧಾವಿಸಿದ್ದಾರೆ. ಅಲ್ಲದೇ ಗಣ್ಯಾತಿ ಗಣ್ಯರು, ಕುಟುಂಬಸ್ಥರ ದಂಡೇ ಆಗಮಿಸುತ್ತಿದೆ. ಈ ಹಿನ್ನಲೆಯಲ್ಲಿ ಎಂಜಿಎಂ ಆಸ್ಪತ್ರೆಯ ಮುಂದೆ ಬಿಗಿ ಪೊಲೀಸ್ ಬಂಧೋಬಸ್ತ್ ಕೈಗೊಳ್ಳಲಾಗಿದೆ.

India

ಚೆನ್ನೈ : ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಕೊರೋನಾ ಸೋಂಕಿನಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ, ಇದೀಗ ಚಿಂತಾಜನಕವಾಗಿದೆ. ಎಂಜಿಎಂ ಆಸ್ಪತ್ರೆಯಿಂದ ಕೆಲಸವೇ ಕ್ಷಣಗಳಲ್ಲಿ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಕುರಿತಂತೆ ಹೆಲ್ತ್ ಬುಲೆಟಿನ್ ಕೂಡ ಬಿಡುಗಡೆ ಆಗಲಿದೆ.

ರೈತರ ಪ್ರತಿಭಟನೆ ಹಿನ್ನೆಲೆ : ಬೆಂಗಳೂರು ವಿವಿ ಸ್ನಾತಕ ಪರೀಕ್ಷೆ ಮುಂದೂಡಿಕೆ

ಚೆನ್ನೈನ ಎಂಟಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ, ಮತ್ತಷ್ಟು ಗಂಭೀರವಾಗಿದೆ. ಈ ಹಿನ್ನಲೆಯಲ್ಲಿ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪತ್ನಿ ಸಾವಿತ್ರಿ, ಪುತ್ರ ಚರಣ್, ಸಹೋದರಿ ಶೈಲಜಾ ಧಾವಿಸಿದ್ದಾರೆ. ಅಲ್ಲದೇ ಅನೇಕ ಗಣ್ಯಾತಿ ಗಣ್ಯರು ಎಂಜಿಎಂ ಆಸ್ಪತ್ರೆಗೆ ಧಾವಿಸಿದ್ದಾರೆ.

ಕಾಂಗ್ರೆಸ್ ನಾಯಕರು 6 ತಿಂಗಳಿಗೊಮ್ಮೆ ಅವಿಶ್ವಾಸ ನಿರ್ಣಯ ಮಂಡಿಸಲಿ : ಸಿಎಂ ಬಿಎಸ್ ವೈ

ಮುಂಜಾಗ್ರತಾ ಕ್ರಮವಾಗಿ ಎಂಜಿಎಂ ಆಸ್ಪತ್ರೆಯ ಬಳಿ ಪೊಲೀಸ್ ಬಿಗಿ ಬಂಧೋಬಸ್ತ್ ಕೈಗೊಳ್ಳಲಾಗಿದ್ದು, ಎಂಜಿಎಂ ಆಸ್ಪತ್ರೆಯಿಂದ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಬಗ್ಗೆ ಬಿಡುಗಡೆ ಮಾಡಲಿರುವಂತ ಹೆಲ್ತ್ ಬುಲೆಟಿನ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.