karnataka politics – Page 2 – Kannada News Now




State

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಣ್ಣ, ಅತಿ ಸಣ್ಣ ರೈತರಿಗೆ ಹಾಗೂ ಎಪಿಎಲ್, ಬಿಪಿಎಲ್ ಕುಟುಂಬಗಳಿಗೆ ಮಹತ್ವದ ಅನುದಾನಗಳು ದೊರೆಯುತ್ತಿವೆ. ಆದ್ರೇ ಬಹುತೇಕರಿಗೆ ಇದರ ಬಗ್ಗೆ ಗೊತ್ತೇ ಇಲ್ಲ. ದನದ ಕೊಟ್ಟಿಗೆ, ಕೊಳವೆ ಬಾವಿ ಮರುಪೂರಣ ಘಟಕ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಅನುದಾನ ನೀಡಲಿದೆ. ಹಾಗಿದ್ದರೇ ಯಾವುದೆಲ್ಲಾ ಅನುದಾನ ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಣ್ಣ, ಅತೀ ಸಣ್ಣ ರೈತರಿಗೆ ಹಾಗೂ ಎಪಿಎಲ್, ಬಿಪಿಎಲ್ ಕಾರ್ಡ್ ಕುಟುಂಬಗಳಿಗೆ ಏನ್ ಎಲ್ಲಾ ಸಿಗಲಿದೆ ಎನ್ನುವ ಬಗ್ಗೆ ಮುಂದೆ ಓದಿ..

‘ದ್ವಿತೀಯ ಪಿಯು ಅನುತ್ತೀರ್ಣ ವಿದ್ಯಾರ್ಥಿ’ಗಳೇ ಗಮನಿಸಿ : ‘2021ರ ವಾರ್ಷಿಕ ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಾಗರ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಹೆಚ್.ಹಾಲಪ್ಪ ಅವರು, ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾ.ಪಂ ವ್ಯಾಪ್ತಿಯ ಸಣ್ಣ/ಅತಿಸಣ್ಣ ರೈತರಿಗೆ ಹಾಗೂ APL/BPL ಕುಟುಂಬಗಳಿಗೆ ಈ ಕೆಳಕಂಡ ಅನುದಾನಗಳು ದೊರೆಯುತ್ತವೆ. ಸಾರ್ವಜನಿಕರು ಈ ಯೋಜನೆಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕಾಗಿ ವಿನಂತಿ ಮಾಡಿದ್ದಾರೆ.

‘ಪಿಯು ಉಪನ್ಯಾಸಕ’ರಿಗೂ ‘ಮಧ್ಯಂತರ ರಜೆ’ ಘೋಷಿಸಿ : ಸಿಎಂಗೆ ಮಾಜಿ ಪರಿಷತ್ ಸದಸ್ಯ ‘ರಮೇಶ್ ಬಾಬು ಪತ್ರ’

ಯಾವ ಯೋಜನೆಗೆ ಎಷ್ಟು ಅನುದಾನ ದೊರೆಯಲಿದೆ ಎನ್ನುವ ಬಗ್ಗೆ ಈ ಕೆಳಗಿನ ಚಾರ್ಟ್ ನಲ್ಲಿ ಗಮನಿಸಿ



State

ಬೆಂಗಳೂರು : ತಮ್ಮ ಬಳಿಯಿದ್ದಂತ ಆರೋಗ್ಯ ಖಾತೆ, ಹಿಂದುಳಿದ ವರ್ಗಗಳ ಖಾತೆಗಳನ್ನು ಬದಲಾಯಿಸಿ, ಸಮಾಜ ಕಲ್ಯಾಣ ಸಚಿವರ ಖಾತೆ ನೀಡಿರುವುದಕ್ಕೆ, ಸಚಿವ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಇದೇ ಅಸಮಾಧಾನದಿಂದಾಗಿ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ವಿಷಯ ತಿಳಿದಂತ ಬಿಜೆಪಿ ಹೈಕಮಾಂಡ್, ಸಚಿವ ಶ್ರೀರಾಮುಲುಗೆ ಕರೆ ಮಾಡಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬೇಡಿ. ಬರುವುದಿದ್ದರೇ ದಿಲ್ಲಿಗೆ ಬನ್ನಿ ಎಂಬುದಾಗಿ ತಿಳಿಸಿದೆ ಎನ್ನಲಾಗಿದೆ.

ಬಿಗ್ ನ್ಯೂಸ್ : ರಾಜ್ಯಾಧ್ಯಂತ ‘ಮುಂದಿನ 3 ದಿನ’ ಭಾರೀ ಮಳೆ : ಕರಾವಳಿಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮೂವರು ಸಚಿವ ಖಾತೆಯನ್ನು ಬದಲಾವಣೆ ಮಾಡಿದ್ದರು. ಸಚಿವ ಶ್ರೀರಾಮುಲು ಅವರ ಬಳಿಯಿದ್ದಂತ ಆರೋಗ್ಯ ಮತ್ತು ಹಿಂದುಳಿದ ಕಲ್ಯಾಣ ಇಲಾಖೆಯ ಖಾತೆಯನ್ನು ಬದಲಾವಣೆ ಮಾಡಿ, ಸಮಾಜ ಕಲ್ಯಾಣ ಇಲಾಖೆಯ ಖಾತೆ ನೀಡಿದ್ದರು. ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಬಿ.ಶ್ರೀರಾಮುಲು ಅವರಿಗೆ ನೀಡಿದ್ದರು. ಇದರಿಂದ ಬೇಸರಗೊಂಡ ಶ್ರೀರಾಮುಲು ಸಿಎಂ ಭೇಟಿ ಮಾಡಿ, ರಾಜೀನಾಮೆ ನೀಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದರು ಎನ್ನಲಾಗಿದೆ.

‘ದ್ವಿತೀಯ ಪಿಯು ಅನುತ್ತೀರ್ಣ ವಿದ್ಯಾರ್ಥಿ’ಗಳೇ ಗಮನಿಸಿ : ‘2021ರ ವಾರ್ಷಿಕ ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ

ಈ ಕುರಿತಂತೆ ದೆಹಲಿ ನಾಯಕರು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಖಾತೆಯನ್ನು ಒಬ್ಬರಿಗೆ ಕೊಡುವಂತೆ ಸೂಚಿಸಿದ್ದೆವು. ಆದ್ರೇ ಶ್ರೀರಾಮುಲು ಬಳಿಯ ಇದ್ದಂತ ಹಿಂದುಳಿದ ವರ್ಗಗಳ ಖಾತೆಯನ್ನು ಹಿಂಪಡೆದ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರಂತೆ. ನನಗೆ ಡಿಸಿಎಂ ಹುದ್ದೆ ಕೊಡುವುದಾಗಿ ಭರವಸೆ ನೀಡಲಾಗಿತ್ತು. ಅದನ್ನೂ ನೀಡಿಲ್ಲ. ನನಗೆ ಸಚಿವ ಸ್ಥಾನ ಬೇಡ. ಪಕ್ಷದ ಜವಾಬ್ದಾರಿ ಕೊಡಿ.. ಅದನ್ನು ನಡೆಸಿಕೊಂಡು ಹೋಗುವುದಾಗಿ ಅಸಮಾಧನವನ್ನು ದಿಲ್ಲಿ ವರಿಷ್ಠರೊಂದಿಗೆ ಹೊರಹಾಕಿದ್ದಾರೆ ಎನ್ನಲಾಗಿದೆ.

‘ಪಿಯು ಉಪನ್ಯಾಸಕ’ರಿಗೂ ‘ಮಧ್ಯಂತರ ರಜೆ’ ಘೋಷಿಸಿ : ಸಿಎಂಗೆ ಮಾಜಿ ಪರಿಷತ್ ಸದಸ್ಯ ‘ರಮೇಶ್ ಬಾಬು ಪತ್ರ’

ಇದರಿಂದಾಗಿ ದಿಲ್ಲಿ ನಾಯಕರು ಇದು ಉಪ ಚುನಾವಣೆಯ ಸಮಯ, ನೀವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರೇ.. ಉಪ ಚುನಾವಣೆಯಲ್ಲಿ ತಪ್ಪು ಸಂದೇಶ ಹೋಗುತ್ತದೆ. ನಿಮಗೆ ನೀಡಲಾಗಿರುವ ಎಲ್ಲಾ ಭರವಸೆಗಳ ಬಗ್ಗೆ ವರಿಷ್ಠರಿಗೆ ಗೊತ್ತಿದೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ. ಸಿಎಂ ಯಡಿಯೂರಪ್ಪ ಕೊಟ್ಟಿರುವ ಹೊಣೆಗಾರಿಕೆ ನಿಭಾಯಿಸಿ. ಇಲ್ಲವಾದಲ್ಲಿ ದಿಲ್ಲಿಗೆ ಬನ್ನಿ. ನಿಮಗೆ ಯಾವಾಗ ಅಪಾಯಿಂಟ್ ಮೆಂಟ್ ಬೇಕು ತಿಳಿಸಿ. ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಆದ್ರೇ ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬೇಡ ಎಂಬುದಾಗಿ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಸದ್ಯದಲ್ಲಿಯೇ ಅಸಮಾಧನಗೊಂಡಿರುವ ಶ್ರೀರಾಮುಲು ದಿಲ್ಲಿಗೆ ದೌಡಾಯಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ.

ರಾಜ್ಯದ ‘ಗ್ರಾಮ ಪಂಚಾಯ್ತಿ’ ವ್ಯಾಪ್ತಿಯ ‘ಸಣ್ಣ, ಅತಿ ಸಣ್ಣ ರೈತ’ರಿಗೆ ಬಹುಮುಖ್ಯ ಮಾಹಿತಿ



State

ಬೆಂಗಳೂರು : ಡಿಸಿಎಂ ಹುದ್ದೆ ಸಿಗಲಿ ಎಂಬುದಾಗಿ ದೇವರಲ್ಲಿ ಪೂಜಿಸಿಕೊಂಡು ಬಂದಿದ್ದಂತ ಸಚಿವ ಶ್ರೀರಾಮುಲುಗೆ ಡಿಸಿಎಂ ಹುದ್ದೆಯೂ ಸಿಗಲಿಲ್ಲ. ತಮ್ಮ ಬಳಿಯಿದ್ದಂತ ಆರೋಗ್ಯ ಸಚಿವ ಖಾತೆಯನ್ನು ಬದಲಾವಣೆ ಮಾಡಿ, ಮತ್ತೊಬ್ಬರಿಗೆ ನೀಡಲಾಗಿತ್ತು. ಈ ಮೂಲಕ ಸಚಿವ ಶ್ರೀರಾಮುಲುಗೆ ಡಬ್ ಶಾಕ್ ಆಗಿತ್ತು. ಇದೇ ಕಾರಣದಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದಂತ ಸಚಿವ ಬಿ ಶ್ರೀರಾಮುಲು ಅಸಮಾಧಾನದಿಂದ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೊಂಡಿದ್ದಾರೆ.

BIGG NEWS : ರಾಜ್ಯದ ‘ಮೂವರು ಸಚಿವರ’ ಖಾತೆಗಳ ಬದಲಾವಣೆ : ರಾಜ್ಯಪಾಲರಿಂದ ಖಾತೆ ಬದಲಾವಣೆಗೆ ಅಂಕಿತ

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟದ ಮೂವರು ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಿದ್ದರು. ಇಂತಹ ಖಾತೆ ಬದಲಾವಣೆ ಆದೇಶಕ್ಕೆ ರಾಜ್ಯಪಾಲರು ಸಹ ಅಂಕಿತ ಸೂಚಿಸಿದ್ದರು. ಇದರ ಬೆನ್ನಲ್ಲೇ ಅಸಮಾಧಾನಗೊಂಡಂತ ಸಚಿವ ಬಿ ಶ್ರೀರಾಮುಲು ಅವರು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು.

BIG BREAKING : ಕೊರೋನಾದಿಂದ ಸಿಇಟಿ ತಪ್ಪಿಸಿಕೊಂಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸುಪ್ರೀಂ ಕೋರ್ಟ್ ನಿಂದ ಅ.14ರಂದು NEET ಪರೀಕ್ಷೆ ಗೆ ಅವಕಾಶ

ದಿಢೀರ್ ಖಾತೆ ಬದಲಾವಣೆಯ ಬಗ್ಗೆ ಸಿಎಂ ಯಡಿಯೂರಪ್ಪ ಅವರ ಮುಂದೆ ಬೇಸರ ವ್ಯಕ್ತ ಪಡಿಸಿದಂತ ಅವರು, ಆರೋಗ್ಯ ಖಾತೆಯೂ ಹೋಯ್ತು, ಹಿಂದುಳಿದ ಖಾತೆಯೂ ಹೋಯ್ತು.. ಡಿಸಿಎಂ ಹುದ್ದೆಯ ನಿರೀಕ್ಷೆಯಲ್ಲಿದ್ದ ತಮಗೆ ಅದನ್ನು ನೀಡಲಿಲ್ಲ ಎಂಬುದಾಗಿ ಬೇಸ ವ್ಯಕ್ತ ಪಡಿಸಿದ್ದಾರಂತೆ. ಅಲ್ಲದೇ ಆರೋಗ್ಯ ಸಚಿವ ಸ್ಥಾನದ ಬದಲಾಗಿ ಸಮಾಜ ಕಲ್ಯಾಣ ಸಚಿವ ಸ್ಥಾನ ನೀಡಿದ್ದಕ್ಕೂ ಬೇಸರ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ತಮಗೆ ಖಾತೆ ಬದಲಾವಣೆಯಿಂದ ಬೇಸವಾಗಿದ್ದು, ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಶ್ರೀರಾಮುಲು ಅವರನ್ನು ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.



State

ಬೆಂಗಳೂರು : ಪದೇ ಪದೇ ವೈದ್ಯಕೀಯ ಹಾಗೂ ಆರೋಗ್ಯ ಸಚಿವರ ಖಾತೆಗಳ ನಡುವೆ ಕ್ಲಾಶ್ ಆಗ್ತಾ ಇದೆ. ಈ ಎರಡು ಖಾತೆಗಳನ್ನು ಒಬ್ಬರಿಗೆ ನೀಡಿದ್ರೆ ಉತ್ತಮ ಎನ್ನುವ ಕಾರಣಕ್ಕಾಗಿ ಸಿಎ ಯಡಿಯೂರಪ್ಪ ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆ ಜೊತೆಗೆ ಶ್ರೀರಾಮುಲು ಬಳಿಯಿದ್ದಂತ ಆರೋಗ್ಯ ಖಾತೆಯ ಹೆಚ್ಚುವರಿ ಹೊಣೆಗಾರಿಕೆ ನೀಡುತ್ತಿದ್ದಾರೆ ಎನ್ನಲಾಗುತ್ತಿತ್ತು. ಹೀಗೆ ಖಾತೆ ಬದಲಾವಣೆಯ ಬೆನ್ನಲ್ಲಿಯೇ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಸ್ವತಹ ಸಚಿವ ಶ್ರೀರಾಮುಲು ಅವರೇ ಸಿಡಿದೆದ್ದಿದ್ದಾರೆ ಎನ್ನಲಾಗಿದೆ.

`DCM’ ಸ್ಥಾನದ ನಿರೀಕ್ಷೆಯಲ್ಲಿದ್ದ ಶ್ರೀರಾಮುಲುಗೆ ಬಿಗ್ ಶಾಕ್!

ಈ ಕುರಿತಂತೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವಂತ ಸಚಿವ ಶ್ರೀರಾಮುಲು, ಈ ಸಂದರ್ಭದಲ್ಲಿ ಖಾತೆ ಬದಲಾವಣೆ ಮಾಡಿದ್ದು ಸರಿಯಲ್ಲ. ಸಂಪುಟ ಪುನರ್ ರಚನೆಯ ವೇಳೆಯಲ್ಲಿ ಖಾತೆ ಬದಲಾವಣೆ ಮಾಡಿದ್ದರೇ ಸರಿ ಇರುತ್ತಾ ಇತ್ತು. ಹೀಗೆ ದಿಢೀರ್ ನನ್ನ ಖಾತೆಯನ್ನು ಬದಲಾವಣೆ ಮಾಡಿದ್ರೇ ನಾನೇನು ಕೆಲಸ ಮಾಡಿಲ್ಲ ಎಂಬಂತ ಸಂದೇಶ ಜನರಿಗೆ ಹೋಗುತ್ತದೆ ಎಂಬುದಾಗಿ ಬೇಸರ ವ್ಯಕ್ತ ಪಡಿಸಿದ್ದಾರೆ.

Breaking: ಪವರ್ ಗ್ರಿಡ್ ವೈಫಲ್ಯ ಕತ್ತಲೆಯಲ್ಲಿ ’ಮುಂಬೈ’-ಬ್ಯಾಂಕ್‌, ಆಸ್ಪತ್ರೆ, ಸೇರಿದಂತೆ ಇತರೆ ಸೇವೆಗಳು ಅಸ್ತವ್ಯಸ್ತ, ಜನತೆ ಪರದಾಟ

ಸಿಎಂ ದಿಢೀರ್ ಖಾತೆ ಬದಲಾವಣೆ ಮಾಡಿದ್ದರ ಬಗ್ಗೆ ಗಮನಕ್ಕೆ ಬಂದಿಲ್ಲ. ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದೇನೆ. ಈ ಬಗ್ಗೆ ಚರ್ಚೆ ಕೂಡ ನಡೆಸಲಿದ್ದೇನೆ ಎಂಬುದಾಗಿ ತಿಳಿಸುವ ಮೂಲಕ, ತಮ್ಮ ಖಾತೆ ಬದಲಾವಣೆಯ ಬಗ್ಗೆ ಸಚಿವ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ.



State

ಬೆಂಗಳೂರು : ಅಕ್ಟೋಬರ್ 14ರಂದು ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಕುಸುಮಾ ಹೆಚ್ ಹಾಗೂ ಶಿರಾ ಉಪ ಚುನಾವಣೆಗೆ ಅಕ್ಯೋಬರ್ 15ರಂದು ನಾಮಪತ್ರ ಸಲ್ಲಿಸಿರುವಂತ ಮಾಜಿ ಸಚಿವ ಟಿಬಿ ಜಯಚಂದ್ರ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು ಬಿ ಫಾರಂ ವಿತರಣೆ ಮಾಡಿದರು.

ಸಿದ್ದರಾಮಯ್ಯ ‘ಶತಮಾನದ ಮಹಾ ಸುಳ್ಳುಗಾರ’ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಕೆಪಿಸಿಸಿ ಕಚೇರಿಯಲ್ಲಿ ಉಪ ಚುನಾವಣೆಯ ಕೈ ಹುರಿಯಾಳುಗಳಾದಂತ ಟಿಬಿ ಜಯಚಂದ್ರ ಹಾಗೂ ಕುಸುಮಾ ಹೆಚ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬಿ ಫಾರಂ ವಿತರಣೆ ಮಾಡಿದರು.

ಕಾಂಗ್ರೆಸ್ ನಿಂದ ಉಪ ಚುನಾವಣೆಯ ಗೆಲುವಿಗೆ ಮಾಸ್ಟರ್ ಫ್ಲಾನ್ : ಪ್ರತಿ ವಾರ್ಡ್, ಪಂಚಾಯ್ತಿಗೆ ಒಬ್ಬೊಬ್ಬ ಶಾಸಕರು, ನಾಯಕರ ನೇಮಕ

ಈ ಬಳಿಕ ಮಾತನಾಡಿದ ಅವರು, ‘ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರತಿ ವಾರ್ಡ್ ಹಾಗೂ ಪಂಚಾಯ್ತಿಗೆ ಒಬ್ಬೊಬ್ಬ ಶಾಸಕ, ಎಂಎಲ್ ಸಿ, ಹಿರಿಯ ನಾಯಕರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

‘ಒಂದು ಪ್ಲೇಟ್ ಬಿರಿಯಾನಿ’ಗಾಗಿ ಒಂದೂವರೆ ‘ಕಿಲೋಮೀಟರ್ ಕ್ಯೂ’ ನಿಂತ ಜನರು



State

ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ ಈ ‘ಶತಮಾನದ ಮಹಾ ಸುಳ್ಳುಗಾರ’ ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಿಂದ ಉಪ ಚುನಾವಣೆಯ ಗೆಲುವಿಗೆ ಮಾಸ್ಟರ್ ಫ್ಲಾನ್ : ಪ್ರತಿ ವಾರ್ಡ್, ಪಂಚಾಯ್ತಿಗೆ ಒಬ್ಬೊಬ್ಬ ಶಾಸಕರು, ನಾಯಕರ ನೇಮಕ

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಅವರು, ಕಳೆದ ಶತಮಾನದಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಅಂಟಿದ್ದ ‘ಮಹಾನ್ ಸುಳ್ಳುಗಾರ’ ಎಂಬ ಕಳಂಕವನ್ನು ತಾನಾಗಿಯೇ ಕಸಿದುಕೊಂಡಿರುವ ಸಿದ್ದರಾಮಯ್ಯ ಈ ಶತಮಾನದ ಮಹಾನ್ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದ್ದಾರೆ.

ಮಂಡ್ಯದ ಮೂಲಕ ಇಂಡಿಯಾ ಹಿಡಿಯುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸಿಗರು ಅನ್ನದಾತನ ಅಸ್ತ್ರ ಬಳಸಿದರೆ ಮಂಡ್ಯದ ಮಣ್ಣಿನ ಮಕ್ಕಳು ತಕ್ಕ ಪಾಠ ಕಲಿಸಲಿದ್ದಾರೆ. ಅನ್ನದಾತರ ಬಗೆಗಿನ ಬದ್ಧತೆ ಬಗ್ಗೆ ನಿಮ್ಮೆಲ್ಲರಿಗಿಂತ ಹೆಚ್ಚಿನ ಕರುಳಬಳ್ಳಿಯ ಸಂಬಂಧ ಜೆಡಿಎಸ್ ಗಿದೆ ಎಂದಿದ್ದಾರೆ.

ಜೆಡಿಎಸ್ ನೊಂದಿಗೆ ಯಾವುದೇ ಮಾತುಕತೆ ನಡೆಸದೆ ಸಿದ್ದರಾಮಯ್ಯ ಹಸಿ ಸುಳ್ಳು ಹೇಳುವ ಮೂಲಕ ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಎಲುಬಿಲ್ಲದ ನಾಲಿಗೆಯನ್ನು ಹರಿಯಬಿಟ್ಟು ನಗೆಪಾಟಲಿಗೆ ಈಡಾಗಿದ್ದಾರೆ. ಬಾಯಿ ಚಪಲಕ್ಕೆ ಸುಳ್ಳುಗಳನ್ನು ಹೇಳುವ ಚಾಳಿಯನ್ನು ಸಿದ್ದರಾಮಯ್ಯ ಇನ್ನಾದರೂ ಬಿಡಬೇಕು ಎಂದು ಆಗ್ರಹಿಸಿದ್ದಾರೆ.

ರೈತರ ಪರ ಕಾಳಜಿ, ಬದ್ಧತೆಯನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಂದ ಜೆಡಿಎಸ್ ಕಲಿಯಬೇಕಾದದ್ದು ಏನೂ ಇಲ್ಲ. ಸಂತೆ ಭಾಷಣ ಮಾಡುವ ಸಿದ್ದರಾಮಯ್ಯ ವಿದೂಷಕನಂತೆ ಜೆಡಿಎಸ್ ವಿರುದ್ಧ ಹರಿಹಾಯುತ್ತಿರುವುದು ಪ್ರತಿ ಪಕ್ಷದ ನಾಯಕನಿಗೆ ಭೂಷಣವಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಕಾಲದಲ್ಲಿ ಮಾಡಿದ ಸಾಲ ಮನ್ನಾ ದಲ್ಲಿ ಲೋಪದೋಷಗಳು ಇದ್ದವು. ಪತ್ರಕರ್ತರ ಪ್ರಶ್ನೆಗೆ ನಾನು ಪ್ರತಿಕ್ರಿಯಿಸಿದ್ದೆ. ನಾನು ಮಾಡಿದ 25 ಸಾವಿರ ಕೋಟಿ ರೂಪಾಯಿಗಳ ಸಾಲಮನ್ನಾದಲ್ಲಿ ಇಂತಹ ಅನ್ಯಾಯಗಳನ್ನು ಸರಿಪಡಿಸಿದ್ದೆ. ಇದರಲ್ಲಿ ಹುಳುಕು ಹುಡುಕುವ ಕಾಂಗ್ರೆಸ್ ನಾಯಕರು ಅನ್ನದಾತನಿಗೆ ಮಂಕು ಬೂದಿ ಎರಚಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಚುನಾವಣೆ ಬಂದಾಗ ಜಾತಿ ಕಾರ್ಡ್ ಪ್ಲೇ ಮಾಡುತ್ತೇನೆ ಎಂದು ಮೂದಲಿಸುವ ಸಿದ್ದರಾಮಯ್ಯ ‘ಅಹಿಂದ’ ರಾಮಯ್ಯ ಆಗಿದ್ದು ಏಕೆ? ನಕಲಿ ಸಮಾಜವಾದಿಯ ‘ಅಹಿಂದ ‘ಮುಖವಾಡ ಇಡೀ ನಾಡಿಗೆ ಗೊತ್ತಿದೆ ಎಂಬುದಾಗಿ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಹಬ್ಬಕ್ಕೆ ತಂದ ಹರಕೆಯ ಕುರಿ, ತೋರಣಕ್ಕೆ ತಂದ ತಳಿರ ಮೇಯಿತು. ಕೊಂದಹರೆಂಬುದನರಿಯದೆ, ಬೆಂದ ಒಡಲ ಹೊರೆವುತ್ತಲದೆ. ಅದಂದೆ ಹುಟ್ಟಿತ್ತು, ಅದಂದೆ ಹೊಂದಿತ್ತು. ಕೊಂದವರುಳಿವರೆ ಕೂಡಲಸಂಗಮದೇವಾ ಎಂಬುದಾಗಿ ಉದ್ಗರಿಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿಸುಳ್ಳು ಹೇಳುವ ಮೂಲಕ ಈ ‘ಶತಮಾನದ ಮಹಾ ಸುಳ್ಳುಗಾರ’ ಎಂದು ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.



State

ಬೆಂಗಳೂರು : ‘ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರತಿ ವಾರ್ಡ್ ಹಾಗೂ ಪಂಚಾಯ್ತಿಗೆ ಒಬ್ಬೊಬ್ಬ ಶಾಸಕ, ಎಂಎಲ್ ಸಿ, ಹಿರಿಯ ನಾಯಕರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಉಪ ಚುನಾವಣೆಯಲ್ಲಿ ಗೆಲುವಿಗಾಗಿ ಮಾಸ್ಟರ್ ಫ್ಲಾನ್ ಮಾಡಿದೆ.

‘ಒಂದು ಪ್ಲೇಟ್ ಬಿರಿಯಾನಿ’ಗಾಗಿ ಒಂದೂವರೆ ‘ಕಿಲೋಮೀಟರ್ ಕ್ಯೂ’ ನಿಂತ ಜನರು

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎರಡು ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಎರಡೂ ಕ್ಷೇತ್ರದ ಪ್ರತಿ ವಾರ್ಡ್ ಹಾಗೂ ಪಂಚಾಯ್ತಿಗೆ ನಾಯಕರ ನೇಮಕ ಮಾಡಲಾಗಿದೆ. ಕಾರ್ಯಕರ್ತರಿಗೂ ಬೂತ್ ಮಟ್ಟದ ಜವಾಬ್ದಾರಿ ನೀಡಲಾಗಿದೆ. ಅವರೆಲ್ಲರೂ ಸೇರಿ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಈ ಚಿತ್ರದಲ್ಲಿ ‘ಸುಂದರಿ’ಯೊಬ್ಬಳು ಅಡಗಿದ್ದಾಳೆ.. ಎಲ್ಲಿ ಅಂತ ಗುರ್ತಿಸುವಿರಾ.?

ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಸ್ತಾಪಿಸಿದಾಗ, ‘ಅವರು ಅನುಭವಸ್ಥರು ಹಾಗೂ ಹಿರಿಯರಿದ್ದಾರೆ. ಅವರ ಮಾತಿಗೆ ಪ್ರತಿಕ್ರಿಯಿಸುವುದಿಲ್ಲ. ಅವರಿಗೆ ಹೇಗೆ ಬೇಕೋ ಹಾಗೆ ಚುನಾವಣೆ ಮಾಡಲಿ’ ಎಂದರು.

