ಹಾವೇರಿ : ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಇತ್ತೀಚಿಗೆ ಹಲವು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದೀಗ ಹಾವೇರಿಯಲ್ಲಿ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದು ಪೋಸ್ಟ್ ಬಾಕ್ಸ್ ನಲ್ಲಿ ಮಂಗಳಸರವನ್ನು ಪ್ಯಾಕ್ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳು ಎಂದು ಮನವಿ ಮಾಡಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ಹೌದು ಹಾವೇರಿಯಲ್ಲಿ ನೂರಾರು ಮಹಿಳೆಯರಿಂದ ವಿನೂತನ ಪ್ರತಿಭಟನೆ ನಡೆಸುತ್ತಿದ್ದು, ಮಾಂಗಲ್ಯ ಸರವನ್ನು ಉಳಿಸಿ ಎಂದು ಮಹಿಳೆಯರಿಂದ ವಿನೂತನ ಅಭಿಯಾನ ಆರಂಭವಾಗಿದೆ. ಹಾವೇರಿಯ ಅಂಚೆ ಕಚೇರಿಯ ಮುಂದೆ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಪೋಸ್ಟ್ ಡಬ್ಬಿಗೆ ಹಾಕಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಮಹಿಳೆಯರು ಇದೀಗ ಕಳುಹಿಸಿದ್ದಾರೆ.ಮೈಕ್ರೋ ಫೈನಾನ್ಸ್ ಸಿಬ್ಬಂದಿ ದಿನನಿತ್ಯ ಬಂದು ಕಿರುಕುಳ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳೆಯರು ಮನವಿ ಮಾಡಿದ್ದಾರೆ. ಅಲ್ಲದೆ ಜಿಲ್ಲಾಡಳಿತ ಮತ್ತು ಎಸ್ಪಿ ಕಚೇರಿಗೂ ಮಹಿಳೆಯರು ಮನವಿ ಸಲ್ಲಿಸಿದ್ದಾರೆ.