Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಲಮೂಲಗಳ ಅತಿಕ್ರಮಣಗಳನ್ನು ತೆರವುಗೊಳಿಸಲು ತ್ವರಿತ ಕ್ರಮ ಕೈಗೊಳ್ಳಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ
KARNATAKA

ಜಲಮೂಲಗಳ ಅತಿಕ್ರಮಣಗಳನ್ನು ತೆರವುಗೊಳಿಸಲು ತ್ವರಿತ ಕ್ರಮ ಕೈಗೊಳ್ಳಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಜಲಮೂಲಗಳ ಅತಿಕ್ರಮಣವನ್ನು ತೆರವುಗೊಳಿಸಲು ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ನಮ್ಮ ಜಲಾಶಯಗಳ ಸಂರಕ್ಷಣೆಯಿಂದ ಪರಿಸರ ಸಮತೋಲನವನ್ನು ಕಾಪಾಡಬಹುದು ಎಂದು ಸಚಿವರು ಹೇಳಿರುವರಲ್ಲದೆ, ಕೃಷಿ ಚಟುವಟಿಕೆಗಳನ್ನು ಬೆಂಬಲಿಸುವುದು ಹಾಗೂ ನಮ್ಮ ಸಮುದಾಯಗಳಿಗೆ ಜಲ ಭದ್ರತೆಯನ್ನು ಖಚಿತಪಡಿಸುವುದು ಆದ್ಯತೆಯ ಕ್ರಮವಾಗಬೇಕು ಎಂದು ತಿಳಿಸಿದ್ದಾರೆ.

ಗ್ರಾಮ ಪಂಚಾಯತಿ ವ್ಯಾಪ್ತಿಯ ಅನೇಕ ಜಲಾಶಯಗಳಲ್ಲಿ ಅತಿಕ್ರಮಣಗಳಾಗಿರುವ ಬಗ್ಗೆ ತಮಗೆ ಮಾಹಿತಿ ಬಂದಿದ್ದು ಈ ಗಂಭೀರ ವಿಷಯವನ್ನು ಗಮನದಲ್ಲಿಟ್ಟುಕೊಂಡು, ತಕ್ಷಣವೇ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲು ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.

1. ಜಲಮೂಲಗಳ ಅತಿಕ್ರಮಣವನ್ನು ಗುರುತಿಸುವುದು ಹಾಗೂ ವರದಿ ಸಲ್ಲಿಸುವುದು:

ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಜಲಮೂಲಗಳ ಸಮೀಕ್ಷೆಯನ್ನು ನಡೆಸಿ ಅತಿಕ್ರಮಣಗಳನ್ನು ಗುರುತಿಸುವುದು ಹಾಗೂ ವರದಿಯನ್ನು ಸಲ್ಲಿಸುವುದು. ಈ ವರದಿಯಲ್ಲಿ ಅತಿಕ್ರಮಣದ ವ್ಯಾಪ್ತಿ, ಭಾಗವಹಿಸಿದ ವ್ಯಕ್ತಿಗಳು ಮತ್ತು ಸ್ಥಳೀಯ ಪರಿಸರ ಮತ್ತು ಸಮುದಾಯದ ಮೇಲೆ ಪರಿಣಾಮ ಉಟು ಮಾಡಿರುವ ವಿವರಗಳನ್ನು ತಿಳಿಸುವುದು.

2. ಅತಿಕ್ರಮಣವನ್ನು ತೆರವುಗೊಳಿಸಲು ಕೈಗೊಂಡ ಕ್ರಮಗಳ ವಿವರ:

ಅತಿಕ್ರಮಣಗಳನ್ನು ಗುರುತಿಸಿದ ಕೂಡಲೇ ತೆರವೊಗೊಳಿಸಲು ಕ್ರಮ ಕೈಗೊಳ್ಳುವುದು. ಈ ಕಾರ್ಯಚರಣೆಗಾಗಿ ಸಂಬಂಧಿಸಿದ ಎಲ್ಲಾ ಸ್ಥಳೀಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ತೆರವು ಕಾರ್ಯಚರಣೆಯನ್ನು ಸುಗಮವಾಗಿ ಮತ್ತು ಪರಿಣಾಮಕಾರಿಯಾಗಿ ಕೈಗೊಳ್ಳುವುದು.

3. ಅತಿಕ್ರಮಣವನ್ನು ತೆರವುಗೊಳಿಸಲು ಗಡುವು ನಿಗದಿಪಡಿಸುವುದು:

ಗುರುತಿಸಿದ ಅತಿಕ್ರಮಣಗಳ ತೆರವು ಕಾರ್ಯವನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಿ ಅನುಪಾಲನಾ ವರದಿಯನ್ನು ಪಡೆದುಕೊಳ್ಳುವುದು.

4. ಕಾಲಕಾಲಕ್ಕೆ ಅತಿಕ್ರಮಣಗಳ ತೆರವು ಕಾರ್ಯದ ವರದಿ: ಅತಿಕ್ರಮಣಗಳ ತೆರವು ಪ್ರಕ್ರಿಯೆಯ ಪ್ರಗತಿಯನ್ನು ತಿಂಗಳಿಗೊಮ್ಮೆ ಮೇಲ್ವಿಚಾರಣೆ ನಡೆಸಿ (Monitoring Progress) ತೆರವು ಕಾರ್ಯಚರಣೆ ಕೈಗೊಳ್ಳುವಲ್ಲಿ ಏನಾದರೂ ಸವಾಲುಗಳು ಇದ್ದಲ್ಲಿ, ಅವುಗಳನ್ನು ಸಕ್ಷಮ ಪ್ರಾಧಿಕಾರದ ಗಮನಕ್ಕೆ ತಂದು ಮುಂದಿನ ಕ್ರಮವಹಿಸುವುದು.

ಧೂಮಪಾನವನ್ನು ತ್ಯಜಿಸಲು ನಾನು ರೋಲ್ ಮಾಡೆಲ್ ಅಲ್ಲ: ನಟ ಶಾರುಖ್ ಖಾನ್ | Shah Rukh Khan

ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates

BREAKING : ‘ತೀವ್ರ ಕಳವಳ’ : ಕೆನಡಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರಕ್ಕೆ ‘ಭಾರತ’ ಖಂಡನೆ

Share. Facebook Twitter LinkedIn WhatsApp Email

Related Posts

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

2 Mins Read

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

2 Mins Read

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

2 Mins Read
Recent News

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

State News
KARNATAKA

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ. ಶಾಲೆಯ ವಿದ್ಯಾರ್ಥಿಗಳು ಹೆಚ್ಚು ಅಂಕ ತೆಗೆದವರಿಗೆ ವಿಶೇಷ ಬಹುಮಾನ ನೀಡುವುದಾಗಿ…

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.