BIGG NEWS : ಅ.30ರವರೆಗೆ ರಾಜ್ಯದ ಶಾಲಾ-ಕಾಲೇಜುಗಳಿಗೆ ‘ದಸರಾ ರಜೆ’ ಘೋಷಣೆ – ಸಿಎಂ ಯಡಿಯೂರಪ್ಪ

ಇನ್ನು ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ‘ನಾನು ಯಾರನ್ನೂ ನಿಂದಿಸಿಲ್ಲ. ನಿಂದಿಸುವುದೂ ಇಲ್ಲ. ನಾನು ಒಳ್ಳೆಯದು ಮಾಡಿದ್ದರೆ ದೇವರು ನನಗೆ ಒಳ್ಳೆಯದು ಮಾಡಲಿ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ನೀಡಲಿ. ಅದನ್ನು ಅನುಭವಿಸಲು ಸಿದ್ಧ’ ಎಂದು ಹೇಳಿದರು.



State

ಬೆಂಗಳೂರು : ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಸಿಎಂ ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಬಿಗ್ ನ್ಯೂಸ್ : ಅ.30ರವರೆಗೆ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ‘ಮಧ್ಯಂತರ ರಜೆ’ ಘೋಷಿಸಿ ‘ಸಾರ್ವಜನಿಕ ಶಿಕ್ಷಣ ಇಲಾಖೆ’ಯಿಂದ ಅಧಿಕೃತ ಆದೇಶ

ಈ ಕುರಿತಂತೆ ಟ್ವಿಟ್ ಮಾಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಸದಾ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮಗಳು ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದಿದ್ದಾರೆ.

ನರಜನ್ಮವ ತೊಡೆದು ಹರಜನ್ಮವ ಮಾಡಿದ ಗುರುವೆ ನಮೋ, ಭವಬಂಧನವ ಬಿಡಿಸಿ ಪರಮಸುಖವ ತೋರಿದ ಗುರುವೆ ನಮೋ, ಭವಿಯೆಂಬುದ ತೊಡೆದು ಭಕ್ತೆ ಎಂದೆನಿಸಿದ ಗುರುವೆ ನಮೋ, ಚೆನ್ನಮಲ್ಲಿಕಾರ್ಜುನನ ತಂದೆನ್ನ, ಕೈವಶಕ್ಕೆ ಕೊಟ್ಟ ಗುರುವೆ ನಮೋ ನಮೋ – ಅಕ್ಕಮಹಾದೇವಿ ಎಂಬುದಾಗಿ ಉದ್ಗರಿಸಿದ್ದಾರೆ.

ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ ಎಂದಿದ್ದಾರೆ.



State

ಬೆಂಗಳೂರು : ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

ಟ್ರಂಪ್‌ ಇನ್ನು ಮುಂದೆ ಕೋವಿಡ್ -19 ಹರಡೋದಿಲ್ಲ : ಅಮೇರಿಕಾದ ಶ್ವೇತಭವನದ ವೈದ್ಯರಿಂದ ಮಹತ್ವದ ಮಾಹಿತಿ

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.

ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂಬುದಾಗಿ ರಾಜ್ಯ ಸರ್ಕಾರ ಶಿಕ್ಷಕರ ಕುರಿತಂತೆ ನಡೆದುಕೊಳ್ಳುತ್ತಿರುವಂತ ನಡೆಯ ಬಗ್ಗೆ ಕಿಡಿಕಾರಿದ್ದಾರೆ.

ಕೊರೊನ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂಬುದಾಗಿ ಪ್ರಶ್ನಿಸಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

 



State

ಬೆಂಗಳೂರು : ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಅವರು, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.

ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ವರ್ಷದ ಅಕ್ಟೋಬರ್‌ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂಬುದಾಗಿ ರಾಜ್ಯ ಸರ್ಕಾರ ಶಿಕ್ಷಕರ ಕುರಿತಂತೆ ನಡೆದುಕೊಳ್ಳುತ್ತಿರುವಂತ ನಡೆಯ ಬಗ್ಗೆ ಕಿಡಿಕಾರಿದ್ದಾರೆ.

ಕೊರೊನ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂಬುದಾಗಿ ಪ್ರಶ್ನಿಸಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

error: Content is protected !!