ಬೆಂಗಳೂರು: ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಶುಕ್ರವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ನಿಗದಿತ ಸಮಯದೊಳಗೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಇತ್ಯರ್ಥಗೊಳಿ ಪ್ರಗತಿಯನ್ನು ಕಾಯ್ದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಈ ಸಭೆಯಲ್ಲಿ ಈ ಬಗ್ಗೆ ಗಮನ ಸೆಳೆದ ಅವರು “ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ ಇತ್ಯರ್ಥಕ್ಕೆ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಸರಾಸರಿ 7 ತಿಂಗಳಿಗಿಂತ ಹೆಚ್ಚು ಸಮಯ ವ್ಯಯವಾಗುತ್ತಿತ್ತು. ಕಳೆದ ಎರಡು ವರ್ಷಗಳಿಂದ ಸತತ ಪ್ರಯತ್ನದಿಂದ ಈ ಅವಧಿಯನ್ನು 64 ದಿನಕ್ಕೆ ಇಳಿಸಲಾಗಿತ್ತು. ಆದರೆ, ಇದೀಗ ಈ ಅವಧಿ ಮತ್ತೆ 73 ದಿನಕ್ಕೆ ಏರಿದೆ” ಎಂದರು.
ಮುಂದುವರೆದು, “ಕಂದಾಯ ಇಲಾಖೆಯಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ ಎಂಬ ಮಾತು ಜನರ ನಡುವಿನಿಂದಲೇ ಕೇಳಿಬರುತ್ತಿದೆ. ಆದರೆ, ಇಂತಹ ಸಂದರ್ಭದಲ್ಲಿ ಹಲವು ತಹಶೀಲ್ದಾರರು ಅವಧಿ ಮೀರಿಯೂ ಕೆಲ ಪ್ರಕರಣಗಳನ್ನು ವಿಲೇವಾರಿಗೊಳಿಸದಿರುವುದು ಕೆಟ್ಟ ಸಂದೇಶ ರವಾನಿಸುತ್ತದೆ. ನ್ಯಾಯಾಲಯಗಳಲ್ಲಿರುವ ಪ್ರಕರಣಗಳ ಇತ್ಯರ್ಥ ವಿಚಾರದಲ್ಲಿ ಪ್ರಗತಿ ಸಾಧಿಸಿ ಮತ್ತೆ ನಕಾರಾತ್ಮಕ ದಾರಿ ಹಿಡಿದಿರುವುದು ಸರಿಯಲ್ಲ. ಅಲ್ಲದೆ, ಈ ವಿಚಾರವಾಗಿ ಅಧಿಕಾರಿಗಳು ಪದೇ ಪದೇ ಹೇಳಿಸಿಕೊಳ್ಳುವುದು ಶೋಭೆ ತರುವುದಿಲ್ಲ” ಎಂದು ಅಭಿಪ್ರಾಯಪಟ್ಟರು.
ಮೋದಿ ಅವರೇ, ಹಿಂದೂಗಳಿಗೆ ‘ಯುಗಾದಿ ಕಿಟ್’ ಯಾವಾಗ ಕೊಡ್ತೀರಾ?: ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನೆ