ಬೆಂಗಳೂರು: ಕಾವೇರಿ ನದಿ ನೀರಿಗೆ ಸಂಬಂಧಿಸಿ ರಾಜ್ಯ ಸರಕಾರವು ತನ್ನ ಸಮರ್ಥ ನಿಲುವನ್ನು ಕೋರ್ಟ್ ಮುಂದೆ ತಿಳಿಸಬೇಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದುಡ್ಡು ಹೊಡೆಯೋಕೆ, ಲೂಟಿ ಮಾಡಲು ಈ ಸರಕಾರ ಸಮಯ ಕಳೆಯುತ್ತಿದೆ. ಕಾವೇರಿ ನೀರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡಿಲ್ಲ ಎಂದು ಟೀಕಿಸಿದರು.
ಕೋರ್ಟ್, ಕಾವೇರಿ ಟ್ರಿಬ್ಯೂನಲ್‍ನಲ್ಲಿ ಪದೇಪದೇ ಹಿನ್ನಡೆ ಆಗುತ್ತಿದ್ದರೂ ಕೂಡ ಮುಖ್ಯಮಂತ್ರಿಗಳು ಸಭೆ ಕರೆದು ನಮ್ಮ ನಿಲುವನ್ನು ಕೋರ್ಟ್ ಮತ್ತು ಟ್ರಿಬ್ಯೂನಲ್‍ನಲ್ಲಿ ಮಂಡಿಸಲು ವ್ಯವಸ್ಥೆ ಮಾಡಿಲ್ಲ ಎಂದು ಆಕ್ಷೇಪಿಸಿದರು.
ಕಾವೇರಿ ಜಲಾನಯನ ಪ್ರದೇಶದ ರೈತರು ನಿರಂತರ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ರೈತರನ್ನು ಸರಕಾರ ಕಡೆಗಣಿಸುತ್ತಿದೆ ಎಂದು ತಿಳಿಸಿದ ಅವರು, ಈ ಬಗ್ಗೆ ಪ್ರಶ್ನಿಸಿದರೆ ದುರಹಂಕಾರದ ಮಾತನಾಡುತ್ತಾರೆ ಎಂದು ದೂರಿದರು.
ಶಾಸಕ ಹರೀಶ್ ಪೂಂಜ ಅವರ ಬಂಧನ ಪ್ರಯತ್ನ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ, ಹಿಂದೂ ಕಾರ್ಯಕರ್ತರ ಬಗೆಗಿನ ಸರಕಾರದ ಧೋರಣೆ ನಿಜಕ್ಕೂ ಅಕ್ಷಮ್ಯ. ಇದು ಖಂಡನೀಯ ಎಂದರಲ್ಲದೆ, ಇದೇಥರ ಮುಂದುವರೆದರೆ ಕಾಂಗ್ರೆಸ್ ಸರಕಾರ ಬಹಳ ದಿನ ಉಳಿಯುವುದಿಲ್ಲ ಎಂದೂ ಎಚ್ಚರಿಸಿದರು.
BREAKING: ಮಹಿಳೆ ಅಪಹರಣ ಕೇಸ್: ಎಸ್ಐಟಿ ಪೊಲೀಸರಿಂದ ‘ಭವಾನಿ ರೇವಣ್ಣ ಕಾರು ಚಾಲಕ’ನಿಗೆ ಸಮನ್ಸ್ ಜಾರಿ
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು